ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ಮಾಡಲ್ಲ, ಇತರ ಜಿಲ್ಲೆಗಳಲ್ಲಿ ಕೇವಲ 30 ನಿಮಿಷ ನಡೆಯಲಿದೆ ಪ್ರಚಾರ

West Bengal Assembly Elections 2021: ಚುನಾವಣಾ ಪ್ರಚಾರದ ಅಂತಿಮ ದಿನವಾದ ಏಪ್ರಿಲ್ 26ರಂದು ಮಮತಾ ಬ್ಯಾನರ್ಜಿ ಕೊಲ್ಕತ್ತಾದಲ್ಲಿ ಸಾಂಕೇತಿಕವಾಗಿ ಸಭೆಯೊಂದನ್ನು ನಡೆಸಲಿದ್ದಾರೆ. ಇನ್ನಿತರ ಜಿಲ್ಲೆಗಳಲ್ಲಿ ಮಮತಾ ಅವರು 30 ನಿಮಿಷಗಳಿಗಿಂತ ಹೆಚ್ಚು ಹೊತ್ತು ಚುನಾವಣಾ ರ‍್ಯಾಲಿ ನಡೆಸುವುದಿಲ್ಲ ಎಂದು ಡೆರಿಕ್ ಓ ಬ್ರೇನ್ ಟ್ವೀಟ್ ಮಾಡಿದ್ದಾರೆ.

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ಮಾಡಲ್ಲ, ಇತರ ಜಿಲ್ಲೆಗಳಲ್ಲಿ ಕೇವಲ 30 ನಿಮಿಷ ನಡೆಯಲಿದೆ ಪ್ರಚಾರ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 19, 2021 | 11:48 AM

ಕೊಲ್ಕತ್ತಾ: ಕೊರೊನಾವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊಲ್ಕತ್ತಾದಲ್ಲಿ ಇನ್ನು ಮುಂದೆ ಚುನಾವಣಾ ರ‍್ಯಾಲಿ ನಡೆಸುವುದಿಲ್ಲ ಎಂದು ಟಿಎಸಿ ಸಂಸದ ಡೆರಿಕ್ ಒಬ್ರೇನ್ ಹೇಳಿದ್ದಾರೆ. ಚುನಾವಣಾ ಪ್ರಚಾರದ ಅಂತಿಮ ದಿನವಾದ ಏಪ್ರಿಲ್ 26ರಂದು ಮಮತಾ ಬ್ಯಾನರ್ಜಿ ಕೊಲ್ಕತ್ತಾದಲ್ಲಿ ಸಾಂಕೇತಿಕವಾಗಿ ಸಭೆಯೊಂದನ್ನು ನಡೆಸಲಿದ್ದಾರೆ. ಇನ್ನಿತರ ಜಿಲ್ಲೆಗಳಲ್ಲಿ ಮಮತಾ ಅವರು 30 ನಿಮಿಷಗಳಿಗಿಂತ ಹೆಚ್ಚು ಹೊತ್ತು ಚುನಾವಣಾ ರ‍್ಯಾಲಿ ನಡೆಸುವುದಿಲ್ಲ ಎಂದು ಡೆರಿಕ್ ಓ ಬ್ರೇನ್ ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ದಿಢೀರನೆ ಕೊವಿಡ್ ಪ್ರಕರಣಗಳು ಏರಿಕೆ ಆಗಿದ್ದು ಭಾನುವಾರ 8,419 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲೀಗ ಒಟ್ಟು 6,59,927 ಕೊವಿಡ್ ರೋಗಿಗಳಿದ್ದಾರೆ. ಭಾನುವಾರ ಚುನಾವಣಾ ಪ್ರಚಾರ ನಡೆಸಿದ್ದ ಮಮತಾ ಇನ್ನು ಮುಂದೆ ಕೊಲ್ಕತ್ತಾದಲ್ಲಿ ಸಣ್ಣ ಸಭೆಗಳನ್ನು ಮಾತ್ರ ನಡೆಸಲಾಗುವುದು. ಇನ್ನು ಚುನಾವಣೆ ನಡೆಯಲು ಬಾಕಿ ಇರುವ ವಿಧಾನಸಭಾ ಕ್ಷೇತ್ರಗಳಲ್ಲಿ ಚಿಕ್ಕ ಭಾಷಣಗಳನ್ನು ಮಾತ್ರ ಮಾಡಲಿದ್ದೇನೆ ಎಂದಿದ್ದಾರೆ.

ಕೊರೊನಾವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನುಳಿದಿರುವ ಮೂರು ಹಂತಗಳ ಚುನಾವಣೆಯನ್ನು ಒಂದೇ ಹಂತದಲ್ಲಿ ಮುಗಿಸಲು ಟಿಎಂಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಆಯೋಗ ಇದನ್ನು ನಿರಾಕರಿಸಿದೆ.

ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಎಲ್ಲ ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಟ್ವೀಟ್ ಮಾಡಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಬೃಹತ್ ರ‍್ಯಾಲಿಗಳನ್ನು ಆಯೋಜಿಸಿದಾಗ ಉಂಟಾಗುವ ಪರಿಣಾಮದ ಬಗ್ಗೆ ಎಲ್ಲ ರಾಜಕೀಯ ನಾಯಕರು ಗಂಭೀರವಾಗಿ ಚಿಂತಿಸಬೇಕು ಎಂದಿದ್ದರು. ರಾಹುಲ್ ಗಾಂಧಿಯವರ ಟ್ವೀಟ್ ಬೆನ್ನಲ್ಲೇ ಟಿಎಂಸಿ ಪಕ್ಷ ರಾಜಕೀಯ ಪ್ರಚಾರಗಳನ್ನು ಚುಟುಕುಗೊಳಿಸುವ ನಿರ್ಧಾರ ಪ್ರಕಟಿಸಿದೆ.

8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣ ದಿಢೀರನೆ ಏರಿಕೆ ಕಂಡಿದೆ. ಮೊದಲ 5 ಹಂತದ ಚುನಾವಣೆ ವೇಳೆ ಬಿಜೆಪಿ, ಟಿಎಂಸಿ ಸೇರಿದಂತೆ ಎಲ್ಲ ಪಕ್ಷಗಳು ಆರೋಗ್ಯ ಸಚಿವಾಲಯದ ಆದೇಶಿಸಿದ್ದ ಕೊವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿವೆ. ರಾಜಕೀಯ ಪಕ್ಷಗಳು ಬೃಹತ್ ರ‍್ಯಾಲಿ ಮತ್ತು ರೋಡ್ ಶೋಗಳನ್ನು ಆಯೋಜಿಸಿ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿವೆ.

ಆದಾಗ್ಯೂ, ದೇಶದಲ್ಲಿ ಕೊವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನುಳಿದ ಹಂತದ ಚುನಾವಣೆಗಾಗಿ ನಡೆಸುವ ಪ್ರಚಾರ ಕಾರ್ಯಕ್ರಮದ ಅವಧಿಗೆ ಚುನಾವಣಾ ಆಯೋಗ ಕತ್ತರಿ ಹಾಕಿದೆ. ಅದೇ ವೇಳೆ ಪ್ರತಿಯೊಂದು ಹಂತದ ಚುನಾವಣೆಯ ಪ್ರಚಾರ ಕಾರ್ಯಕ್ರಮಕ್ಕೆ 48 ಗಂಟೆಗಳ ಮೌನ ಅವಧಿಯನ್ನು 72 ಗಂಟೆಗಳಾಗಿ ವಿಸ್ತರಿಸಿ ಚುನಾವಣೆ ಆಯೋಗ ಆದೇಶ ನೀಡಿದೆ.

ಸಂಜೆ 7ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಯಾವುದೇ ರ‍್ಯಾಲಿ, ಸಾರ್ವಜನಿಕ ಸಭೆ, ಬೀದಿ ನಾಟಕ, ಬೀದಿಸಭೆಗಳಿಗೆ ಅನುಮತಿ ಇರುವುದಿಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದ್ದು, ಶುಕ್ರವಾರ ಸಂಜೆ 7ಗಂಟೆಯಿಂದ ಈ ಆದೇಶ ಜಾರಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಡೆಲಿರುವ 6,7 ಮತ್ತು ಎಂಟನೇ ಹಂತದ ಚುನಾವಣೆಗಾಗಿ ನಡೆಸುವ ರ‍್ಯಾಲಿ, ಸಾರ್ವಜನಿಕ ಸಭೆ, ಬೀದಿ ನಾಟಕ, ಬೀದಿ ಸಭೆ, ಬೈಕ್ ರ‍್ಯಾಲಿ ಅಥವಾ ಚುನಾವಣಾ ಪ್ರಚಾರಕ್ಕಾಗಿ ಗುಂಪು ಸೇರುವಿಕೆಯ ಮೌನ ಅವಧಿಯನ್ನು ( Silence period) 72 ಗಂಟೆಗಳವರೆಗೆ ವಿಸ್ತರಿಸಲಾಗಿದೆ ಎಂದು ಆಯೋಗ ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣ ಏರಿಕೆ; ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ ರಾಹುಲ್ ಗಾಂಧಿ

(TMC supremo Mamata Banerjee wont campaign in Kolkata Tweets senior TMC leader Derek OBrie)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ