ರಾಹುಲ್ ಗಾಂಧಿ ಮಾಡಿರುವ ತಪ್ಪನ್ನೇ ಸರಿ ಅಂತ ವಾದಿಸಲು ಕಾಂಗ್ರೆಸ್ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ : ಪ್ರಲ್ಹಾದ್ ಜೋಶಿ

Rahul Gandhi: ಸದನದಲ್ಲಿ ವಿಪಕ್ಷದವರ ಮೈಕ್ ಗಳು ಆಫ್ ಆಗುತ್ತವೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಬೇಜವಾಬ್ದಾರಿಯಾಗಿ ಈ ರೀತಿ ಹೇಳಿಕೆ ನೀಡುವುದು ಖಂಡನೀಯ. ಇಂತಹ ಹೇಳಿಕೆಗಳು ಕಾಂಗ್ರೆಸ್ ಪಕ್ಷದಿಂದ ಮಾತ್ರ ನಿರೀಕ್ಷಿಸಲು ಸಾಧ್ಯ ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ಟೀಕಿಸಿದರು‌.

ರಾಹುಲ್ ಗಾಂಧಿ ಮಾಡಿರುವ ತಪ್ಪನ್ನೇ ಸರಿ ಅಂತ ವಾದಿಸಲು ಕಾಂಗ್ರೆಸ್ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ : ಪ್ರಲ್ಹಾದ್ ಜೋಶಿ
ಲೋಕಸಭಾ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Mar 16, 2023 | 5:12 AM

ನವದೆಹಲಿ: ವಿದೇಶದಲ್ಲಿ ರಾಹುಲ್ ಗಾಂಧಿ (Rahul Gandhi) ಭಾರತದ ಪ್ರಜಾಪ್ರಭುತ್ವದ ಬಗ್ಗೆ ತಪ್ಪು ಹೇಳಿಕೆ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಮಾಡಿದ್ದನ್ನ ಸರಿ ಅಂತಾ ಸುಳ್ಳು ಹೇಳಿ ಸದನದಲ್ಲಿ (Lok Sabha) ಕಾಂಗ್ರೆಸ್ ಗದ್ದಲ ಎಬ್ಬಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ..? ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸದನದಲ್ಲಿ ಕಾಂಗ್ರೆಸ್ (Congress) ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕೇವಲವಾಗಿ ಮಾತಾಡಿರುವುದಕ್ಕೆ ಕ್ಷಮೆ ಯಾಚಿಸಬೇಕು ಎಂದರು. ವಿದೇಶದಲ್ಲಿ ನಿಂತು ಭಾರತದ ಪ್ರಜಾಪ್ರಭುತ್ವದ ಕುರಿತು ತುಚ್ಛವಾಗಿ ಮಾತನಾಡುವ ಮೂಲಕ ರಾಹುಲ್ ಗಾಂಧಿ ಭಾರತೀಯರಿಗೆ ಅವಮಾನ ಮಾಡಿದ್ದಾರೆ ಅಂತಾ ಕೇಂದ್ರ ಸಚಿವ ಪ್ರಲ್ಜಾದ್ ಜೋಶಿ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಬೇಜವಾಬ್ದಾರಿಯಾಗಿ ಈ ರೀತಿ ಹೇಳಿಕೆ ನೀಡುವುದು ಖಂಡನೀಯ. ಇಂತಹ ಹೇಳಿಕೆಗಳು ಕಾಂಗ್ರೆಸ್ ಪಕ್ಷದಿಂದ ಮಾತ್ರ ನಿರೀಕ್ಷಿಸಲು ಸಾಧ್ಯ ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ಟೀಕಿಸಿದರು‌.

ಸದನದಲ್ಲಿ ವಿಪಕ್ಷದವರ ಮೈಕ್ ಗಳು ಆಫ್ ಆಗುತ್ತವೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಸದನದಲ್ಲಿ ಸದಸ್ಯರಿಗೆ ಸಮಯ ನಿಗದಿ ಪಡಿಸುವುದು ಸ್ಪೀಕರ್. ಸಮಯ ಮೀರಿ ಮಾತಾಡಿದಾಗ ಮೈಕ್ ಆಫ್ ಮಾಡುವ ನಿಟ್ಟಿನಲ್ಲಿ ಸ್ಪೀಕರ್ ಸೂಚನೆಯ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಸದನದ ನಿಯಮದಂತೆ ಕಲಾಪ ನಡೆಯುತ್ತದೆ. ಆದರೆ ರಾಹುಲ್ ಗಾಂಧಿ ಅವರ ಹೇಳಿಕೆ ಲೋಕಸಭೆ ಸ್ಪೀಕರ್ ಅವರನ್ನೇ ದೂಷಿಸುವಂತಿದೆ.

ಇದನ್ನೂ ಓದಿ:

ಭಾರತದ ಪ್ರಜಾಪ್ರಭುತ್ವದಲ್ಲಿ ವಿದೇಶಿ ಶಕ್ತಿಗಳಿಗೆ ಹಸ್ತಕ್ಷೇಪ ಮಾಡುವ ರೀತಿಯಲ್ಲಿ ರಾಹುಲ್ ಗಾಂಧಿ ಮಾತಾಡಿರುವುದು ಅಕ್ಷಮ್ಯ ಅಪರಾಧ -ಸದನದಲ್ಲಿ ಪ್ರಲ್ಹಾದ್ ಜೋಶಿ ಕಿಡಿ

ಸದನಕ್ಕೆ ಅಗೌರವ ತರುವ ರೀತಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಸ್ಪೀಕರ್ ಬಳಿ ಬಿಜೆಪಿ ಮನವಿ ಮಾಡಿದೆ ಎಂದು ಪ್ರಲ್ಹಾದ್ ಜೋಶಿ ಇದೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ