AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರ್ಮು ಬಗ್ಗೆ ಮಮತಾ ಸಂಪುಟ ಸಚಿವ ಅಖಿಲ್ ಗಿರಿ ಅವಹೇಳನ; ವ್ಯಾಪಕ ವಿರೋಧ

ಸಚಿವ ಅಖಿಲ್ ಗಿರಿ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಮಮತಾ ಬ್ಯಾನರ್ಜಿ ಅವರ ಸಂಪುಟದ ಸಚಿವ ರಾಷ್ಟ್ರಪತಿಯವರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ

ಮುರ್ಮು ಬಗ್ಗೆ ಮಮತಾ ಸಂಪುಟ ಸಚಿವ ಅಖಿಲ್ ಗಿರಿ ಅವಹೇಳನ; ವ್ಯಾಪಕ ವಿರೋಧ
ಅಖಿಲ್ ಗಿರಿ (ಟ್ವಿಟರ್ ಚಿತ್ರ)Image Credit source: Twitter
TV9 Web
| Edited By: |

Updated on:Nov 12, 2022 | 1:18 PM

Share

ಕೋಲ್ಕತ್ತ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಅವಹೇಳನ ಮಾಡಿ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ (Akhil Giri) ಮಾತನಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಅಖಿಲ್ ಗಿರಿ ಅವರು ರಾಷ್ಟ್ರಪತಿಗಳನ್ನು ಅವಹೇಳನ ಮಾಡಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸೇರಿದಂತೆ ಅಲ್ಲಿನ ತೃಣಮೂಲ ಕಾಂಗ್ರೆಸ್ (Trinamool Congress) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಮುರ್ಮು ಕುರಿತು ಗಿರಿ ಹೇಳಿದ್ದೇನು?

ಸಚಿವ ಗಿರಿ ಗುರುವಾರ ನಂದಿಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಆ ಸಂದರ್ಭದಲ್ಲಿ, ‘ಅವರು (ಸುವೇಂದು ಅಧಿಕಾರಿ) ನನ್ನನ್ನು ಚೆನ್ನಾಗಿ ಕಾಣುತ್ತಿಲ್ಲವೆಂದು ಟೀಕಿಸಿದ್ದಾರೆ. ಅವರೆಷ್ಟು ಚೆಂದ ಇದ್ದಾರೆ? ಜನ ಹೇಗೆ ಕಾಣಿಸುತ್ತಾರೆ ಎಂಬುದರ ಮೇಲೆ ಅವರ ವ್ಯಕ್ತಿತ್ವ ಅಳೆಯಬಾರದು. ನಾವು ರಾಷ್ಟ್ರಪತಿಗಳ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಅವರು ಹೇಗೆ ಕಾಣುತ್ತಾರೆ?’ ಎಂದು ಗಹಗಹಿಸಿ ನಗುತ್ತಾ ಹೇಳುತ್ತಿರುವುದು ವಿಡಿಯೊದಲ್ಲಿದೆ. ಸಚಿವರು ಈ ಮಾತು ಹೇಳುತ್ತಿದ್ದಂತೆಯೇ ಅಲ್ಲಿ ಸೇರಿದ್ದವರೆಲ್ಲ ಹಾಸ್ಯ ಮಾಡಿ ನಗುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಬಿಜೆಪಿ ಪ್ರತಿಭಟನೆ

ಅಖಿಲ್ ಗಿರಿ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಮಮತಾ ಬ್ಯಾನರ್ಜಿ ಅವರ ಸಂಪುಟದ ಸಚಿವ ರಾಷ್ಟ್ರಪತಿಯವರನ್ನು ಅವಮಾನಿಸಿದ್ದಾರೆ. ಮಮತಾ ಯಾವತ್ತೂ ಬುಡಕಟ್ಟು ವಿರೋಧಿ, ಮುರ್ಮು ಅವರನ್ನು ರಾಷ್ಟ್ರಪತಿ ಹುದ್ದೆಗೆ ಬೆಂಬಲಿಸಿರಲಿಲ್ಲ ಮತ್ತು ಈಗ ಈ ರೀತಿ ಅವಮಾನಿಸುತ್ತಿದ್ದಾರೆ. ಗಿರಿ ಅವರದು ನಾಚಿಕೆಗೇಡಿನ ಭಾಷಣ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ.

ಬಿಜೆಪಿಯ ಪಶ್ಚಿಮ ಬಂಗಾಳ ಘಟಕ ಸಹ ಹೇಳಿಕೆಯನ್ನು ಖಂಡಿಸಿದ್ದು, ಗಿರಿ ರಾಜೀನಾಮೆಗೆ ಆಗ್ರಹಿಸಿದೆ. ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿ ಪಂಜಾ ಸಮ್ಮುಖದಲ್ಲೇ ಅಖಿಲ್ ಗಿರಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮಮತಾ ಮತ್ತು ಅವರ ಸಂಪುಟದವರೆಲ್ಲ ಬುಡಕಟ್ಟು ವಿರೋಧಿಗಳು ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಕೂಡ ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಬಳಿಕ ಕ್ಷಮೆ ಕೋರಿದ್ದರು. ಅವರು ರಾಷ್ಟ್ರಪತಿಗಳನ್ನು ರಾಷ್ಟ್ರಪತ್ನಿ ಎಂದು ಹೇಳಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದಲ್ಲದೆ, ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Sat, 12 November 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ