ದಿಂಡಿಗಲ್ (ತಮಿಳುನಾಡು): ಈ ಹಿಂದೆ ಕೋಲಾರದಲ್ಲಿ ಚುನಾವಣಾ ಭಾಷಣದ ವೇಳೆ ಮೋದಿ ಕುಲದ ಬಗ್ಗೆ ಹೀನಾಯವಾಗಿ ಮಾತನಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ರಾಹುಲ್ ಗಾಂಧಿಗೆ (Rahul Gandhi) ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿದೆ. ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯದ ಜಡ್ಜ್ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರ ಸಂಸತ್ ಸದಸ್ಯತ್ವ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಮುಖಂಡರು ಮತ್ತು ಕಾರ್ಯಕರ್ತರು ಕಂಗಾಲಾಗಿದ್ದಾರೆ. ರಾಹುಲ್‌ಗೆ ಶಿಕ್ಷೆ ವಿಧಿಸಿದ ನಂತರ ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಕೋಲಾಹಲ ಸೃಷ್ಟಿಸಿತು. ಗಮನಾರ್ಹ ಸಂಗತಿಯೆಂದರೆ ಇದುವರೆಗೆ ಪಕ್ಷದ ಯಾವುದೇ ನಾಯಕ ನ್ಯಾಯಾಧೀಶರ ಆ ತೀರ್ಪಿನ ಬಗ್ಗೆ ಅಸಭ್ಯವಾಗಿ ಅಥವಾ ವಿವಾದಾತ್ಮಕ ಮಾತುಗಳನ್ನು ಆಡಿಲ್ಲ. ಆದರೆ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಸಾರ್ವಜನಿಕ ಭಾಷಣ ಮಾಡುತ್ತಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ. ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ (Surat Judge) ನಾಲಿಗೆ (Tongue) ಕತ್ತರಿಸುವುದಾಗಿ ಕಾಂಗ್ರೆಸ್ ಮುಖಂಡ (Tamil Nadu Congress) ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ನ್ಯಾಯಾಧೀಶರಿಗೆ ಬೆದರಿಕೆ ಹಾಕಿರುವ ಈ ಪ್ರಕರಣ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ವಿಡಿಯೋವೊಂದು ಹರಿದಾಡುತ್ತಿದೆ. ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ಕಾರಣ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ದಿಂಡಿಗಲ್‌ನಲ್ಲಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ತಮಿಳುನಾಡು ಎಸ್‌ಸಿ-ಎಸ್‌ಟಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ವಿಭಾಗದ ದಿಂಡಿಗಲ್ ಅಧ್ಯಕ್ಷ ಮಣಿಕಂದನ್ ಅವರು ನ್ಯಾಯಾಧೀಶರ ಹೆಸರು ಉಲ್ಲೇಖಿಸಿ, ಬೆದರಿಕೆ ಹಾಕಿದ್ದಾರೆ.
ಮಾರ್ಚ್ 23 ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶರು ನಮ್ಮ ನಾಯಕ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ್ದಾರೆ ಎಂದು ಪ್ರಸ್ತಾಪಿಸಿದ ಮಣಿಕಂದನ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆ ತೀರ್ಪು ನೀಡಿದ ನ್ಯಾಯಾಧೀಶ ಎಚ್. ವರ್ಮಾ ಅವರ ನಾಲಿಗೆ ಕತ್ತರಿಸುವುದಾಗಿ ಹೇಳಿದ್ದಾರೆ. ಈ ಸಂಬಂಧ, ಅಣ್ಣಾ ಡಿಎಂಕೆ (AIADMK) ಪಕ್ಷದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ (CTR Nirmal Kumar) ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಮಣಿಕಂದನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆದರಿಕೆ ಪ್ರಕರಣದ ಬಗ್ಗೆ ದಿಂಡಿಗಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿ ಸಂಸತ್ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಂಗಾಲಾಗಿದ್ದಾರೆ.
ರಾಹುಲ್‌ಗೆ ಶಿಕ್ಷೆ ವಿಧಿಸಿದ ನಂತರ ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಕೋಲಾಹಲ ಸೃಷ್ಟಿಸಿತು. ಆದರೆ, ಯಾವೊಬ್ಬ ನಾಯಕರೂ ಅಸಭ್ಯ ಅಥವಾ ವಿವಾದಾತ್ಮಕ ಮಾತುಗಳನ್ನಾಡಿಲ್ಲ. ರಾಹುಲ್ ಪ್ರಕರಣದಲ್ಲಿ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಮೊದಲ ನಾಯಕ ಮಣಿಕಂದನ್. ಈಗ ಆತನ ಬಗ್ಗೆ ಕಾನೂನಾತ್ಮಕವಾಗಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರತ್ತ ಎಲ್ಲರ ಕಣ್ಣು ನೆಟ್ಟಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 11:47 am, Sat, 8 April 23