AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಅತ್ಯಾಚಾರ ವಿರೋಧಿಸಿದ್ದಕ್ಕೆ 3 ವರ್ಷದ ಮುದ್ದು ಮಗುವಿನ ಮುಖ ವಿರೂಪಗೊಳಿಸಿದ ಬಾಲಕ

ಬಾಲಕನೊಬ್ಬ ಮಗುವಿನ ಮುಖವನ್ನು ವಿರೂಪಗೊಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 16 ವರ್ಷದ ಬಾಲಕ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಆಕೆ ತಡೆಯಲು ಪ್ರಯತ್ನಿಸಿದಾಗ ಆತ ಕೋಪದಲ್ಲಿ ಕಲ್ಲುಗಳಿಂದ ಆಕೆಯ ಮುಖವನ್ನು ಜಜ್ಜಿ ವಿರೂಪಗೊಳಿಸಿದ್ದಾನೆ. ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಾಗ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಪೋಷಕರು ಮಗುವನ್ನು ಹುಡುಕಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ತಮಿಳುನಾಡು: ಅತ್ಯಾಚಾರ ವಿರೋಧಿಸಿದ್ದಕ್ಕೆ 3 ವರ್ಷದ ಮುದ್ದು ಮಗುವಿನ ಮುಖ ವಿರೂಪಗೊಳಿಸಿದ ಬಾಲಕ
ಮಗುImage Credit source: The Week
ನಯನಾ ರಾಜೀವ್
|

Updated on: Feb 26, 2025 | 8:08 AM

Share

ಚೆನ್ನೈ, ಫೆಬ್ರವರಿ 26: ಅತ್ಯಾಚಾರ ವಿರೋಧಿಸಿದ್ದಕ್ಕೆ 3 ವರ್ಷದ ಮಗುವಿನ ಮುಖವನ್ನು ಬಾಲಕ ವಿರೂಪಗೊಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 16 ವರ್ಷದ ಬಾಲಕ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ತಡೆಯಲು ಪ್ರಯತ್ನಿಸಿದ್ದಕ್ಕೆ ಕೋಪಗೊಂಡು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾನೆ. ಮೈಲಾಡುತುರೈ ಜಿಲ್ಲೆಯ ಸೀರ್ಕಾಳಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಅಂಗನವಾಡಿಯಿಂದ ಮಗು ಮನೆಗೆ ಹಿಂದಿರುಗುತ್ತಿದ್ದಾಗ, 16 ವರ್ಷದ ಬಾಲಕ ಆಕೆಗೆ ಚಾಕೊಲೇಟ್​ ಕೊಡಿಸುವ ಆಮಿಷವೊಡ್ಡಿ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಆಕೆ ಸಹಾಯಕ್ಕಾಗಿ ಕೂಗಿದಾಗ ಆಕೆಯ ಮುಖವನ್ನು ಕಲ್ಲಿನಿಂದ ಜಜ್ಜಿ ವಿರೂಪಗೊಳಿಸಿದ್ದಾನೆ. ಪದೇ ಪದೇ ಮುಖದ ಮೇಲೆ ಹಲ್ಲೆ ನಡೆಸಿ ಕಣ್ಣುಗಳಿಗೂ ತೀವ್ರವಾಗಿ ಗಾಯ ಮಾಡಿದ್ದಾನೆಂದು ತಿಳಿದುಬಂದಿದೆ.

ದಾಳಿಯಿಂದಾಗಿ ಮಗು ಪ್ರಜ್ಞೆ ಕಳೆದುಕೊಂಡಿತ್ತು, ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆಕೆಯನ್ನು ಹುಡುಕುತ್ತಿದ್ದ ಪೋಷಕರು ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆಕೆ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮತ್ತಷ್ಟು ಓದಿ: ಮಾಜಿ ಗರ್ಲ್​ಫ್ರೆಂಡ್​ಗೆ ಬೇರೊಬ್ಬನ ಜತೆ ಸಂಬಂಧ, ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ 16 ವರ್ಷದ ಬಾಲಕಿಯನ್ನು ಅಖಿಲ ಮಹಿಳಾ ಪೊಲೀಸ್ ಠಾಣೆ ಬಂಧಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಇತ್ತೀಚೆಗಷ್ಟೇ ತಮಿಳುನಾಡಿನ ಕೃಷ್ಣಾಪುರದ 15 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತನಾಗಿದ್ದ ಹುಡುಗನ ದಾಳಿಯಿಂದ ತಪ್ಪಿಸಿಕೊಂಡು ಗಂಟಲಿನ ಮೇಲೆ ಹಲವಾರು ಗಾಯಗಳಿಂದ ಆಸ್ಪತ್ರೆಗೆ ದಾಖಲಾದ ಒಂದು ದಿನದ ಬಳಿಕ ಈ ಘಟನೆ ಸಂಭವಿಸಿದೆ.

10 ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಅದೇ ಪ್ರದೇಶದ 12 ನೇ ತರಗತಿಯ ವಿದ್ಯಾರ್ಥಿ ಜತೆ ಇನ್​ಸ್ಟಾಗ್ರಾಂ ಮೂಲಕ ಸ್ನೇಹ ಬೆಳದಿತ್ತು. ಫೆಬ್ರವರಿ 23 ರ ರಾತ್ರಿ 10 ಗಂಟೆ ಸುಮಾರಿಗೆ ಆಕೆಯನ್ನು ಮನೆಯಿಂದ ಹೊರಗೆ ಕರೆದಿದ್ದ. ಆಕೆ ಹೊರಗೆ ಬಂದಾಗ, ಚಾಕುವಿನಿಂದ ಹಲ್ಲೆ ನಡೆಸಿ, 12 ಗ್ರಾಂ ಚಿನ್ನದ ಸರವನ್ನು ದೋಚಿದ್ದ. ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?