ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ

ಟಿಎಂಸಿ ರಾಷ್ಟ್ರಪತಿ, ಬುಡಕಟ್ಟು ಜನಾಂಗದವರನ್ನು ಅವಮಾನಿಸಿದೆ, ಅವರ ಆಳ್ವಿಕೆ ಅಂತ್ಯಗೊಳ್ಳುತ್ತಿದೆ. ಬಂಗಾಳ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಮಾಡುತ್ತಿದೆ. ಅವಕಾಶಗಳನ್ನು ಹುಡುಕಿಕೊಂಡು ಅನೇಕ ಯುವಕರು ಬಂಗಾಳವನ್ನು ತೊರೆಯುವಂತಾಗಿದೆ. ಬಂಗಾಳದ ಯುವಕರು ವಲಸೆಯ ಶಾಪದಿಂದ ಬಳಲುತ್ತಿದ್ದಾರೆ. ಅವರಿಗೆ ಪದವಿಗಳು ಅಥವಾ ಉದ್ಯೋಗಗಳು ಸಿಗುತ್ತಿಲ್ಲ ಎಂದು ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ
Pm Modi In West Bengal
Image Credit source: PTI

Updated on: Mar 14, 2026 | 8:17 PM

ನವದೆಹಲಿ, ಮಾರ್ಚ್ 14: ಇನ್ನೊಂದು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂದು ಕೊಲ್ಕತ್ತಾಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi in West Bengal) 18,680 ಕೋಟಿ ರೂ. ಮೌಲ್ಯದ ಸಂಪರ್ಕ ಯೋಜನೆಗಳನ್ನು ಅನಾವರಣಗೊಳಿಸಿದರು. ಭಾರತದ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬಂಗಾಳದಲ್ಲಿ ಬರೆಯಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಪ್ರಧಾನಿ ಮೋದಿ ಟಿಎಂಸಿ ಸರ್ಕಾರವನ್ನು ಟೀಕಿಸಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು, “ಈ ದಬ್ಬಾಳಿಕೆಯ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ, ಬದಲಾವಣೆಯ ಬಿರುಗಾಳಿಯನ್ನು ತಡೆಯಲು ಸಾಧ್ಯವಾಗುವುದಿಲ್ಲ. ಮೊದಲು ಕಾಂಗ್ರೆಸ್, ನಂತರ ಕಮ್ಯುನಿಸ್ಟರು ಮತ್ತು ಈಗ ಟಿಎಂಸಿ, ಈ ಪಕ್ಷಗಳು ಒಂದರ ನಂತರ ಒಂದರಂತೆ ಬಂದು ತಮ್ಮ ಜೇಬುಗಳನ್ನು ತುಂಬಿಸಿಕೊಂಡವು. ಆದರೆ ಬಂಗಾಳದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲೇ ಇಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯದ ಆರೋಪ ಹೊತ್ತಿರುವ ಟಿಎಂಸಿ ನಾಯಕರನ್ನು ಬಿಡುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಟಿಎಂಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಗೌರವ ತೋರಿದೆ. ಕೆಲವೇ ದಿನಗಳ ಹಿಂದೆ, ನಮ್ಮ ದೇಶದ ರಾಷ್ಟ್ರಪತಿ, ಆದಿವಾಸಿ ಸಮುದಾಯದ ಮಗಳಾದ ದ್ರೌಪದಿ ಮುರ್ಮು ಅವರು ಬಂಗಾಳಕ್ಕೆ ಬಂದಿದ್ದರು. ಅವರು ಸಂತಾಲ್ ಆದಿವಾಸಿ ಸಂಪ್ರದಾಯದ ಪವಿತ್ರ ಉತ್ಸವದಲ್ಲಿ ಭಾಗವಹಿಸಬೇಕಿತ್ತು. ಆದರೆ ದುರಹಂಕಾರದಲ್ಲಿ ಮುಳುಗಿರುವ ಈ ನಿರ್ದಯ ಸರ್ಕಾರವು ಆ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಅವ್ಯವಸ್ಥೆಗೊಳಪಡಿಸಿತು” ಎಂದು ಪ್ರಧಾನಿ ಮೋದಿ ಹೇಳಿದರು.

“ಕೇಂದ್ರ ಸರ್ಕಾರ ಪ್ರಾರಂಭಿಸಿದ ಹಲವಾರು ಕಲ್ಯಾಣ ಯೋಜನೆಗಳನ್ನು ತಡೆಯುವ ಮೂಲಕ ತೃಣಮೂಲ ಕಾಂಗ್ರೆಸ್ ಬಂಗಾಳ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಡೆಯುತ್ತಿದೆ. ಟಿಎಂಸಿ ತಾನೂ ಕೆಲಸ ಮಾಡುವುದಿಲ್ಲ, ಇತರರಿಗೂ ಕೆಲಸ ಮಾಡಲು ಬಿಡುವುದಿಲ್ಲ. ಜನರಿಗೆ ಪ್ರಯೋಜನಕಾರಿಯಾಗುವ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸುತ್ತಿದೆ” ಎಂದು ಪ್ರಧಾನಿ ಮೋದಿ ಆರೋಪಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us