AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಶಾ ರವಿ ಬಂಧಿಸಿದ್ದು ಸರಿ: ದೆಹಲಿ ಪೊಲೀಸರನ್ನು ಸಮರ್ಥಿಸಿಕೊಂಡ ಅಮಿತ್ ಶಾ

Disha Ravi Arrest: ಈ ಪ್ರಕರಣದಲ್ಲಿ ಆಕೆಯ ವಯಸ್ಸು ಮತ್ತು ಉದ್ಯೋಗದ ಬಗ್ಗೆ ಮಾತನಾಡುವುದೇಕೆ? ಎಂದು ಪ್ರಶ್ನಿಸಿದ ಅಮಿತ್ ಶಾ, 22ರ ಹರೆಯದ ಪರಿಸರವಾದಿಯನ್ನು ಬಂಧಿಸಿದ್ದೇಕೆ ಎಂಬ ಮಾಧ್ಯಮದವರ ಪ್ರಶ್ನೆಯನ್ನು ಟೀಕಿಸಿದ್ದಾರೆ.

ದಿಶಾ ರವಿ ಬಂಧಿಸಿದ್ದು ಸರಿ: ದೆಹಲಿ ಪೊಲೀಸರನ್ನು ಸಮರ್ಥಿಸಿಕೊಂಡ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 19, 2021 | 5:06 PM

Share

ದೆಹಲಿ: ಟೂಲ್​ಕಿಟ್ ಪ್ರಕರಣದಲ್ಲಿ ಪರಿಸರವಾದಿ ದಿಶಾ ರವಿ ಬಂಧನವನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಅಮಿತ್ ಶಾ, ಅಪರಾಧ ಎಸೆಗಿದರೆ ಅಲ್ಲಿ ವಯಸ್ಸು, ಲಿಂಗ, ನೌಕರಿ ಅಪ್ರಸ್ತುತ ಎಂದಿದ್ದಾರೆ. ದೆಹಲಿ ಪೊಲೀಸರು ಈ ಪ್ರಕರಣವನ್ನು ನಿಖರವಾಗಿ ನಿಭಾಯಿಸುತ್ತಿದ್ದಾರೆ. ಈ ಪ್ರಕರಣವನ್ನು ಬಾಹ್ಯ ಅಂಶಗಳಿಂದ ನಿರ್ಣಯಿಸಬಾರದು.  ದಿಶಾ ರವಿ ಬಂಧನದ ಬಗ್ಗೆ ಕೇಳಿದಾಗ ವಯಸ್ಸು, ಲಿಂಗ ಅಥವಾ ನೌಕರಿಯ ಆಧಾರದಲ್ಲಿ ಅಪರಾಧವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂದು ಶಾ ಪ್ರಶ್ನಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ದೆಹಲಿ ಪೊಲೀಸರು ಮುಕ್ತವಾಗಿ ಈ ಪ್ರಕರಣವನ್ನು ನಿಭಾಯಿಸುತ್ತಿದ್ದಾರೆ. ಅವರ ಮೇಲೆ ಯಾವುದೇ ರಾಜಕೀಯ ಒತ್ತಡವಿಲ್ಲ. ಈ ಪ್ರಕರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಒಂದು ವೇಳೆ ಹೋರಾಟಗಾರ್ತಿ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲದೇ ಇದ್ದರೆ ದೆಹಲಿ ನ್ಯಾಯಾಲಯದ ಮೊರೆ ಹೋಗುವ ಅವಕಾಶ ದೆಹಲಿ ಪೊಲೀಸರಿಗಿದೆ.

ಈ ಪ್ರಕರಣದಲ್ಲಿ ಆಕೆಯ ವಯಸ್ಸು ಮತ್ತು ಉದ್ಯೋಗದ ಬಗ್ಗೆ ಮಾತನಾಡುವುದೇಕೆ? ಎಂದು ಪ್ರಶ್ನಿಸಿದ ಅಮಿತ್ ಶಾ, 22ರ ಹರೆಯದ ಪರಿಸರವಾದಿಯನ್ನು ಬಂಧಿಸಿದ್ದೇಕೆ ಎಂಬ ಮಾಧ್ಯಮದವರ ಪ್ರಶ್ನೆಯನ್ನು ಟೀಕಿಸಿದ್ದಾರೆ. 22ರ ಹರೆಯದ ಹಲವಾರು ಮಂದಿಯನ್ನು ಬಂಧಿಸಿರಬಹುದು. ದೆಹಲಿ ಪೊಲೀಸರ ಬಳಿ ಸಾಕ್ಷ್ಯಗಳಿರುವ ಕಾರಣದಿಂದಲೇ ಅವರು ಕ್ರಮ ಕೈಗೊಂಡಿದ್ದಾರೆ. ದೆಹಲಿ ಪೊಲೀಸರು ಕಾನೂನು ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಬಳಸಲಾಗಿರುವ ಐಪಿಎಸ್ ಸೆಕ್ಷನ್ ಬಗ್ಗೆ ಪೊಲೀಸರು ಈಗಾಗಲೇ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ ಗೃಹ ಸಚಿವರು.

ಏನಿದು ಟೂಲ್​ ಕಿಟ್​? ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಟೂಲ್​ಕಿಟ್​ ಒಂದನ್ನು ಸ್ವೀಡನ್​ನ ಪರಿಸರವಾದಿ   ಗ್ರೇಟಾ ಥನ್​ಬರ್ಗ್  ಟ್ವಿಟ್​ರ್​ನಲ್ಲಿ ಹಂಚಿಕೊಂಡಿದ್ದರು. ಟೂಲ್​​ಕಿಟ್​ ಎಂದರೆ, ಒಂದು ಪ್ರತಿಭಟನೆ ಅಥವಾ ಒಂದು ಕಾರ್ಯಕ್ರಮದ ಸಂಪೂರ್ಣ ರೂಪುರೇಷೆ. ಪ್ರತಿಭಟನೆ/ಕಾರ್ಯಕ್ರಮ ಹೇಗೆ ನಡೆಯಬೇಕು ಎನ್ನುವ ಮಾಹಿತಿ ಇದರಲ್ಲಿ ಇರುತ್ತದೆ. ಗ್ರೇಟಾ ಹಂಚಿಕೊಂಡಿದ್ದ ಟೂಲ್​ಕಿಟ್​ನಲ್ಲಿ , ಪ್ರತಿಭಟನೆಯಲ್ಲಿ ರೈತರು ಭಾಗವಹಿಸಬೇಕು, ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಅದಾನಿ-ಅಂಬಾನಿಯಂಥ ದೊಡ್ಡ ದೊಡ್ಡ ಉದ್ಯಮಿಗಳ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಗಣರಾಜ್ಯೋತ್ಸವ ದಿನದಂದು ರೈತರು ಟ್ರ್ಯಾಕ್ಟರ್​ ಜಾಥಾದಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎನ್ನುವುದಕ್ಕೆ ಸ್ಫೂರ್ತಿದಾಯಕವಾಗಿತ್ತು ಈ ಟೂಲ್​ಕಿಟ್​. ಆದರೆ, ಈ ಪ್ರತಿಭಟನೆ ಹಿಂಸಾಚಾರದೊಂದಿಗೆ ಅಂತ್ಯವಾಗಿತ್ತು. ಗ್ರೇಟಾ ಹಂಚಿಕೊಂಡ ಟೂಲ್​ಕಿಟ್​ ಅನ್ನು ದಿಶಾ ಪ್ರಸಾರ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ, ದೆಹಲಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ದಿಶಾ ರವಿ ಯಾರು?

ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ ಕುರಿತು 2018ರಲ್ಲಿ ದೊಡ್ಡ ಹೋರಾಟವನ್ನು ಹುಟ್ಟು ಹಾಕಿತ್ತು ಫ್ರೈಡೇ ಫಾರ್ ಫ್ಯೂಚರ್ ಸಂಸ್ಥೆ. ದಿಶಾ ಈ ಸಂಸ್ಥೆಯ ಸಹ ಸಂಸ್ಥಾಪಕಿ. ಮೌಂಟ್​ ಕಾರ್ಮಲ್​ ಕಾಲೇಜಿನಲ್ಲಿ ಬಿಬಿಎ ಪದವಿ ಪೂರೈಸಿದ್ದ ದಿಶಾ ರವಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಟೂಲ್​ ಕಿಟ್​ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಈ ತನಿಖೆಯ ಬೆನ್ನು ಹತ್ತಿ ಹೊರಟಾಗ ಬೆಂಗಳೂರಿನ ದಿಶಾ ರವಿ ಹೆಸರು ಬೆಳಕಿಗೆ ಬಂದಿತ್ತು. ಇವರು ಟೂಲ್​ ಕಿಟ್​ ಪ್ರಸಾರದಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ. ಹೀಗಾಗಿ ಇವರ ವಿರುದ್ಧ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 153ಎ (ಎರಡು ಗುಂಪಿನ ನಡುವೆ ವೈರತ್ವ ಬೆಳೆಸುವುದು) ಅಡಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿಗೆ ಬಂದ ದೆಹಲಿ ಪೊಲೀಸರು ಫೆಬ್ರವರಿ 13ರಂದು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: Fact Check: ಆಕೆಯ ಹೆಸರು ದಿಶಾ ರವಿ, ದಿಶಾ ರವಿ ಜೋಸೆಫ್ ಅಲ್ಲ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!