AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃಣಮೂಲ ಸಂಸ್ಥಾಪನಾ ದಿನ; ಜನರ ಹಕ್ಕುಗಳನ್ನು ಕಾಪಾಡುವ ಹೋರಾಟ ಮುಂದುವರಿಸುವೆ: ಮಮತಾ ಬ್ಯಾನರ್ಜಿ

ನಿಮ್ಮ ಅವಿರತ ಬೆಂಬಲದ ಬಲದ ಮೇಲೆ ನಾವು ಈ ಮಹಾನ್ ಪ್ರಜಾಪ್ರಭುತ್ವದ ದೇಶದಲ್ಲಿ ಪ್ರತಿಯೊಬ್ಬರಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ. ಯಾವುದೇ ದುಷ್ಟ ಶಕ್ತಿಗೆ ಶರಣಾಗುವುದಿಲ್ಲ. ಎಲ್ಲಾ ಭಯೋತ್ಪಾದನೆಯನ್ನು ವಿರೋಧಿಸಿ ನಾವು ನಮ್ಮ ದೇಶದ ಸಾಮಾನ್ಯ ಜನರಿಗಾಗಿ ನಮ್ಮ ಜೀವಮಾನದ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತೃಣಮೂಲ ಸಂಸ್ಥಾಪನಾ ದಿನ; ಜನರ ಹಕ್ಕುಗಳನ್ನು ಕಾಪಾಡುವ ಹೋರಾಟ ಮುಂದುವರಿಸುವೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 01, 2024 | 2:42 PM

Share

ಕೋಲ್ಕತ್ತಾ ಜನವರಿ 01: ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನದ(TMC Foundation Day) ಸಂದರ್ಭದ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಟಿಎಂಸಿ ಕಾರ್ಯಕರ್ತರನ್ನು ಅಭಿನಂದಿಸಿದ್ದು, ಯಾವುದೇ ದುಷ್ಟ ಶಕ್ತಿಗಳನ್ನು ವಿರೋಧಿಸಲು ಮತ್ತು ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಾಪಾಡುವ ನಿರಂತರ ಹೋರಾಟದಲ್ಲಿ ನಿರಂತರ ಬದ್ಧತೆಯನ್ನು ಒತ್ತಿ ಹೇಳಿದರು. ಜನವರಿ 1, 1998 ರಂದು ಟಿಎಂಸಿ ರಚನೆಯ ಮಹತ್ವದ ಕುರಿತು ಮಾತನಾಡಿದ ಮಮತಾ ಬ್ಯಾನರ್ಜಿ, ಮಾತೃಭೂಮಿಯನ್ನು ಗೌರವಿಸಲು, ರಾಜ್ಯದ ಹಿತಾಸಕ್ತಿಗಳನ್ನು ಎತ್ತಿಹಿಡಿಯಲು ಮತ್ತು ಜನಸಾಮಾನ್ಯರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಪಕ್ಷ ಹೋರಾಡುತ್ತದೆ ಎಂದಿದ್ದಾರೆ.

“ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಬೆಂಬಲಿಗರ ಸಮರ್ಪಣೆ ಮತ್ತು ಸ್ವಯಂ ತ್ಯಾಗವನ್ನು ನಾನು ವಿನಮ್ರವಾಗಿ  ಗೌರವಿಸುತ್ತೇನೆ. ಇಂದು ಟಿಎಂಸಿ ಕುಟುಂಬವು ಎಲ್ಲರ ಪ್ರೀತಿ ಮತ್ತು  ವಾತ್ಸಲ್ಯದಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಮಮತಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ. ಅದೇವೇಳೆ ದೇಶದ ಸಾಮಾನ್ಯ ಜನರಿಗಾಗಿ ತಮ್ಮ ಹೋರಾಟದಲ್ಲಿ ಮುಂದುವರಿಸುವುದಾಗಿ ಅವರು ವಾಗ್ದಾನ ಮಾಡಿದರು.

ನಿಮ್ಮ ಅವಿರತ ಬೆಂಬಲದ ಬಲದ ಮೇಲೆ ನಾವು ಈ ಮಹಾನ್ ಪ್ರಜಾಪ್ರಭುತ್ವದ ದೇಶದಲ್ಲಿ ಪ್ರತಿಯೊಬ್ಬರಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ. ಯಾವುದೇ ದುಷ್ಟ ಶಕ್ತಿಗೆ ಶರಣಾಗುವುದಿಲ್ಲ. ಎಲ್ಲಾ ಭಯೋತ್ಪಾದನೆಯನ್ನು ವಿರೋಧಿಸಿ ನಾವು ನಮ್ಮ ದೇಶದ ಸಾಮಾನ್ಯ ಜನರಿಗಾಗಿ ನಮ್ಮ ಜೀವಮಾನದ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಟಿಎಂಸಿ ಮುಖ್ಯಸ್ಥೆ ಹೇಳಿದ್ದಾರೆ.

1998 ರಲ್ಲಿ ಕಾಂಗ್ರೆಸ್‌ನಿಂದ ಬೇರ್ಪಟ್ಟ ಟಿಎಂಸಿ 2001 ಮತ್ತು 2006 ರಲ್ಲಿ ಎರಡು ವಿಫಲ ಪ್ರಯತ್ನಗಳ ನಂತರ 2011 ರಲ್ಲಿ ಎಡರಂಗದ ಆಡಳಿತವನ್ನು ಸೋಲಿಸುವ ಮೂಲಕ ಅಧಿಕಾರಕ್ಕೆ ಏರಿತ್ತು.

ಇದನ್ನೂ ಓದಿ:ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಬ್ಯಾನರ್ಜಿ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಅದ್ಭುತ ಗೆಲುವಿನತ್ತ ಮುನ್ನಡೆಸಿದ್ದು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್