AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸುಪ್ರೀಂ ಕೋರ್ಟ್ ಮುಂದೆ ನಡೆದ ಮಹತ್ವದ ವಿಚಾರಣೆಯಲ್ಲಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತದಾರರ ಹೆಸರುಗಳನ್ನು ಭಾರೀ ಪ್ರಮಾಣದಲ್ಲಿ ಡಿಲೀಟ್ ಮಾಡಿರುವುದು ಬಂಗಾಳದ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಹೊಸ ಅರ್ಜಿ ಸಲ್ಲಿಸಲು ಸೂಚಿಸಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿ, 207 ಸ್ಥಾನಗಳಲ್ಲಿ ಜಯ ಗಳಿಸಿತು. ಟಿಎಂಸಿ 80 ಸ್ಥಾನಗಳನ್ನು ಪಡೆದುಕೊಂಡಿತು.

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ
Mamata Banerjee
ಸುಷ್ಮಾ ಚಕ್ರೆ
|

Updated on: May 11, 2026 | 7:34 PM

Share

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ.

ಟಿಎಂಸಿ ಪರವಾಗಿ ಹಾಜರಾದ ಹಿರಿಯ ವಕೀಲ ಕಲ್ಯಾಣ್ ಬ್ಯಾನರ್ಜಿ ನ್ಯಾಯಾಲಯಕ್ಕೆ ತಿಳಿಸಿದ್ದು, ಕನಿಷ್ಠ 31 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಐಆರ್ ಪ್ರಕ್ರಿಯೆಯ ಸಮಯದಲ್ಲಿ ತೆಗೆದುಹಾಕಲಾದ ಮತದಾರರ ಸಂಖ್ಯೆಗಿಂತ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ. ಒಬ್ಬ ಟಿಎಂಸಿ ಅಭ್ಯರ್ಥಿ ಕೇವಲ 862 ಮತಗಳಿಂದ ಸೋತಿದ್ದಾರೆ, ಆ ಕ್ಷೇತ್ರವೊಂದರಲ್ಲೇ 5,000ಕ್ಕೂ ಹೆಚ್ಚು ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ಒಟ್ಟಾರೆ ಮತಗಳ ವ್ಯತ್ಯಾಸವು ಸುಮಾರು 32 ಲಕ್ಷ ಮತಗಳಾಗಿದ್ದು, ಮತದಾರರ ಹೆಸರುಗಳನ್ನು ತೆಗೆದುಹಾಕುವುದನ್ನು ಪ್ರಶ್ನಿಸುವ 35 ಲಕ್ಷಕ್ಕೂ ಹೆಚ್ಚು ಮೇಲ್ಮನವಿಗಳು ಇನ್ನೂ ವಿಲೇವಾರಿಗೆ ಬಾಕಿ ಇವೆ ಎಂದು ಅವರು ವಾದಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ಈ ವಿಷಯವನ್ನು ವಿಚಾರಣೆ ನಡೆಸಿತು. ಸೋಲಿನ ಅಂತರವು ಡಿಲೀಟ್ ಮಾಡಲಾದ ಮತದಾರರ ಸಂಖ್ಯೆಗಿಂತ ನಿಜವಾಗಿಯೂ ಕಡಿಮೆಯಿದ್ದರೆ, ಬಾಧಿತ ಪಕ್ಷಗಳು ನ್ಯಾಯಾಲಯದ ಮುಂದೆ ಸೂಕ್ತ ಅರ್ಜಿಯನ್ನು ಸಲ್ಲಿಸಲು ಮುಕ್ತವಾಗಿವೆ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: West Bengal CM: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿ, 207 ಸ್ಥಾನಗಳಲ್ಲಿ ಜಯ ಗಳಿಸಿತು. ಈ ಮೂಲಕ ಟಿಎಂಸಿಯ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದುಕೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ