ನವದೆಹಲಿ: ಕೇಂದ್ರದ ನಿಧಿಗೆ ಸಂಬಂಧಿಸಿದಂತೆ ದೆಹಲಿ ಪ್ರತಿಭಟನೆಯ 2ನೇ ದಿನವಾದ ಇಂದು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಮತ್ತು ನಾಯಕರನ್ನು ಪೊಲೀಸರು ನಿರ್ದಯವಾಗಿ ಎಳೆದೊಯ್ದು ಬಂಧಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಆರೋಪಿಸಿದೆ. ಸಚಿವರನ್ನು ಭೇಟಿಯಾಗುವಂತೆ ಒತ್ತಾಯಿಸಿ ಇಲ್ಲಿನ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಚೇರಿಯಲ್ಲಿ ಇಂದು (ಮಂಗಳವಾರ) ರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಇತರ ಹಲವು ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯಕ್ಕೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ತೀವ್ರಗೊಂಡಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸತತ ಎರಡನೇ ದಿನವೂ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಧರಣಿ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಐದಕ್ಕಿಂತ ಹೆಚ್ಚು ಪ್ರತಿನಿಧಿಗಳನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿ ತಮ್ಮನ್ನು ಭೇಟಿ ಮಾಡಲು ನಿರಾಕರಿಸಿದರು ಎಂದು ಆರೋಪಿಸಿದ್ದಾರೆ.
Trinamool Congress leaders protesting inside Krishi Bhavan in Delhi detained by police pic.twitter.com/78BHNRjEpl
— ANI (@ANI) October 3, 2023
ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪಕ್ಷದ ಸಂಸದರು, ರಾಜ್ಯ ಕ್ಯಾಬಿನೆಟ್ ಸಚಿವರು ಧರಣಿ ಕುಳಿತರು. ಇದು ಇಂದು ರಾತ್ರಿ 9 ಗಂಟೆಯವರೆಗೆ ಮುಂದುವರೆಯಿತು. ಈ ವೇಳೆ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದ ಹಲವಾರು ಟಿಎಂಸಿ ಮುಖಂಡರನ್ನು ಬಂಧಿಸಿದರು.
ಇದನ್ನೂ ಓದಿ: TMC Twitter Account Hacked: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ನ ಟ್ವಿಟ್ಟರ್ ಖಾತೆ ಹ್ಯಾಕ್
ಓರ್ವ ಸಂಸದರಿಗೇ ಪೊಲೀಸರು ಈ ರೀತಿ ಮಾಡುತ್ತಿದ್ದಾರೆ ಎಂದು ಸಂಸದೆ ಮಹುವಾ ಮೊಯಿತ್ರಾ ಅವರನ್ನು ಮಹಿಳಾ ಪೊಲೀಸರು ಎಳೆದೊಯ್ಯುವ ವಿಡಿಯೋವನ್ನು ಟಿಎಂಸಿ ಶೇರ್ ಮಾಡಿಕೊಂಡಿದೆ.
आज 02:30 घंटे का समय व्यर्थ गया।
आज तृणमूल के सांसदों की प्रतीक्षा करते करते 08:30 बजे कार्यालय से निकली हूँ।
मेरी जानकारी के अनुसार तृणमूल के सांसद और बंगाल के मंत्रियों के प्रतिनिधिमण्डल ने कार्यालय में 06:00 बजे मिलने का समय लिया था।
…cont pic.twitter.com/SYY53ugkWK
— Sadhvi Niranjan Jyoti (@SadhviNiranjan) October 3, 2023
ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಕ್ಕೆ 15,000 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದೆ. ಆದರೆ, ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ. ಪಶ್ಚಿಮ ಬಂಗಾಳದ ಹಗರಣಗಳಿಂದ ಗಮನವನ್ನು ಬೇರೆಡೆ ಸೆಳೆಯಲು ತೃಣಮೂಲ ಕಾಂಗ್ರೆಸ್ ದೆಹಲಿಯಲ್ಲಿ ನಾಟಕ ಮಾಡುತ್ತಿದೆ ಎಂದು ಆರೋಪಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ