Delhi: ವಕೀಲರ ಮಧ್ಯೆ ವಿವಾದ, ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ

ವಕೀಲರ ಮಧ್ಯೆ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ದೆಹಲಿ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲೇ ಗುಂಡಿನ ದಾಳಿ ನಡೆದಿದೆ.

Delhi: ವಕೀಲರ ಮಧ್ಯೆ ವಿವಾದ, ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on:Jul 05, 2023 | 2:24 PM

ವಕೀಲರ ಮಧ್ಯೆ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ದೆಹಲಿ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲೇ ಗುಂಡಿನ ದಾಳಿ ನಡೆದಿದೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ವಕೀಲರ ನಡುವೆ ವಾಗ್ವಾದ ನಡೆದಿದೆ, ಬಳಿಕ ವಾದ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಕೋರ್ಟ್​ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ.

ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ಪ್ರತಿಪಾದಿಸಿದ್ದಾರೆ. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಈ ರೀತಿಯ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಅವರು ಹೇಳಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿನ್ನಲೆಯಲ್ಲಿ ದೊಡ್ಡ ಕಿರುಚಾಟ ಕೇಳಿಬರುತ್ತಿದ್ದಂತೆ ವಕೀಲರೊಬ್ಬರು ಬಂದೂಕು ಹಿಡಿದು ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:14 pm, Wed, 5 July 23