AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​ಕೌಂಟರ್: ಲಷ್ಕರ್ ಕಮಾಂಡರ್ ಮುದಾಸೀರ್ ಪಂಡಿತ್ ಸೇರಿ ಮೂವರು ಉಗ್ರರು ಬಲಿ

Jammu and Kashmir Encounter: ಭಯೋತ್ಪಾದನೆಗೆ ಸಂಬಂಧಿಸಿದ ಹಲವಾರು ಅಪರಾಧಗಳ ಹೊರತಾಗಿ ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಪಂಡಿತ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಸ್ಥ (ಐಜಿ) ವಿಜಯ್ ಕುಮಾರ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​ಕೌಂಟರ್: ಲಷ್ಕರ್ ಕಮಾಂಡರ್ ಮುದಾಸೀರ್ ಪಂಡಿತ್ ಸೇರಿ ಮೂವರು ಉಗ್ರರು ಬಲಿ
ಜಮ್ಮು ಎನ್​ಕೌಂಟರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 21, 2021 | 11:50 AM

Share

ಶ್ರೀನಗರ: ಉತ್ತರ ಕಾಶ್ಮೀರದ ಸೊಪೋರ್ ಗ್ರಾಮದಲ್ಲಿ ಹಿರಿಯ ಲಷ್ಕರ್ ಉಗ್ರ ಮುದಾಸೀರ್ ಪಂಡಿತ್ ಮತ್ತು ಇನ್ನಿಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಮುಖಾಮುಖಿ ಭಾನುವಾರ ಸಂಜೆ ತಂತ್ರಾಯಿಪೊರಾ ಬ್ರಾಥ್ ಗ್ರಾಮದಲ್ಲಿ ಆರಂಭವಾಗಿತ್ತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದನೆಗೆ ಸಂಬಂಧಿಸಿದ ಹಲವಾರು ಅಪರಾಧಗಳ ಹೊರತಾಗಿ ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಪಂಡಿತ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಸ್ಥ (ಐಜಿ) ವಿಜಯ್ ಕುಮಾರ್ ಹೇಳಿದ್ದಾರೆ.

ಈ ದಾಳಿಗೆ ಲಷ್ಕರ್-ಎ-ತೈಬಾ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ವಿಜಯ್ ಕುಮಾರ್ ಅವರು ಸೊಪೋರ್‌ನಲ್ಲಿ ಹಿರಿಯ ಸೇನೆ ಮತ್ತು ಸಿಆರ್‌ಪಿಎಫ್ ಅಧಿಕಾರಿಗಳನ್ನು ಭೇಟಿಯಾದರು .ಜೂನ್ 12 ರಂದು ಪೊಲೀಸರ ಮೇಲಿನ ದಾಳಿಯಲ್ಲಿ ಭಾಗಿಯಾದ ಇಬ್ಬರು ಸ್ಥಳೀಯ ಭಯೋತ್ಪಾದಕರಲ್ಲಿ ಮುದಾಸೀರ್ ಪಂಡಿತ್ ಒಬ್ಬರು ಎಂದು ಅವರು ಹೇಳಿದರು.

ಇದನ್ನೂ ಓದಿ: Terror Attack: ಉತ್ತರ ಕಾಶ್ಮೀರದಲ್ಲಿ ಉಗ್ರರ ದಾಳಿ; ಭಯೋತ್ಪಾದಕರ ಗುಂಡಿಗೆ ಇಬ್ಬರು ಪೊಲೀಸರು, ಇಬ್ಬರು ನಾಗರಿಕರು ಸಾವು

(Top Lashkar terrorist Mudasir Pandit and two other terrorists have been killed in Jammu and Kashmir encounter)

Published On - 11:49 am, Mon, 21 June 21

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?