AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನಲ್ಲಿ 4 ವರ್ಷದ ಬಾಲಕನನ್ನು ಹತ್ಯೆಗೈದ ಬೀದಿ ನಾಯಿಗಳು, ಘಟನೆ ಸಿಸಿಟಿವಿಯಲ್ಲಿ ಸೆರೆ

ಹುಡುಗ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮೂರು ನಾಯಿಗಳು ಓಡಿ ಬಂದು ಅವನ ಮೇಲೆ ದಾಳಿ ಮಾಡಿ ಅವನನ್ನು ಕಚ್ಚಿ ಕೊಂದಿವೆ.

ಹೈದರಾಬಾದ್‌ನಲ್ಲಿ 4 ವರ್ಷದ ಬಾಲಕನನ್ನು ಹತ್ಯೆಗೈದ ಬೀದಿ ನಾಯಿಗಳು, ಘಟನೆ ಸಿಸಿಟಿವಿಯಲ್ಲಿ ಸೆರೆ
4 ವರ್ಷದ ಬಾಲಕನನ್ನು ಹತ್ಯೆಗೈದ ಬೀದಿ ನಾಯಿಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 21, 2023 | 11:55 AM

ಹೈದರಾಬಾದ್‌ನಲ್ಲಿ (Hyderabad) ಭಾನುವಾರ ನಾಲ್ಕು ವರ್ಷದ ಬಾಲಕನನ್ನು (Toddler) ಬೀದಿ ನಾಯಿಗಳು (Street Dogs) ಕೊಂದಿವೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ (CCTV ) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಗುವಿನ ತಂದೆ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ನಾಯಿಗಳು ಕಚ್ಚಿದ ಏಟಿಗೆ ಬಾಲಕನ ಹೊಟ್ಟೆಗೆ ತೀವ್ರತರ ಗಾಯಗಳಾಗಿದ್ದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಕೊನೆಯುಸಿರೆಳೆದಿದ್ದಾನೆ (Death) . ಈ ಘಟನೆ ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಹುಡುಗ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮೂರು ನಾಯಿಗಳು ಓಡಿ ಬಂದು ಅವನ ಮೇಲೆ ದಾಳಿ ಮಾಡಿ ಅವನನ್ನು ಕಚ್ಚಿ ಕೊಂದಿವೆ. ಅದಕ್ಕೂ ಮುನ್ನ, ಶನಿವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಬೀದಿನಾಯಿಗಳು ಕಚ್ಚಿ ಏಳು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿತ್ತು.

ಕನ್ಹಾ ಎಂಬ ಬಾಲಕ ಬಿಲಾಸ್‌ಪುರ ಗ್ರಾಮದ ತನ್ನ ಮನೆಯ ಹಿತ್ತಲಿನಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ಆತನ ಮೇಲೆ ದಾಳಿ ನಡೆಸಿದವು ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸೂರಜ್ ರೈ ತಿಳಿಸಿದ್ದಾರೆ. ಬೀದಿನಾಯಿಗಳು ಕನ್ಹಾಗೆ ಕಚ್ಚುತ್ತಲೇ ಇದ್ದವು ಮತ್ತು ಗ್ರಾಮಸ್ಥರು ಆತನನ್ನು ರಕ್ಷಿಸುವಷ್ಟರಲ್ಲಿ ಬಾಲಕನಿಗೆ ತೀವ್ರ ರಕ್ತಸ್ರಾವವಾಗಿತ್ತು ಎಂದು ಬಾಲಕನ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಗ್ರಾಮಸ್ಥರು ನಾಯಿಗಳನ್ನು ಓಡಿಸಿ, ಕನ್ಹಾನನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಮಗು ಸತ್ತಿರುವುದಾಗಿ ತಿಳಿಸಿದ್ದಾರೆ.

Also Read:

Used Cot: ಹಾಸಿಗೆ ಇದ್ದಷ್ಟು ಕಾಲು ಚಾಚುವುದು ಬಿಟ್ಟು, ಮಾವ ಸೆಕೆಂಡ್​ ಹ್ಯಾಂಡ್ ಮಂಚ ಕೊಟ್ರು ಅಂತಾ ಕೊನೆ ಕ್ಷಣದಲ್ಲಿ ಮದುವೆಗೆ ನಿರಾಕರಿಸಿದ ವರ!

ಜನವರಿಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಸ್ವಿಗ್ಗಿ ಡೆಲಿವರಿ ಎಕ್ಸಿಕ್ಯೂಟಿವ್ ಗಾಯಗೊಂಡು ಸಾವನ್ನಪ್ಪಿದರು. 23 ವರ್ಷದ ಯುವಕ ಆರ್ಡರ್ ನೀಡಲು ಬಂಜಾರಾ ಹಿಲ್ಸ್‌ನ ರಸ್ತೆ ಸಂಖ್ಯೆ 6 ರಲ್ಲಿರುವ ಲುಂಬಿನಿ ರಾಕ್ ಕ್ಯಾಸಲ್ ಅಪಾರ್ಟ್‌ಮೆಂಟ್‌ಗೆ ಬಂದು ಬಾಗಿಲು ಬಡಿದಾಗ, ಆ ಗ್ರಾಹಕ ಮನೆಯ ಸಾಕು ನಾಯಿ ಅವನನ್ನು ಹಿಂಬಾಲಿಸಿದೆ ಎಂದು ವರದಿಯಾಗಿದೆ. ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದಾಗ ಡೆಲಿವರಿ ಬಾಯ್​ ತಲೆಗೆ ತೀವ್ರ ಪೆಟ್ಟಾಗಿತ್ತು. ನಂತರ ಗ್ರಾಹಕರು ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (NIMS) ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆದರೂ ಆತ ಬದುಕುಳಿಯಲಿಲ್ಲ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಏಳು ತಿಂಗಳ ಹಸುಳೆಯನ್ನು ಬೀದಿ ನಾಯಿ ಕೊಂದು ಹಾಕಿತ್ತು. ಘಟನೆ ನಡೆದ ನೋಯ್ಡಾದ ಸೆಕ್ಟರ್ 100ರ ಲೋಟಸ್ ಬೊಲೆವಾರ್ಡ್ ಸೊಸೈಟಿಯಲ್ಲಿ ಕೂಲಿ ಕೆಲಸ ಮಾಡುವ ಶಿಶುವಿನ ಪಾಲಕರು ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:51 am, Tue, 21 February 23

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್