AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಮಗಳಿಗೆ ಸೂಕ್ತ ವರನನ್ನು ಹುಡುಕಲು ಆರೋಪಿ ತಂದೆಯೊಬ್ಬರಿಗೆ ಸುಪ್ರೀಂಕೋರ್ಟ್​ 45 ದಿನಗಳ ಮಧ್ಯಂತರ ಜಾಮೀನು ನೀಡಿದೆ. ತನ್ನ ಮಗಳಿಗೆ ಮದುವೆ ವಯಸ್ಸಾಗಿರುವುದರಿಂದ ಆಕೆಗೆ ಸೂಕ್ತ ವರನನ್ನು ಹುಡುಕಬೇಕು ಎಂದು ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅರ್ಜಿದಾರರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಪತ್ನಿ ಎರಡು ವರನನ್ನು ಹುಡುಕಿದ್ದು, ಅವರಲ್ಲಿ ಒಬ್ಬರನ್ನು ಮದುವೆಗೆ ಅಂತಿಮಗೊಳಿಸಬೇಕಿದೆ ಎಂದು ಕೋರ್ಟ್​ಗೆ ತಿಳಿಸಿದ್ದಾರೆ.

ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​
ಜೈಲು Image Credit source: Harvard Gazette
ನಯನಾ ರಾಜೀವ್
|

Updated on: Feb 09, 2024 | 10:23 AM

Share

ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಯೊಬ್ಬನಿಗೆ ಸುಪ್ರೀಂಕೋರ್ಟ್​ 45 ದಿನಗಳ ಮಧ್ಯಂತರ ಜಾಮೀನು(Interim Bail) ನೀಡಿರುವ ಘಟನೆ ನಡೆದಿದೆ. ಇಂತಹ ಪ್ರಕರಣಗಳಲ್ಲಿ ಸಹ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಿರುವುದನ್ನು ಪರಿಗಣಿಸಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ವಾಸ್ತವವಾಗಿ ಈ ಕೈದಿ ತನ್ನ 20 ವರ್ಷದ ಮಗಳ ಮದುವೆಗೆ ವರ ಹುಡುಕಬೇಕು ಎಂದು ಜಾಮೀನು ಕೋರಿದ್ದ. ಮಾಹಿತಿಯ ಪ್ರಕಾರ, ನ್ಯಾಯಮೂರ್ತಿ ಎಂಎಂ ಸುಂದರೇಶ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಕೆಲಸಕ್ಕಾಗಿ ವ್ಯಕ್ತಿಗೆ 45 ದಿನಗಳ ಜಾಮೀನು ನೀಡಿದೆ.

ಕೊಲೆ, ಗಲಭೆ, ನೋವುಂಟುಮಾಡುವುದು, ಕಿಡಿಗೇಡಿತನ, ಅತಿಕ್ರಮಣ ಮುಂತಾದ ಅಪರಾಧಗಳಿಗಾಗಿ ಈ ವ್ಯಕ್ತಿಯನ್ನು ದೆಹಲಿ ಹೈಕೋರ್ಟ್ ದೋಷಿ ತೀರ್ಪು ನೀಡಿತ್ತು. ಹೈಕೋರ್ಟ್ ನೀಡಿರುವ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮತ್ತು ಜಾಮೀನು ಮಂಜೂರು ಮಾಡುವಂತೆ ಅವರು ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

ಈ ವ್ಯಕ್ತಿಯ ಮೇಲ್ಮನವಿ ದೀರ್ಘಕಾಲದಿಂದ ವಿಚಾರಣೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಇತರ ಆರೋಪಿಗಳಿಗೂ ಜಾಮೀನು ಸಿಕ್ಕಿರುವ ಅಂಶವನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ವೇಳೆ ಜಾಮೀನು ಅರ್ಜಿ ಸಲ್ಲಿಸಿರುವ ವ್ಯಕ್ತಿಯ ಮಗಳನ್ನು ಮದುವೆಯಾಗಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇದಕ್ಕಾಗಿ ವರನನ್ನು ಹುಡುಕಬೇಕು.

ಮತ್ತಷ್ಟು ಓದಿ: ವರನ ಅಜ್ಜಿಯನ್ನು ಕುರ್ಚಿಯಿಂದ ಎಬ್ಬಿಸಿದ್ದಕ್ಕೆ ಗಲಾಟೆ; 5 ಗಂಟೆಯಲ್ಲೇ ಮುರಿದು ಬಿತ್ತು ಮದುವೆ

ವ್ಯಕ್ತಿಯ ಪತ್ನಿ ಇಬ್ಬರು ಸಂಭಾವ್ಯ ವರಗಳನ್ನು ನೋಡಿದ್ದು, ಅವರಲ್ಲಿ ಒಬ್ಬರೊಂದಿಗೆ ತನ್ನ ಮಗಳ ಮದುವೆ ಗೊತ್ತುಪಡಿಸಬೇಕಿದೆ ಎಂದು ಕೈದಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಜಾಮೀನು ಕೋರಿ ಕೈದಿಗಳಿಗೆ ಈ ಹಿಂದೆ ಹಲವು ಸಂದರ್ಭಗಳಲ್ಲಿ ಮಧ್ಯಂತರ ಜಾಮೀನು ನೀಡಲಾಗಿತ್ತು ಮತ್ತು ಅದನ್ನು ಅವರು ಎಂದಿಗೂ ದುರುಪಯೋಗಪಡಿಸಿಕೊಂಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಇದಾದ ನಂತರ ನ್ಯಾಯಾಲಯವು ವ್ಯಕ್ತಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಈ ಜಾಮೀನು ವಿಚಾರಣಾ ನ್ಯಾಯಾಲಯ ವಿಧಿಸಬಹುದಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ.

ಜಾಮೀನು ಎಂದರೇನು? ಸಂಕ್ಷಿಪ್ತವಾಗಿ ಹೇಳುವುದಾದರೆ, ಜಾಮೀನು ಆರೋಪಿಯ ಷರತ್ತುಬದ್ಧ ಬಿಡುಗಡೆಯಾಗಿದೆ ಮತ್ತು  ನ್ಯಾಯಾಲಯಕ್ಕೆ ಕೋರ್ಟ್​ ಹೇಳಿರುವ ದಿನ ಹಾಜರಾಗುವ ಭರವಸೆಯೊಂದಿಗೆ ಬಿಡುಗಡೆಮಾಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?