Yogi Adityanath Oath Taking: ಸಂಜೆ ಯೋಗಿ ಆದಿತ್ಯನಾಥ್ ಪ್ರಮಾಣ, ಸಿಎಂ ಬೊಮ್ಮಾಯಿ ಲಖ್ನೋದಲ್ಲಿ, ನೆರೆಯ ಗೋವಾ ಸಿಎಂ ಪ್ರಮೋದ್ ಜತೆ ಕುಶಲೋಪರಿ
Yogi Adityanath swearing in ceremony: ಇಂದು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಭಾಗವಹಿಸಲು ಇಬ್ಬರೂ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಲಖನೌಗೆ ತೆರಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಕೂಡ ಉಪಸ್ಥಿತರಿದ್ದರು.
ಲಖನೌ: ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್(Pramod Sawant) ಅವರು ಬೆಂಗಳೂರಿನ ಎಚ್ಎಎಲ್(HAL) ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಪರಸ್ಪರ ಶುಭ ಕೋರಿದರು. ಇಂದು (ಮಾರ್ಚ್ 25) ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ (Yogi Adityanath) ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಭಾಗವಹಿಸಲು ಇಬ್ಬರೂ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಲಕ್ನೋಗೆ ತೆರಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಕೂಡ ಉಪಸ್ಥಿತರಿದ್ದರು.
ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಯೋಗಿ ಆದಿತ್ಯನಾಥ ಅವರನ್ನು ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಇಂದು (ಶುಕ್ರವಾರ, ಮಾ.25) ಎರಡನೇ ಬಾರಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಅದ್ದೂರಿಯಾಗಿ ಸಮಾರಂಭ ನಡೆಯಲಿದೆ. ಸುಮಾರು ಮೂರು ದಶಕಗಳ ನಂತರ ಸತತ ಎರಡನೇ ಬಾರಿಗೆ ಪಕ್ಷವೊಂದು ಅಧಿಕಾರಕ್ಕೆ ಬಂದ ಅಪರೂಪದ ದಾಖಲೆಯನ್ನು ಬಿಜೆಪಿ ಬರೆದಿದ್ದು, ಪ್ರಮಾಣವಚನ ಸಮಾರಂಭಕ್ಕೆ ಸಾವಿರಾರು ಮಂದಿ ಗಣ್ಯರು ಸಾಕ್ಷಿಯಾಗಲಿದ್ದಾರೆ. ಪೂರ್ಣ ಐದು ವರ್ಷಗಳ ಸಿಎಂ ಆಗಿದ್ದ ನಂತರ ಮತ್ತೆ ಅಧಿಕಾರಕ್ಕೇರಲಿರುವ ಉತ್ತರ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಲಿದ್ದಾರೆ ಯೋಗಿ ಆದಿತ್ಯನಾಥ್. ಪ್ರಮಾಣ ವಚನ ಸಮಾರಂಭವನ್ನು ಶಕ್ತಿ ಪ್ರದರ್ಶನದ ಮಾದರಿಯಲ್ಲಿ ಬಿಜೆಪಿ ನಡೆಸಲಿದ್ದು, ಚುನಾವಣಾ ಫಲಿತಾಂಶ ಪ್ರಕಟಗೊಂಡ ಎರಡು ವಾರಗಳ ನಂತರ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 273 ಸ್ಥಾನಗಳೊಂದಿಗೆ ಭಾರಿ ಬಹುಮತ ಪಡೆದುಕೊಂಡಿತ್ತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಹಿರಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಲಕ್ನೋದಲ್ಲಿ ಸುಮಾರು 85 ಸಾವಿರ ಜನರು ಈ ಪ್ರಮಾಣ ವಚನ ಕಾರ್ಯಕ್ರಮದ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭವ್ಯವಾದ ವೇದಿಕೆಯನ್ನು ನಿರ್ಮಿಸಲಾಗಿದ್ದು, ‘ನ್ಯೂ ಯುಪಿ ಆಫ್ ನ್ಯೂ ಇಂಡಿಯಾ’ ಎಂಬ ಘೋಷಣೆಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಲಾಗಿದೆ.
ಗುರುವಾರ ಶಾಸಕಾಂಗದ ಪಕ್ಷದ ಸಭೆಯಲ್ಲಿ ಮಾತನಾಡಿದ್ದ ಯೋಗಿ ಆದಿತ್ಯನಾಥ್, ‘‘ಉತ್ತರಪ್ರದೇಶದಲ್ಲಿ ಉತ್ತಮ ಆಡಳಿತದ ಬಗ್ಗೆ ನನಗೆ ಮಾರ್ಗದರ್ಶನ ನೀಡಿದವರು ಪ್ರಧಾನಿ ನರೇಂದ್ರ ಮೋದಿ. ನನಗೆ 2017 ರಲ್ಲಿ ಆಡಳಿತಾತ್ಮಕ ಅನುಭವ ಇರಲಿಲ್ಲ, ಯುಪಿಯಲ್ಲಿ ಉತ್ತಮ ಆಡಳಿತದ ಬಗ್ಗೆ ಪ್ರಧಾನಿ ಮೋದಿ ನನಗೆ ಮಾರ್ಗದರ್ಶನ ನೀಡಿದರು’’ ಎಂದಿದ್ದರು. ”ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ವಿರೋಧದ ಪ್ರಚಾರದ ನಡುವೆಯೂ ಪ್ರಭಾವ ಬೀರಿತು. 2017ರಲ್ಲಿ ಯುಪಿ ಕಲ್ಯಾಣ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿ ಹಿಂದಿತ್ತು. ಈಗ ಅಗ್ರಸ್ಥಾನದಲ್ಲಿದೆ” ಎಂದು ಆದಿತ್ಯನಾಥ್ ನುಡಿದಿದ್ದರು.
Yogi Adityanath: ಇಂದು ಪ್ರಮಾಣವಚನ ಸ್ವೀಕರಿಸಲಿರುವ ಯೋಗಿ; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿ
Published On - 2:55 pm, Fri, 25 March 22