ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ

| Updated By: guruganesh bhat

Updated on: Jun 05, 2021 | 6:03 PM

ಪಶ್ಚಿಮ ಬಂಗಾಳದಿಂದ ಆಚೆಗೂ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ. ಉತ್ತರ ಪ್ರದೇಶ, ಪಂಜಾಬ್ ಮತ್ತು ಗುಜರಾತ್​ಗಳಲ್ಲಿ ತೃಣಮೂಲ ಕಾಂಗ್ರೆಸ್​ ಸ್ಪರ್ಧಿಸುವ ನಿರೀಕ್ಷೆಗಳನ್ನಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ.

ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ
ಅಭಿಷೇಕ್​ ಬ್ಯಾನರ್ಜಿ
Follow us on

ಕೋಲ್ಕತ್ತಾ: ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ಲೋಕಸಭಾ ಸಂಸದ ಅಭಿಷೇಕ್ ಬ್ಯಾನರ್ಜಿ ನೇಮಕಗೊಂಡಿದ್ದಾರೆ. ಈವರೆಗೂ ಪಕ್ಷದ ಯುವ ಘಟಕದ ಅಧ್ಯಕ್ಷರಾಗಿದ್ದ ಅಭಿಷೇಕ್ ಬ್ಯಾನರ್ಜಿ, ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಭಡ್ತಿ ಪಡೆದಿದ್ದಾರೆ. ತೃಣಮೂಲ ಕಾಂಗ್ರೆಸ್​ನ ಪ್ರಮುಖ ನಾಯಕರು ಇಂದು (ಮೇ 5) ಸಭೆ ನಡೆಸಿದ ನಂಥರ ಈ ಮಹತ್ವದ ವಿಷಯವನ್ನು ಘೋಷಿಸಿದ್ದಾರೆ. ಜತೆಗೆ, ಸಚಿವರುಗಳ ಕಾರಿನ ಮೇಲಿನ ಕೆಂಪು ಸೈರನ್ ದೀಪವನ್ನು ಸಹ ತೆರವುಗೊಳಿಸಲು ಟಿಎಂಸಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಷ್ಟು ದಿನ ಯುವ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಷೇಕ್ ಬ್ಯಾನರ್ಜಿ ಹುದ್ದೆಗೆ ನಟಿ ಸಾಯೋನಿ ಘೋಷ್ ನೇಮಕೊಂಡಿದ್ದಾರೆ. ಇತ್ತೀಚಿಗಷ್ಟೇ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಸಾಯೋನಿ ಘೋಷ್​ಗೆ ಇದೀಗ ಮಹತ್ವದ ಹುದ್ದೆಯೇ ದೊರೆತಿದೆ. ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಲೋಕಸಭಾ ಸಂಸದೆ ಕಕೋಲಿ ಘೋಷ್ ನೇಮಕವಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದನ್ನು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಅಲ್ಲದೇ, ಪಶ್ಚಿಮ ಬಂಗಾಳದಿಂದ ಆಚೆಗೂ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ. ಉತ್ತರ ಪ್ರದೇಶ, ಪಂಜಾಬ್ ಮತ್ತು ಗುಜರಾತ್​ಗಳಲ್ಲಿ ತೃಣಮೂಲ ಕಾಂಗ್ರೆಸ್​ ಸ್ಪರ್ಧಿಸುವ ನಿರೀಕ್ಷೆಗಳನ್ನಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಅಭಿಷೇಕ್ ಬ್ಯಾನರ್ಜಿ ಅವರ ಶ್ರಮ ಮತ್ತು ಯೋಜನೆಗಳೇ ಕಾರಣ ಎಂಬ ಅಭಿಪ್ರಾಯ ಟಿಎಂಸಿ ಪಕ್ಷದಲ್ಲಿದೆ.

ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಾಗಿ ಸುದೀಪ್ ಬಂದೋಪಾಧ್ಯಾಯ ಮತ್ತು ಡೆರೆಕ್ ಓಬ್ರಿಯಾನ್ ಅವರುಗಳೇ ಮರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆ: ಕೊವಿಡ್ ಕೇರ್ ಸೆಂಟರ್​ಗಳಿಗೆ ಸಸಿ ವಿತರಿಸಿದ ಧಾರವಾಡ ಅರಣ್ಯ ಇಲಾಖೆ

CET 2021: ಪಿಯು ಪರೀಕ್ಷೆ ರದ್ದುಗೊಂಡರೂ ಸಿಇಟಿ ನಡೆಯಲಿದೆ: ಡಿಸಿಎಂ ಅಶ್ವತ್ಥ್ ನಾರಾಯಣ

(TMC appoints Lok Sabha mp CM Mamata Banerjee’s nephew Abhishek Banerjee as TMC National General Secretary)