6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಶೀಲ್ ಮೋದಿ
ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಹೇಳಿದ್ದಾರೆ.
ದೆಹಲಿ, ಏ.3: ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಹೇಳಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿಸಿದ್ದೇನೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಈ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ಜನರಿಗೆ ಹೇಳುವ ಸಮಯ ಬಂದಿದೆ ತನ್ನ ಆರೋಗ್ಯದ ಬಗ್ಗೆ ಜನರ ಮುಂದೆ ಹೇಳುತ್ತಿದ್ದೇನೆ ಎಂದು 72 ವರ್ಷದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ. ದೇಶ, ಬಿಹಾರ ಮತ್ತು ಪಕ್ಷಕ್ಕೆ ಸದಾ ಕೃತಜ್ಞರಾಗಿರುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಸುಶೀಲ್ ಮೋದಿ ಅವರ ಈ ಹೇಳಿಕೆಗೆ ಬಿಜೆಪಿ ನಾಯಕ ಮತ್ತು ಪಕ್ಷದ ಸಂಸದ ರವಿಶಂಕರ್ ಪ್ರಸಾದ್ ತೀವ್ರ ನೋವನ್ನು ಉಂಟಾಗಿದೆ ಎಂದು ಹೇಳಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ಸುಶೀಲ್ ಮೋದಿ ಜುಲೈ 2017 ರಿಂದ ನವೆಂಬರ್ 2020 ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ
ಬಿಜೆಪಿ ಪಕ್ಷ ಮತ್ತು ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದಗಳು ತಿಳಿಸುವೇ, ರಾಜ್ಯಸಭೆಗೆ ಅವಕಾಶ ನೀಡಿದ ಬಿಜೆಪಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಸುಶೀಲ್ ಮೋದಿ ಅವರು ಕೂಡ ಇದ್ದಾರೆ. ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಈ ಸಮಿತಿಯಲ್ಲಿ ಸಂಚಾಲಕರು ಮತ್ತು ಸಹ ಸಂಚಾಲಕರಾಗಿರುತ್ತಾರೆ.ಬಿಹಾರದ 40 ಲೋಕಸಭಾ ಸ್ಥಾನಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:02 pm, Wed, 3 April 24