ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದಲ್ಲಾಳಿ ಎಂದ ಟಿಎಂಸಿ ಸಂಸದ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

|

Updated on: Mar 25, 2025 | 8:23 PM

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ತೃಣಮೂಲ ಸಂಸದ (ಟಿಎಂಸಿ) 'ಶ್ರೀಮಂತರ ದಲ್ಲಾಳಿ' ಎಂಬ ಟೀಕೆ ಮಾಡಿದ್ದು, ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಟೀಕಿಸಿದ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್ ಬ್ಯಾನರ್ಜಿ, ಎಂಜಿಎನ್‌ಆರ್‌ಇಜಿಎ ಮತ್ತು ಪಿಎಂಎವೈಜಿಯಂತಹ ಯೋಜನೆಗಳ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕೆ ಕೇಂದ್ರದ ನಿಧಿಗಳು ಕಳೆದ 3 ವರ್ಷಗಳಿಂದ ಬಾಕಿ ಉಳಿದಿವೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬಾಕಿ ಇರುವ ಕೇಂದ್ರ ನಿಧಿಗಳ ಕುರಿತು ಕಲ್ಯಾಣ್ ಬ್ಯಾನರ್ಜಿ ಸಂಸತ್ತಿನ ಹೊರಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದಲ್ಲಾಳಿ ಎಂದ ಟಿಎಂಸಿ ಸಂಸದ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ
Kalyan Banerjee
Follow us on

ನವದೆಹಲಿ, ಮಾರ್ಚ್ 25: ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಇಂದು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು “ಶ್ರೀಮಂತರ ದಲ್ಲಾಳಿ”ಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬಾಕಿ ಇರುವ ಕೇಂದ್ರ ನಿಧಿಗಳ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿದ ಅವರು ಈ ಹೇಳಿಕೆ ನೀಡಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ “ಅವಮಾನಕರ” ಭಾಷೆಯನ್ನು ಬಳಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಸಂಸದರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, MGNREGA ಮತ್ತು PMAYGನಂತಹ ಯೋಜನೆಗಳ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕೆ ಕೇಂದ್ರದ ನಿಧಿಗಳು ಕಳೆದ 3 ವರ್ಷಗಳಿಂದ ಬಾಕಿ ಉಳಿದಿವೆ ಎಂದು ಆರೋಪಿಸಿದರು. ಬಿಜೆಪಿ ಬಂಗಾಳದಲ್ಲಿ ಸರ್ಕಾರ ರಚಿಸಲು ವಿಫಲವಾದ ಕಾರಣ ಕೇಂದ್ರವು ರಾಜ್ಯದ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

“ಶಿವರಾಜ್ ಚೌಹಾಣ್ ಶ್ರೀಮಂತರ ದಲ್ಲಾಳಿಯಂತೆ ವರ್ತಿಸುತ್ತಿದ್ದಾರೆ. ಅವರು ಬಡವರಿಗಾಗಿ ಕೆಲಸ ಮಾಡುವುದಿಲ್ಲ. ಅದಕ್ಕಾಗಿಯೇ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಲಾಗಿದೆ” ಎಂದು ಪಶ್ಚಿಮ ಬಂಗಾಳದ ಸೆರಾಂಪೋರ್‌ನ ಸಂಸದ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದರು. ಇಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ, ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರು ಗ್ರಾಮೀಣ ಉದ್ಯೋಗ ಯೋಜನೆ ಎಂಜಿಎನ್‌ಆರ್‌ಇಜಿಎಗೆ ಕೆಲವು ರಾಜ್ಯಗಳಿಗೆ ಹಣ ಪಾವತಿಸುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು, ಇದರಿಂದಾಗಿ ಸ್ಪೀಕರ್ ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಮುಂದೂಡಿದರು.


ಇದನ್ನೂ ಓದಿ: ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

“ದುರದೃಷ್ಟವಶಾತ್, ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ಯೋಜನೆಗಳ ಹೆಸರುಗಳನ್ನು ಬದಲಾಯಿಸುತ್ತಿದೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದೆ. ಕೇಂದ್ರ ಸಚಿವರ ವಿರುದ್ಧ ಇಂತಹ ಭಾಷೆಯನ್ನು ಬಳಸುವುದು ಸರಿಯಲ್ಲ. ಕಲ್ಯಾಣ್ ಬ್ಯಾನರ್ಜಿ ಕ್ಷಮೆಯಾಚಿಸಬೇಕು” ಎಂದು ಬಿಜೆಪಿ ಸಂಸದರು ಒತ್ತಾಯಿಸಿದ್ದಾರೆ.
“ತಮಿಳುನಾಡು ಆಗಿರಲಿ ಅಥವಾ ಪಶ್ಚಿಮ ಬಂಗಾಳ ಆಗಿರಲಿ, ಮೋದಿ ಸರ್ಕಾರ ಯಾವುದೇ ರಾಜ್ಯದ ವಿರುದ್ಧ ಎಂದಿಗೂ ತಾರತಮ್ಯ ಮಾಡಿಲ್ಲ. ಸಾಮಗ್ರಿ ವೆಚ್ಚಗಳು ಸೇರಿದಂತೆ ಬಾಕಿ ಇರುವ ಎಂಜಿಎನ್‌ಆರ್‌ಇಜಿಎ ಬಾಕಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು” ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ