TTD Assets: ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು? ಇಲ್ಲಿದೆ ಮಾಹಿತಿ

ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದು. ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ.

TTD Assets: ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು? ಇಲ್ಲಿದೆ ಮಾಹಿತಿ
Tirupati Temple
Follow us
TV9 Web
| Updated By: ನಯನಾ ರಾಜೀವ್

Updated on: Nov 06, 2022 | 11:52 AM

ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದು. ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶ ಬಜೆಟ್ ಗಾತ್ರದಷ್ಟೇ ಕುಬೇರನಾಗಿರುವ ವೆಂಕಟೇಶ್ವರ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಕೋಟಿ ರೂ ಇದೆ ಎಂದು ಘೋಷಿಸಿದೆ.

ದೇಶಾದ್ಯಂತ ಒಟ್ಟು 960 ಕಡೆ 7123 ಎಕರೆ ಭೂಮಿ ಇದೆ, ದೇಗುಲದ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ 15,938 ಕೋಟಿ ರೂ. ಠೇವಣಿ ಇದೆ. ತಿರುಪತಿ ತಿರುಮಲದಲ್ಲಿರುವ ಆಸ್ತಿಯ ಮೌಲ್ಯ 5 ಸಾವಿರ ಕೋಟಿ ರೂ, ವೆಂಕಟೇಶ್ವರ ಸ್ವಾಮಿ ಹೊಂದಿರುವ ಚಿನ್ನದ ದಾಸ್ತಾನು 10.25 ಟನ್ ಎಂದು ಹೇಳಲಾಗಿದೆ.

ಟ್ರಸ್ಟ್ ಹಂಚಿಕೊಂಡ ಬ್ಯಾಂಕ್‌ವಾರು ಹೂಡಿಕೆಯ ಪ್ರಕಾರ, ಟಿಟಿಡಿ 2019 ರಲ್ಲಿ 7339.74 ಟನ್ ಚಿನ್ನದ ಠೇವಣಿ ಹೊಂದಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ 2.9 ಟನ್‌ಗಳನ್ನು ಸೇರಿಸಲಾಗಿದೆ.

ದೇವಸ್ಥಾನದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ (National Bank) 2019ರಲ್ಲಿ 13,025 ಕೋಟಿ ರೂ. ನಿಶ್ಚಿತ ಠೇವಣಿ ಇಡಲಾಗಿತ್ತು. ಕೋವಿಡ್‌ ಸಾಂಕ್ರಾಮಿಕದ ಬಳಿಕ ಈ ಠೇವಣಿ ಗಾತ್ರ 15,938 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ 3 ವರ್ಷಗಳಲ್ಲಿ ಒಟ್ಟು 2,900 ಕೋಟಿ ರು. ಠೇವಣಿ ಹೆಚ್ಚಳವಾಗಿದೆ.

ದೇವಾಲಯಕ್ಕೆ ಚಿನ್ನವನ್ನು ಕಾಣಿಕೆಯಾಗಿ ನೀಡುವ ಜನರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. 2019ರಲ್ಲಿ ಟಿಟಿಡಿ 7.3 ಟನ್‌ ಚಿನ್ನ ಹೊಂದಿತ್ತು.

ಇದಕ್ಕೆ ಈಗ ಇನ್ನೂ 2.9 ಟನ್‌ ಚಿನ್ನ ಸೇರಿಕೊಂಡಿದೆ. ಇದರಿಂದ ಒಟ್ಟಾರೆ ಚಿನ್ನದ ಠೇವಣಿ 10.25 ಟನ್‌ಗೆ ಮೂರೇ ವರ್ಷದಲ್ಲಿ ಏರಿದೆ. ದೇಶದ ವಿವಿಧ ಬ್ಯಾಂಕ್‌ಗಳಲ್ಲಿ ಟಿಟಿಡಿಯು 5,309 ಕೋಟಿ ರೂ. ಮೌಲ್ಯದ ಚಿನ್ನವನ್ನು ಠೇವಣಿ ಇಟ್ಟಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ