ವಿಮಾನ ನಿಲ್ದಾಣಗಳಲ್ಲಿ ವಾರ್ ರೂಮ್‌; ಆರು ಅಂಶಗಳ ಕ್ರಿಯಾ ಯೋಜನೆ ಪ್ರಕಟಿಸಿದ ಜ್ಯೋತಿರಾದಿತ್ಯ ಸಿಂಧಿಯಾ

"ಪ್ರಯಾಣಿಕರ ಅನಾನುಕೂಲತೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ವಿಮಾನ ನಿಲ್ದಾಣಗಳು ಮತ್ತು ಏರ್‌ಲೈನ್ ನಿರ್ವಾಹಕರು ಎಲ್ಲಾ ಆರು ಮೆಟ್ರೋಗಳಲ್ಲಿ 'ವಾರ್ ರೂಮ್'ಗಳನ್ನು ಸ್ಥಾಪಿಸುತ್ತಾರೆ ಎಂದು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ವಾರ್ ರೂಮ್‌; ಆರು ಅಂಶಗಳ ಕ್ರಿಯಾ ಯೋಜನೆ ಪ್ರಕಟಿಸಿದ ಜ್ಯೋತಿರಾದಿತ್ಯ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ
Follow us
ರಶ್ಮಿ ಕಲ್ಲಕಟ್ಟ
|

Updated on: Jan 16, 2024 | 5:20 PM

ದೆಹಲಿ ಜನವರಿ 16: ದಟ್ಟ ಮಂಜಿನಿಂದಾಗಿ (fog) ನೂರಾರು ವಿಮಾನಗಳ ವಿಳಂಬ ಅಥವಾ ರದ್ದತಿಗೆ ಕಾರಣವಾಗಿರುವ ದೇಶೀಯ ಮತ್ತು ಅಂತರಾಷ್ಟ್ರೀಯ ವಾಣಿಜ್ಯ ವಿಮಾನ ಕಾರ್ಯಾಚರಣೆಗಳಿಗೆ ಅಡೆತಡೆಗಳನ್ನು ಎದುರಿಸಲು ಆರು ಅಂಶಗಳ ಕ್ರಿಯಾ ಯೋಜನೆಯನ್ನು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಮಂಗಳವಾರ ಪ್ರಕಟಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಸಿಂಧಿಯಾ “ಪ್ರಯಾಣಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ಏರ್‌ಲೈನ್‌ಗಳಿಗೆ  ಹೊಸ SOPಗಳು ಅಥವಾ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ನೀಡಲಾಗಿದೆ ಎಂದಿದ್ದಾರೆ.

ಇವುಗಳ ಜೊತೆಗೆ, ಕೇಂದ್ರವು ಎಲ್ಲಾ ಆರು ಮೆಟ್ರೋ ವಿಮಾನ ನಿಲ್ದಾಣಗಳಿಂದ ದೈನಂದಿನ ವರದಿಗಳನ್ನು ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ನಿರ್ದೇಶನಗಳ ಅನುಷ್ಠಾನದ ವರದಿಗಳನ್ನು ಪಡೆಯುತ್ತದೆ ಎಂದಿದ್ದಾರೆ. “ಪ್ರಯಾಣಿಕರ ಅನಾನುಕೂಲತೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ವಿಮಾನ ನಿಲ್ದಾಣಗಳು ಮತ್ತು ಏರ್‌ಲೈನ್ ನಿರ್ವಾಹಕರು ಎಲ್ಲಾ ಆರು ಮೆಟ್ರೋಗಳಲ್ಲಿ ‘ವಾರ್ ರೂಮ್’ಗಳನ್ನು ಸ್ಥಾಪಿಸುತ್ತಾರೆ. “ಸಾಕಷ್ಟು CISF (ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ನಿರ್ವಹಿಸುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಇಲ್ಲಿ 24 ಗಂಟೆ ಭದ್ರತೆ ಖಾತರಿ ಪಡಿಸುತ್ತದೆ ಎಂದು ಸಚಿವರು ಹೇಳಿದಾರೆ.

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇ 29L ಅನ್ನು CAT III ಕಾರ್ಯಗತಗೊಳಿಸಲಾಗಿದೆ ಎಂದುಸಿಂಧಿಯಾ ಹೇಳಿದರು, ಇದು ದಟ್ಟವಾದ ಮಂಜಿನ ಸನ್ನಿವೇಶಗಳಲ್ಲಿಯೂ ಸಹ ಟೇಕ್-ಆಫ್ ಮತ್ತು ನಿರ್ಗಮನಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ರನ್‌ವೇ 10/28 – ಸಿಎಟಿ III ಸ್ಥಿತಿಯೊಂದಿಗೆ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು. ಕಳೆದ ವರ್ಷ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆದ ನಂತರ ನಿರ್ವಹಣೆಗಾಗಿ ವಿಮಾನ ನಿಲ್ದಾಣದ ಅತ್ಯಂತ ಹಳೆಯ ರನ್‌ವೇಯನ್ನು ಮುಚ್ಚಲಾಗಿತ್ತು. ಸೋಮವಾರ ಸಿಂಧಿಯಾ ಅವರು ಇಂಡಿಗೋ ಮತ್ತು ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಸೇರಿದಂತೆ ಇತರ ವಿಮಾನಯಾನ ಸಂಸ್ಥೆಗಳು ಕಳಪೆ ಸಂವಹನ ಮತ್ತು ಕೆಟ್ಟ ಹವಾಮಾನದ ಕಾರಣ ವಿಳಂಬವಾಗಿದ್ದು ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಇಂಡಿಗೋ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ; ಅಶಿಸ್ತಿನ ವರ್ತನೆ ಸಹಿಸುವುದಿಲ್ಲ ಎಂದ ಜ್ಯೋತಿರಾದಿತ್ಯ ಸಿಂಧಿಯಾ

ಭಾನುವಾರ ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ ಬೆಳಿಗ್ಗೆ 5 ರಿಂದ 9 ರ ನಡುವೆ ಗೋಚರತೆ ಶೂನ್ಯಕ್ಕೆ ಇಳಿದಿದೆ.ತಮ್ಮ ಸಚಿವಾಲಯವು ಸಮಸ್ಯೆಗಳನ್ನು ಪರಿಹರಿಸುತ್ತದೆ, ತಾಳ್ಮೆಯಿಂದಿರಿ ಎಂದು ಸಚಿವರು ಪ್ರಯಾಣಿಕರಿಗೆ ಮನವಿ ಮಾಡಿದ್ದರು. ದೆಹಲಿ ವಿಮಾನ ನಿಲ್ದಾಣದಲ್ಲಿ ಭಾನುವಾರದಂದು 100 ಕ್ಕೂ ಹೆಚ್ಚು ಮತ್ತು ಸೋಮವಾರ 150 ಕ್ಕೂ ಹೆಚ್ಚು ಸೇವೆಗಳನ್ನು ರದ್ದುಗೊಳಿಸಲಾಗಿದೆ ಅಥವಾ ವಿಳಂಬಗೊಳಿಸಲಾಗಿದೆ. ಇದೆಲ್ಲವೂ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಂಡ ಕ್ರಮ ಎಂದು ಸಚಿವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ