AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagaland Firing: ನಾಗಾಲ್ಯಾಂಡ್​ ಫೈರಿಂಗ್​ ಪ್ರಕರಣದ ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಇಂದು ಘಟನಾಸ್ಥಳಕ್ಕೆ ಭೇಟಿಕೊಡಲಿದೆ ಟಿಎಂಸಿ ನಿಯೋಗ

ನಾಗಾಲ್ಯಾಂಡ್ ದುರ್ಘಟನೆಯ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದರು. ನಾಗಾಲ್ಯಾಂಡ್​​ನಲ್ಲಿ ನಡೆದ ದುರ್ಘಟನೆಯಿಂದ ಆತಂಕ, ನೋವಾಗಿದೆ.

Nagaland Firing: ನಾಗಾಲ್ಯಾಂಡ್​ ಫೈರಿಂಗ್​ ಪ್ರಕರಣದ ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಇಂದು ಘಟನಾಸ್ಥಳಕ್ಕೆ ಭೇಟಿಕೊಡಲಿದೆ ಟಿಎಂಸಿ ನಿಯೋಗ
ಮಮತಾ ಬ್ಯಾನರ್ಜಿ
TV9 Web
| Updated By: Lakshmi Hegde|

Updated on: Dec 06, 2021 | 10:50 AM

Share

ನಾಗಾಲ್ಯಾಂಡ್​​ನ ಮೋನ್​ ಜಿಲ್ಲೆಯಲ್ಲಿ ನಿನ್ನೆ ನಡೆದ ಫೈರಿಂಗ್ (Nagaland Firing)​ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅಲ್ಲಿ ಉದ್ವಿಗ್ನ ವಾತಾವರಣವಿದ್ದು, ಮೋನ್​ ಜಿಲ್ಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್​​ನ 5 ಜನರ ನಿಯೋಗವೊಂದು ಇಂದು ಮೋನ್​ ಜಿಲ್ಲೆಯಲ್ಲಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ನಿರ್ಧರಿಸಿದೆ. ಹಾಗೇ, ಈ ನಿಯೋಗ ಓಟಿಂಗ್​ ಗ್ರಾಮಕ್ಕೆ ಭೇಟಿ ನೀಡಿ, ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳ ಜನರೊಂದಿಗೆ ಮಾತುಕತಡೆ ನಡೆಸಲಿದೆ ಎಂದು ಹೇಳಲಾಗಿದೆ.  ಈ ನಿಯೋಗದಲ್ಲಿ ಟಿಎಂಸಿ ಸಂಸದ ಪ್ರಸುನ್​ ಬ್ಯಾನರ್ಜಿ, ಸುಷ್ಮಿತಾ ದೇವ್​, ಮುಖಂಡರಾದ ಅಪರೂಪಾ ಪೊಡ್ಡಾರ್​, ಸಂತನು ಸೇನ್​ ಮತ್ತು ಟಿಎಂಸಿ ವಕ್ತಾರ ಬಿಸ್ವಜಿತ್​ ದೇವ್​ ಇರಲಿದ್ದಾರೆ. 

ನಾಗಾಲ್ಯಾಂಡ್​​ನಲ್ಲಿ ನಿನ್ನೆ ಭದ್ರತಾ ಸಿಬ್ಬಂದಿಯ ಗುಂಡಿನ ದಾಳಿಗೆ 14 ನಾಗರಿಕರು ಮೃತಪಟ್ಟಿದ್ದರು. ಹಾಗೇ, ಈ ವೇಳೆ ಒಬ್ಬ ಯೋಧ ಕೂಡ ಮೃತಪಟ್ಟಿದ್ದಾರೆ. ದುರ್ಘಟನೆಯ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದರು. ನಾಗಾಲ್ಯಾಂಡ್​​ನಲ್ಲಿ ನಡೆದ ದುರ್ಘಟನೆಯಿಂದ ಆತಂಕ, ನೋವಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ನಾನು ಆಶಿಸುತ್ತೇನೆ. ಈ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಅವರು ಟ್ವೀಟ್ ಮಾಡಿದ್ದರು.

ಆಗಿದ್ದೇನು? ಓಟಿಂಗ್​ ಗ್ರಾಮದ  ಕೂಲಿ ಕಾರ್ಮಿಕರು ಕೆಲಸಕ್ಕೆಂದು ಸಮೀಪದ ಕಲ್ಲಿದ್ದಲು ಗಣಿಗೆ ಹೋಗಿದ್ದರು. ಸಂಜೆ ಕೆಲಸ ಮುಗಿದ ಬಳಿಕ ಒಂದು ಪಿಕ್​ ಅಪ್​ ವಾಹನದಲ್ಲಿ ಅವರೆಲ್ಲ ಮನೆಗೆ ಮರಳುತ್ತಿದ್ದರು. ಆದರೆ ಭದ್ರತಾ ಪಡೆಯ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.  ಇವರು ಭದ್ರತಾ ಪಡೆಯ ದಾಳಿಗೆ ಬಲಿಯಾಗಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಗ್ರಾಮದ ಸ್ವಯಂಸೇವಕರು ಸಿಟ್ಟಿಗೆದ್ದು, ಅವರ ವಾಹನಗಳಿಗೆ ಬೆಂಕಿ ಹಾಕಿದ್ದಾರೆ. ಗಲಾಟೆ ಮಾಡಿದ್ದಾರೆ. ಸೇನೆಯ ಯೋಧರು ಉದ್ದೇಶ ಪೂರ್ವಕವಾಗಿ ಈ ಕೂಲಿ ಕಾರ್ಮಿಕರನ್ನು ಕೊಂದಿದ್ದಲ್ಲ ಎಂದು ಸೇನೆಯ ಅಸ್ಸಾಂ ರೈಫಲ್ಸ್​ ಹೇಳಿಕೆ ನೀಡಿದೆ. ಮ್ಯಾನ್ಮಾರ್‌ನಲ್ಲಿ ನೆಲೆಗೊಂಡಿರುವ ನಿಷೇಧಿತ ಸಂಘಟನೆ ಎನ್‌ಎಸ್‌ಸಿಎನ್ (ಕೆ) ನ ಯುಂಗ್ ಆ್ಯಂಗ್​ ಬಣದ ಉಗ್ರಗಾಮಿಗಳ ಗುಂಪೊಂದರ ಚಲನವಲನ ಈ ಪ್ರದೇಶದಲ್ಲಿ ಹೆಚ್ಚಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಅದರ ಅನ್ವಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಆದರೆ ದುರದೃಷ್ಟಕ್ಕೆ ಕೂಲಿಕಾರ್ಮಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ. ಹಾಗೇ, ಈ ಕೃತ್ಯದ ಬಗ್ಗೆ ವಿಷಾದವಿದೆ ಎಂದೂ ಅಸ್ಸಾಂ ರೈಫಲ್ಸ್​ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Babri Demolition Anniversary ಮಸೀದಿಯಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪಿಸುವ ಬೆದರಿಕೆ; ಮಥುರಾದಲ್ಲಿ ಭಾರೀ ಭದ್ರತೆ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ