ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯ​ ಗುಂಡಿಕ್ಕಿ ಹತ್ಯೆ

|

Updated on: Jan 07, 2024 | 3:49 PM

ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕೃತ್ಯವೆಸಗಿ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸತ್ಯನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯ​ ಗುಂಡಿಕ್ಕಿ ಹತ್ಯೆ
Follow us on

ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕೃತ್ಯವೆಸಗಿ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸತ್ಯನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಚೌಧರಿ ಮುರ್ಷದಾಬಾದ್​ನ ಬಹರಂಪುರ ನಿವಾಸಿ, ಆ ಕ್ಷೇತ್ರದ ಪ್ರಭಾವಿ ನಾಯಕರಾಗಿದ್ದಾರೆ. ಭಾನುವಾರ ಮಧ್ಯಾಹ್ನ ಸತ್ಯನ್ ಮನೆ ಸಮೀಪ ಫ್ಲ್ಯಾಟ್‌ನ ಕೆಳಗಿರುವ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸತ್ಯನ್‌ನ ಮೇಲೆ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ತೃಣಮೂಲ ನಾಯಕ ಸ್ಥಳದಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿದ್ದರು.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳ: ಟಿಎಂಸಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು; ಸಿಪಿಎಂ ಕಾರ್ಯಕರ್ತರ ಮನೆಗೆ ಬೆಂಕಿ

ಕೂಡಲೇ ಅವರನ್ನು ರಕ್ಷಿಸಿ ಬಹರಂಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು. 3 ವೈದ್ಯರ ಮೇಲ್ವಿಚಾರಣೆಯಲ್ಲಿ ತಕ್ಷಣವೇ ಶಸ್ತ್ರಚಿಕಿತ್ಸೆ ಪ್ರಾರಂಭವಾಯಿತು. ಆದರೆ ಉಸಿರು ಚೆಲ್ಲಿದ್ದಾರೆ. ಈ ಘಟನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರವ ಮೌನ ಮನೆ ಮಾಡಿದೆ. ಘಟನೆಯಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:49 pm, Sun, 7 January 24