AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ; ನಾಳೆಯೇ ತುರ್ತು ವಿಚಾರಣೆ

ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ಟಿಎಂಸಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. 2 ಹಂತಗಳ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇಂದ್ರ ಸರ್ಕಾರಿ ನೌಕರರನ್ನು ಮಾತ್ರ ಮತ ಎಣಿಕೆ ಮೇಲ್ವಿಚಾರಕರಾಗಿ ನೇಮಿಸುವ ಭಾರತದ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮೇ 4ರಂದು ಮತ ಎಣಿಕೆ ಇರುವುದರಿಂದ ನಾಳೆಯೇ ಸುಪ್ರೀಂ ಕೋರ್ಟ್ ಈ ಪ್ರಕರಣದ ತುರ್ತು ವಿಚಾರಣೆ ನಡೆಸಲಿದೆ.

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ; ನಾಳೆಯೇ ತುರ್ತು ವಿಚಾರಣೆ
Mamata Banerjee
ಸುಷ್ಮಾ ಚಕ್ರೆ
|

Updated on: May 01, 2026 | 10:28 PM

Share

ನವದೆಹಲಿ, ಮೇ 1: ಪಶ್ಚಿಮ ಬಂಗಾಳ ಚುನಾವಣೆಯ (West Bengal Elections) ಫಲಿತಾಂಶಕ್ಕೆ ಎರಡು ದಿನಗಳ ಮೊದಲು, ಶನಿವಾರ ತುರ್ತು ವಿಚಾರಣೆ ನಡೆಸಲು ಕೋರಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರಾಗಿ ನೇಮಿಸುವುದನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕೊಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದ ನಂತರ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಯಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶನಿವಾರ ಈ ವಿಷಯದ ತುರ್ತು ವಿಚಾರಣೆಗೆ ನಿರ್ದೇಶನಗಳನ್ನು ನೀಡಿದ್ದಾರೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ಅರ್ಜಿಯನ್ನು ಪಟ್ಟಿ ಮಾಡಲಾಗುವುದು.

ಇದನ್ನೂ ಓದಿ: West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗಾಗಿ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ನೌಕರರನ್ನು ನಿಯೋಜಿಸಬೇಕೆಂಬ ಭಾರತದ ಚುನಾವಣಾ ಆಯೋಗದ ನಿರ್ದೇಶನವನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿತ್ತು. ಕೇಂದ್ರ ಸರ್ಕಾರ/ಪಿಎಸ್‌ಯು ನೌಕರರನ್ನು ಮೇಲ್ವಿಚಾರಕರು/ಸಹಾಯಕರಾಗಿ ಪರಿಗಣಿಸಬೇಕೆಂಬ ನಿರ್ಧಾರದ ಸಿಂಧುತ್ವವನ್ನು ಕೊಲ್ಕತ್ತಾ ನ್ಯಾಯಾಲಯ ಎತ್ತಿಹಿಡಿದಿದ್ದು, ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ