Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

Mamata Banerjee ಮುಖ್ಯಮಂತ್ರಿಯಾಗಿ ಉಳಿಯಲು ಬ್ಯಾನರ್ಜಿ ಇಲ್ಲಿ ಗೆಲ್ಲಬೇಕಾಗಿರುವುದರಿಂದ ಎಲ್ಲರ ಕಣ್ಣುಗಳು ಭವಾನಿಪುರ ಉಪಚುನಾವಣೆಯ ಮೇಲೆ ಇವೆ. ಪೂರ್ಬ ಮೇದಿನೀಪುರದ ನಂದಿಗ್ರಾಮದಿಂದ ವಿಧಾನಸಭಾ ಚುನಾವಣೆಯಲ್ಲಿ ಮಮತಾ 1,956 ಮತಗಳಿಂದ ಸೋತಿದ್ದರು.

Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ
ಮಮತಾ ಬ್ಯಾನರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 06, 2021 | 11:25 AM

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ((TMC) ಭಾನುವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)  ಅವರು ಸೆಪ್ಟೆಂಬರ್ 30 ರಂದು ಭವಾನಿಪುರ (Bhabanipur) ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ. ಅದೇ ವೇಳೆ  ಬಿಜೆಪಿ ತನ್ನ ರಾಜ್ಯ ನಾಯಕತ್ವದ ಸಭೆಯನ್ನು ಮಂಗಳವಾರ ಆಯೋಜಿಸಿ ಮೂರು ಅಭ್ಯರ್ಥಿಗಳಿಗೆ ಅಂತಿಮ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವುದಾಗಿ ಹೇಳಿದೆ. ಮೂಲಗಳು ಹೇಳುವಂತೆ ಭವಾನಿಪುರ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಕಷ್ಟಕರವಾದ ಕೆಲಸವಾಗಿದೆ. ಟಿಎಂಸಿ ಜಕೀರ್ ಹೊಸೈನ್ ಮತ್ತು ಅಮಿರುಲ್ ಇಸ್ಲಾಂ ಅವರನ್ನು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಿಂದ ಕಣಕ್ಕಿಳಿಸಿದೆ. ಮುಖ್ಯಮಂತ್ರಿಯಾಗಿ ಉಳಿಯಲು ಬ್ಯಾನರ್ಜಿ ಇಲ್ಲಿ ಗೆಲ್ಲಬೇಕಾಗಿರುವುದರಿಂದ ಎಲ್ಲರ ಕಣ್ಣುಗಳು ಭವಾನಿಪುರ ಉಪಚುನಾವಣೆಯ ಮೇಲೆ ಇವೆ. ಪೂರ್ಬ ಮೇದಿನೀಪುರದ ನಂದಿಗ್ರಾಮದಿಂದ ವಿಧಾನಸಭಾ ಚುನಾವಣೆಯಲ್ಲಿ ಮಮತಾ 1,956 ಮತಗಳಿಂದ ಸೋತಿದ್ದರು.

ಮೇ 2 ರಂದು ಫಲಿತಾಂಶಗಳನ್ನು ಘೋಷಿಸಿದ ಕೆಲವು ವಾರಗಳ ನಂತರ ಭವಾನಿಪುರದ ಶಾಸಕರು ಮತ್ತು ರಾಜ್ಯ ಸಚಿವ ಸೋವಂದೇಬ್ ಚಟ್ಟೋಪಾಧ್ಯಾಯ ಅವರು ಬ್ಯಾನರ್ಜಿಯವರು ವಿಧಾನಸಭೆಗೆ ಚುನಾಯಿತರಾಗಲು ಮತ್ತು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ತಮ್ಮ ಚುನಾವಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಚುನಾವಣಾ ಆಯೋಗ (EC) ಶನಿವಾರ ಉಪಚುನಾವಣೆಯನ್ನು ಘೋಷಿಸಿದ ಸ್ವಲ್ಪ ಸಮಯದ ನಂತರ, ಆಡಳಿತ ಪಕ್ಷವು ಬ್ಯಾನರ್ಜಿ ಪರ ಪ್ರಚಾರ ಆರಂಭಿಸಿತು. ಟಿಎಂಸಿ ಅಧ್ಯಕ್ಷೆಯನ್ನು ಭವಾನಿಪುರದ ಮಗಳೆಂದು ಘೋಷಿಸುವ ಬ್ಯಾನರ್‌ಗಳು ಮತ್ತು ಗೋಡೆ ಬರಹಗಳು ವಿಧಾನಸಭಾ ಕ್ಷೇತ್ರದಲ್ಲಿ ರಾರಾಜಿಸಿವೆ. ಭಾನುವಾರ ಡುರಾಂಡ್ ಕಪ್  ಉದ್ಘಾಟಿಸಲು ಸಾಲ್ಟ್ ಲೇಕ್ ಕ್ರೀಡಾಂಗಣಕ್ಕೆ ಹೋಗುತ್ತಿದ್ದಾಗ ಮಮತಾ ಪಕ್ಷದ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದರು.

ಭವಾನಿಪುರ ಉಪಚುನಾವಣೆಗೆ ಚುನಾವಣಾ ಆಯೋಗದ ಅಧಿಸೂಚನೆಯನ್ನು ಸೆಪ್ಟೆಂಬರ್ 6 ರಂದು ನೀಡಲಾಗುವುದು ಮತ್ತು ಸೆಪ್ಟೆಂಬರ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳ ಪತ್ರಿಕೆಗಳನ್ನು ಸೆಪ್ಟೆಂಬರ್ 14 ರಂದು ಪರಿಶೀಲಿಸಲಾಗುವುದು. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ ಸೆಪ್ಟೆಂಬರ್ 16. ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.

ಏತನ್ಮಧ್ಯೆ,ಮಂಗಳವಾರ ಪಕ್ಷದ ಸಭೆಯ ಬಗ್ಗೆ ಕೇಳಿದಾಗ, ಬಿಜೆಪಿ ವಕ್ತಾರ ಸಮೀಕ್ ಭಟ್ಟಾಚಾರ್ಯ ಅಂತಿಮ ನಿರ್ಧಾರ ಕೇಂದ್ರ ನಾಯಕತ್ವದ್ದಾಗಿದೆ ಎಂದು ಹೇಳಿದರು. “ಮಮತಾ ಬ್ಯಾನರ್ಜಿ ವಿರುದ್ಧ ಯಾರು ಸ್ಪರ್ಧಿಸುತ್ತಾರೆ ಎಂದು ಹೇಳಲು ನಾನು ಸರಿಯಾದ ವ್ಯಕ್ತಿಯಲ್ಲ. ಈ ಕುರಿತು ಚರ್ಚಿಸಲು ನಾವು ಮಂಗಳವಾರ ಸಭೆ ಕರೆದಿದ್ದೇವೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ನಾವು ಉತ್ಸಾಹದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದು ನಾನು ಹೇಳಬಲ್ಲೆ ಎಂದು ಅವರು ಹೇಳಿದರು.

ಮೇಘಾಲಯದ ಮಾಜಿ ರಾಜ್ಯಪಾಲರಾದ ತಥಾಗತ ರಾಯ್, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸಂಶೋಧನಾ ಪ್ರತಿಷ್ಠಾನದ (ಎಸ್‌ಪಿಎಂಆರ್‌ಎಫ್) ನಿರ್ದೇಶಕ ಅನಿರ್ಬನ್ ಗಂಗೂಲಿ (ಬೋಲ್‌ಪುರದಲ್ಲಿ ಬಿಜೆಪಿ ಟಿಕೆಟ್ ನಲ್ಲಿ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಹೆಸರುಗಳನ್ನು ಬಿಜೆಪಿ ಪರಿಗಣಿಸಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

“ಪಕ್ಷವು ಭವಾನಿಪುರದ ಅಭ್ಯರ್ಥಿಯ ಹೆಸರನ್ನು ಇನ್ನೂ ಅಂತಿಮಗೊಳಿಸಿಲ್ಲ ಮತ್ತು ಸದ್ಯಕ್ಕೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಕೆಲವು ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಮಂಗಳವಾರದ ನಮ್ಮ ಸಭೆಯಲ್ಲಿ ಚರ್ಚೆಗಳನ್ನು ನಡೆಸಲಾಗುವುದು ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದರು. ಬಿಜೆಪಿಯ ಇನ್ನೊಂದು ಮೂಲದ ಪ್ರಕಾರ ಭವಾನಿಪುರದಲ್ಲಿ ಸೋಲುವುದು ಖಚಿತ ಎಂದು ಕೆಲವು ನಾಯಕರು ಭವಾನಿಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಇಸ್ರೇಲ್​​ನಲ್ಲಿ ಮೊದಲ ಬಾರಿಗೆ ಸಯಾಮಿ ಅವಳಿ ಬಾಲಕಿಯರು, ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಮುಖಾಮುಖಿಯಾದರು!

(TMC Sunday announced Mamata Banerjee to contest Bhabanipur bypoll BJP convene a meeting on nominee tomorrow)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್