ವಕೀಲರ ಮಧ್ಯೆ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ದೆಹಲಿ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲೇ ಗುಂಡಿನ ದಾಳಿ ನಡೆದಿದೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ವಕೀಲರ ನಡುವೆ ವಾಗ್ವಾದ ನಡೆದಿದೆ, ಬಳಿಕ ವಾದ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ.
ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ಪ್ರತಿಪಾದಿಸಿದ್ದಾರೆ. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಈ ರೀತಿಯ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಅವರು ಹೇಳಿದರು.
Delhi | A firing incident reported at Tis Hazari Court premises, no injuries reported. Police say that this happened after an argument among lawyers.
(Note: Abusive language)
(Video Source: A lawyer) pic.twitter.com/MMPOQwpWaZ— ANI (@ANI) July 5, 2023
ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿನ್ನಲೆಯಲ್ಲಿ ದೊಡ್ಡ ಕಿರುಚಾಟ ಕೇಳಿಬರುತ್ತಿದ್ದಂತೆ ವಕೀಲರೊಬ್ಬರು ಬಂದೂಕು ಹಿಡಿದು ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಸುದ್ದಿಯನ್ನು ಇಂಗ್ಲಿಷ್ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:14 pm, Wed, 5 July 23