ಅಂಬೇಡ್ಕರ್ ವಿವಾದ; ಅಮಿತ್ ಶಾ ವಿರುದ್ಧ ಸಂಸತ್ತಿನಲ್ಲಿ ಟಿಎಂಸಿಯ ಡೆರೆಕ್ ಒಬ್ರಿಯಾನ್ ವಿಶೇಷ ಹಕ್ಕು ಮಂಡನೆ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ವಿರುದ್ಧ ಟಿಎಂಸಿಯ ಡೆರೆಕ್ ಒಬ್ರಿಯಾನ್ ವಿಶೇಷ ಹಕ್ಕು ಮಂಡಿಸಿದ್ದಾರೆ. ಅಂಬೇಡ್ಕರ್ ಕುರಿತಾದ ಟೀಕೆಗಳು ಮತ್ತು ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಇಂದು ದೇಶದಾದ್ಯಂತ ಎಲ್ಲಾ ರಾಜಭವನಗಳಲ್ಲಿ ಮೆರವಣಿಗೆ ನಡೆಸಲಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ಅಂಬೇಡ್ಕರ್ ವಿವಾದ; ಅಮಿತ್ ಶಾ ವಿರುದ್ಧ ಸಂಸತ್ತಿನಲ್ಲಿ ಟಿಎಂಸಿಯ ಡೆರೆಕ್ ಒಬ್ರಿಯಾನ್ ವಿಶೇಷ ಹಕ್ಕು ಮಂಡನೆ
Ambedkar Row Congress Protest
Follow us
ಸುಷ್ಮಾ ಚಕ್ರೆ
|

Updated on: Dec 18, 2024 | 4:29 PM

ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಇಂದು ವಿಶೇಷ ಹಕ್ಕು ಮಂಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸವಲತ್ತು ಉಲ್ಲಂಘನೆಯ ಆರೋಪದಲ್ಲಿ ರಾಜ್ಯಗಳ ಕೌನ್ಸಿಲ್‌ನಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 187ರ ಅಡಿಯಲ್ಲಿ ವಿಶೇಷಾಧಿಕಾರದ ಪ್ರಶ್ನೆಯೊಂದಕ್ಕೆ ನೋಟಿಸ್ ಸಲ್ಲಿಸಿದ್ದಾರೆ.

ಡಿಸೆಂಬರ್ 17ರಂದು ನಡೆದ ಸಂಸತ್ತಿನ ಅಧಿವೇಶನದಲ್ಲಿ ಅಮಿತ್ ಶಾ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ. ಇದು ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಂಪರೆ ಮತ್ತು ಸಂಸತ್ತಿನ ಘನತೆಗೆ ಧಕ್ಕೆ ತರುತ್ತದೆ ಎಂದು ಒಬ್ರಿಯಾನ್ ಹೇಳಿದ್ದಾರೆ.

ಇದನ್ನೂ ಓದಿ: ಈ ಕುತಂತ್ರದಿಂದ ಕಾಂಗ್ರೆಸ್​ನ ದುಷ್ಕೃತ್ಯಗಳನ್ನು ಮರೆಮಾಚಲಾಗದು, ಅಂಬೇಡ್ಕರ್ ವಿವಾದ ಕುರಿತು ಮೋದಿ ಮಾತು

ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಫ್ಯಾಶನ್ ಆಗಿದೆ. ಒಂದುವೇಳೆ ಅವರು ಅಂಬೇಡ್ಕರ್ ಬದಲು ಈ ರೀತಿ ದೇವರ ಹೆಸರು ಜಪ ಮಾಡಿದ್ದರೆ 7 ಜನ್ಮಗಳಲ್ಲೂ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ವಿಪಕ್ಷ ಸದಸ್ಯರ ಟೀಕೆಗೆ ಕಾರಣವಾಯಿತು.

ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ:

ಹಿಂದಿನ ದಿನ, ರಾಜ್ಯಸಭೆಯಲ್ಲಿ ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಹೇಳಿಕೆಗಾಗಿ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿತು. ಈ ಹೇಳಿಕೆಗಾಗಿ ಅಮಿತ್ ಶಾ ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆ ಯಾಚಿಸಬೇಕು ಎಂದು ವಿರೋಧ ಪಕ್ಷವು ಒತ್ತಾಯಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿತು; ನೆಹರು, ಇಂದಿರಾ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಅಮಿತ್ ಶಾ ಅವರ ಹೇಳಿಕೆಯು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಿದೆ. ಇದು ಮನುಸ್ಮೃತಿಯಿಂದ ಮಾರ್ಗದರ್ಶಿಸಲ್ಪಟ್ಟ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ನಿಜವಾದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!