TMC Twitter Account Hacked: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ನ ಟ್ವಿಟ್ಟರ್ ಖಾತೆ ಹ್ಯಾಕ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.

TMC Twitter Account Hacked: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ನ ಟ್ವಿಟ್ಟರ್ ಖಾತೆ ಹ್ಯಾಕ್
ಮಮತಾ ಬ್ಯಾನರ್ಜಿ
Follow us
ನಯನಾ ರಾಜೀವ್
|

Updated on:Feb 28, 2023 | 8:47 AM

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಮಂಗಳವಾರ ಮುಂಜಾನೆ ಟಿಎಂಸಿಯ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರೊಫೈಲ್ ಫೋಟೋ ಮತ್ತು ಹೆಸರನ್ನು ಬದಲಾಯಿಸಲಾಗಿದೆ  ಹ್ಯಾಕರ್‌ಗಳು ಟಿಎಂಸಿಯ ಪ್ರೊಫೈಲ್ ಚಿತ್ರ ಮತ್ತು ಹೆಸರನ್ನು ಬದಲಾಯಿಸಿದ್ದಾರೆ. ಪ್ರೊಫೈಲ್‌ನಲ್ಲಿ ಟಿಎಂಸಿ ಬದಲಿಗೆ ಯುಗಾ ಲ್ಯಾಬ್ಸ್ ಎಂದು ಬರೆಯಲಾಗಿದೆ. ಈ ಬಗ್ಗೆ ಟಿಎಂಸಿ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಹ್ಯಾಕ್ ಆದ ಬಳಿಕ ಯಾವುದೇ ಹೊಸ ಟ್ವೀಟ್​ನ್ನು ಪೋಸ್ಟ್​ ಮಾಡಿಲ್ಲ, ಈ ಬಗ್ಗೆ ಟ್ವಿಟ್ಟರ್​ಗೆ ಮಾಹಿತಿ ನೀಡಲಾಗಿದ್ದು, ಸರಿಪಡಿಸುವಂತೆ ಕೇಳಿಕೊಳ್ಳಲಾಗಿದೆ. ಇದು 2020 ರ ಪ್ರಕರಣಕ್ಕೆ ಹೋಲುತ್ತದೆ, ಇದರಲ್ಲಿ ಯುಎಸ್‌ನ ಹಲವಾರು ಪ್ರಮುಖ ವ್ಯಕ್ತಿಗಳ ಟ್ವಿಟರ್ ಹ್ಯಾಂಡಲ್‌ಗಳು ಹ್ಯಾಕ್ ಆಗಿದ್ದವು.

ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ಗೆ ಧಕ್ಕೆಯಾಗಿದೆ. ಸಮಸ್ಯೆಯನ್ನು ಸರಿಪಡಿಸಲು ಕೆಲಸ ಮಾಡುತ್ತಿರುವ ಟ್ವಿಟರ್‌ನ ಅಧಿಕಾರಿಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಅವರು ತ್ವರಿತ ಕ್ರಮದ ಭರವಸೆ ನೀಡಿದ್ದಾರೆ ಎಂದು ತೃಣಮೂಲ ನಾಯಕ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ. ಎಲಾನ್ ಮಸ್ಕ್, ಜೆಫ್ ಬೆಜೋಸ್, ಬಿಲ್ ಗೇಟ್ಸ್, ಬರಾಕ್ ಒಬಾಮಾ, ಜೋ ಬೈಡನ್ ಅವರ ಟ್ವಿಟ್ಟರ್ ಖಾತೆಯೂ ಹ್ಯಾಕ್ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:38 am, Tue, 28 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ