AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Special Darshan Ticket:: ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ

Tirumala Tirupati Devasthanam: ಇಂದು (ಏ.25)ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ.

TTD Special Darshan Ticket:: ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 11:17 AM

Share

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (TTD) ಇಂದು (ಏ.25)ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ವಿಶೇಷ ಪ್ರವೇಶ ಟಿಕೆಟ್‌ಗಳು ಮಾತ್ರವಲ್ಲದೆ, ಟಿಟಿಡಿಯು ವೆಬ್​​ಸೈಟ್​​ನಲ್ಲಿ ತಿಳಿಸಿರುವಂತೆ ಈ ತಿಂಗಳಿನಲ್ಲಿ ತಿರುಮಲದಲ್ಲಿ  ಹೆಚ್ಚುವರಿ ವಸತಿ ಕೊಠಡಿಗಳನ್ನು ಬಿಡುಗಡೆ ಮಾಡಲಿದೆ. ಮೇ ಮತ್ತು ಜೂನ್‌ನಲ್ಲಿ ತಿರುಮಲಗೆ ಭೇಟಿ ನೀಡಬೇಕಾದರೆ ಟೋಕನ್ ಪಡೆಯಲು ಭಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಕಲ್ಯಾಣೋತ್ಸವ, ಉಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವಂ ಮತ್ತು ಸಹಸ್ರ ದೀಪಾಲಂಕಾರ ಸೇವಾ ಟೋಕನ್‌ಗಳು ಟಿಟಿಡಿ ವೆಬ್‌ಸೈಟ್‌ನಲ್ಲಿ ಸುಲಭವಾಗಿ ಲಭ್ಯವಿದ್ದು, ಇವುಗಳನ್ನು ಬುಕ್ ಮಾಡಲು ಭಕ್ತರು ಟಿಟಿಡಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ.

ಇಲ್ಲಿ ನೀಡಿರುವ ಅಧಿಕೃತ ವೆಬ್‌ಸೈಟ್ ಲಿಂಕ್​​ನಲ್ಲಿ ಜನರು ಪರಿಶೀಲಿಸಬಹುದು: ಇಲ್ಲಿ ಕ್ಲಿಕ್ ಮಾಡಿ 

ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ಏಪ್ರಿಲ್ 1 ರಿಂದ ವೆಂಕಟೇಶ್ವರನ ಬೆಟ್ಟಕ್ಕೆ ಚಾರಣ ಮಾಡುವ ಭಕ್ತರಿಗೆ ದಿವ್ಯ ದರ್ಶನ ಟೋಕನ್‌ಗಳ ವಿತರಣೆಯನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಒಂದು ವಾರದವರೆಗೆ ಪ್ರಾಯೋಗಿಕ ಆಧಾರದ ಮೇಲೆ ಟೋಕನ್‌ಗಳನ್ನು ನೀಡಲಾಗಿತ್ತು ಎಂದು ಆಡಳಿತ ಮಂಡಳಿ ತಿಳಿಸಿದೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಎ.ವಿ. ಧರ್ಮಾ ರೆಡ್ಡಿ ಅವರು, ಭಕ್ತರಿಗೆ ದಿವ್ಯ ದರ್ಶನ ಟೋಕನ್‌ಗಳ ವಿತರಣೆಯನ್ನು ಪುನರಾರಂಭಿಸಲು ನಿರ್ಧರಿಸಿದ್ದೇವೆ ಹಾಗೂ ಬೇಸಿಗೆಯಲ್ಲಿ ತಿರುಮಲಕ್ಕೆ ಬರುವ ಭಕ್ತದಿಗಳಿಗೆ ಅನೇಕ ರೀತಿಯ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದರು.

ಇದನ್ನೂ ಓದಿ:Tirupati Temple: ವಿಪ್ರೋ, ನೆಸ್ಲೆಗಿಂತಲೂ ಶ್ರೀಮಂತವಾಗಿದೆ ತಿರುಪತಿ ದೇವಸ್ಥಾನ; ತಿಮ್ಮಪ್ಪನ ಆಸ್ತಿ ಎಷ್ಟು ಗೊತ್ತಾ? 

ಸಾಮಾನ್ಯವಾಗಿ, ಏಪ್ರಿಲ್ 15ರಿಂದ ಜುಲೈ 15ರ ನಡುವೆ ಯಾತ್ರಿಕರ ಸಂಖ್ಯೆ ಗರಿಷ್ಠವಾಗಿರುತ್ತದೆ. ವಿಐಪಿ ಬ್ರೇಕ್ ದರ್ಶನ ಮತ್ತು ಎಸ್‌ಇಡಿ (ತಲಾ ₹ 300 ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳು) ಟಿಕೆಟ್‌ಗಳ ವಿತರಣೆಯನ್ನು ಕಡಿಮೆ ಮಾಡಲು ಟಿಟಿಡಿ ನಿರ್ಧರಿಸಿದೆ, ಶ್ರೀವಾಣಿ, ಪ್ರವಾಸೋದ್ಯಮ ಮತ್ತು ವರ್ಚುವಲ್ ಸೇವಾ ಕೋಟಾಗಳನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಇದೆಲ್ಲವೂ ಸಾಮಾನ್ಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಕ್ರಮದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ. ಅದಲ್ಲದೆ ಸಾಮಾನ್ಯ ಭಕ್ತರಿಗೆ ತ್ವರಿತ ದರ್ಶನಕ್ಕೆ ಅನುಕೂಲವಾಗುವಂತೆ ದೇವಾಲಯದ ಆಡಳಿತದೊಂದಿಗೆ ಸಹಕರಿಸುವಂತೆ ಟಿಟಿಡಿ ಅಧ್ಯಕ್ಷರು ವಿಐಪಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Tue, 25 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ