ತಿರುಪತಿ ಲಡ್ಡು ವಿವಾದ; ಸುಪ್ರೀಂ ಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ

ತಿರುಪತಿ ದೇಗುಲದ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವಿಚಾರಣೆ ವೇಳೆ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯನ್ನು ಈ ವಿಷಯದಲ್ಲಿ ಮುಂದುವರಿಸಬೇಕೆ ಅಥವಾ ಸ್ವತಂತ್ರ ಸಂಸ್ಥೆಗೆ ತನಿಖೆಯ ಜವಾಬ್ದಾರಿಯನ್ನು ವಹಿಸಬೇಕೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ನ್ಯಾಯಾಲಯ ಕೇಳಿತ್ತು.

ತಿರುಪತಿ ಲಡ್ಡು ವಿವಾದ; ಸುಪ್ರೀಂ ಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ
ತಿರುಪತಿ
Follow us
ಸುಷ್ಮಾ ಚಕ್ರೆ
|

Updated on: Oct 03, 2024 | 5:04 PM

ನವದೆಹಲಿ: ತಿರುಪತಿ ದೇವಸ್ಥಾನದ ಲಡ್ಡು ವಿವಾದ ಇನ್ನೂ ಹಸಿಯಾಗೇ ಇದೆ. ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನಾಳೆಗೆ (ಅಕ್ಟೋಬರ್ 4) ಭಾರತದ ಸುಪ್ರೀಂ ಕೋರ್ಟ್ ಮುಂದೂಡಿದೆ. ಆಂಧ್ರಪ್ರದೇಶದ ತಿರುಮಲದಲ್ಲಿ ವೆಂಕಟೇಶ್ವರನನ್ನು ಪೂಜಿಸಲಾಗುತ್ತದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಾಳೆಗೆ (ಶುಕ್ರವಾರ) ಬೆಳಿಗ್ಗೆ 10.30ಕ್ಕೆ ಮುಂದೂಡುವಂತೆ ಕೋರಿದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಸಿಬಿಐ ತನಿಖೆ ಕೋರಿ ಹೊಸ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಲಾಗಿದೆ.

ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಕೋರಿ ಮಂಗಳವಾರ (ಅಕ್ಟೋಬರ್ 1) ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ. ‘ಗ್ಲೋಬಲ್ ಪೀಸ್ ಇನಿಶಿಯೇಟಿವ್’ ಸಂಘಟನೆಯ ಅಧ್ಯಕ್ಷ ಮತ್ತು ಸಾಮಾಜಿಕ ಕಾರ್ಯಕರ್ತ ಕೆಎ ಪೌಲ್ ಎಂಬುವರು ಈ ಪಿಐಎಲ್ ಅನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು, ತನಿಖೆ ನಡೆಸಲು 9 ಸದಸ್ಯರ ತಂಡ ರಚಿಸಿದ ಆಂಧ್ರ ಸರ್ಕಾರ

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈಗಾಗಲೇ ಈ ವಿಷಯದ ಕುರಿತು 4 ಅರ್ಜಿಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ವೇಳೆ ಸೆಪ್ಟೆಂಬರ್ 30ರಂದು, ದೇವರುಗಳನ್ನು ರಾಜಕೀಯದಿಂದ ದೂರವಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಯೋಗಾಲಯದ ಪರೀಕ್ಷಾ ವರದಿಯು ಸ್ಪಷ್ಟವಾಗಿಲ್ಲ ಮತ್ತು ತಿರಸ್ಕರಿಸಿದ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪ್ರಾಥಮಿಕವಾಗಿ ಸೂಚಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ‘ಲಡ್ಡು ಪ್ರಸಾದ’ ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಸೇರಿದಂತೆ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಡಿರುವ ಆರೋಪಗಳು ಭಕ್ತರಲ್ಲಿ ತೀವ್ರ ಕಳವಳವನ್ನು ಹುಟ್ಟುಹಾಕಿದೆ. ಈ ಪವಿತ್ರ ನೈವೇದ್ಯದ ಪಾವಿತ್ರ್ಯತೆಗೆ ಕಳಂಕ ತಂದಿದೆ ಎಂದು ಪಾಲ್ ಅವರು ತಮ್ಮ ಹೊಸ ಪಿಐಎಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಎಸ್‌ಐಟಿ ತನಿಖೆ ತಾತ್ಕಾಲಿಕವಾಗಿ ಸ್ಥಗಿತ: ಆಂಧ್ರ ಡಿಜಿಪಿ

ಆಂಧ್ರದಲ್ಲಿ ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಈ ತಿಂಗಳ ಆರಂಭದಲ್ಲಿ ಹೇಳಿಕೊಂಡಿದ್ದರು. ಇದು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ