AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನ ಶಾರ್ಪ್​​ ಶೂಟರ್​ ನವೀನ್ ಕುಮಾರ್​, ಎನ್​ಕೌಂಟರ್​ನಲ್ಲಿ ಸಾವು

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್ ಶೂಟರ್ ನವೀನ್ ಕುಮಾರ್ನನ್ನು ಉತ್ತರ ಪ್ರದೇಶದ ಹಾಪುರದಲ್ಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.ಎಸ್‌ಟಿಎಫ್ ಮತ್ತು ದೆಹಲಿ ಪೊಲೀಸ್ ವಿಶೇಷ ಕೋಶದ ಜಂಟಿ ಕಾರ್ಯಾಚರಣೆ ಬುಧವಾರ ರಾತ್ರಿ ನಡೆದಿದ್ದು, ಈ ಸಂದರ್ಭದಲ್ಲಿ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ನವೀನ್ ಕುಮಾರ್ ಗಾಜಿಯಾಬಾದ್‌ನ ಲೋನಿ ನಿವಾಸಿ ಆಗಿದ್ದ ಹಾಗೂ 20 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿ ಆಗಿದ್ದ. ಎನ್‌ಕೌಂಟರ್ ಸಂದರ್ಭದಲ್ಲಿ ಒಬ್ಬ ಎಸ್‌ಟಿಎಫ್ ಜವಾನ ಮತ್ತು ಒಬ್ಬ ದೆಹಲಿ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ.

ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನ ಶಾರ್ಪ್​​ ಶೂಟರ್​ ನವೀನ್ ಕುಮಾರ್​, ಎನ್​ಕೌಂಟರ್​ನಲ್ಲಿ ಸಾವು
ಕ್ರೈಂ
ನಯನಾ ರಾಜೀವ್
|

Updated on: May 29, 2025 | 11:25 AM

Share

ಹಾಪುರ್, ಮೇ 29: ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi) ಗ್ಯಾಂಗ್​ನ ಶಾರ್ಪ್​ ಶೂಟರ್ ನವೀನ್​ ಕುಮಾರ್​ನನ್ನು ಉತ್ತರ ಪ್ರದೇಶದ ಹಾಪುರದಲ್ಲಿ ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ಬುಧವಾರ ರಾತ್ರಿ ಉತ್ತರ ಪ್ರದೇಶದ ಎಸ್​ಟಿಎಫ್ ಮತ್ತು ದೆಹಲಿ ಪೊಲೀಸ್ ವಿಶೇಷ ಕೋಶದ ಜಂಟಿ ತಂಡ ನಡೆಸಿದ ಎನ್​ಕೌಂಟರ್​ನಲ್ಲಿ ಪ್ರಮುಖ ಶಾರ್ಪ್​ ಶೂಟರ್ ಮತ್ತು ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​​ನ ಸಕ್ರಿಯ ಸದಸ್ಯ ನವೀನ್ ಕುಮಾರ್ ಸಾವನ್ನಪ್ಪಿದ್ದಾನೆ.

ಕೊಲೆಯಾದ ನವೀನ್ ಕುಮಾರ್ ಗಾಜಿಯಾಬಾದ್‌ನ ಲೋನಿ ನಿವಾಸಿ. ನವೀನ್ ಕುಮಾರ್ ವಿರುದ್ಧ ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅವರು ಮೋಕಾ ಪ್ರಕರಣದಲ್ಲಿ ಬೇಕಾಗಿದ್ದ. ಈ ಎನ್‌ಕೌಂಟರ್‌ನಲ್ಲಿ ಒಬ್ಬ ಎಸ್‌ಟಿಎಫ್ ಜವಾನ ಮತ್ತು ಒಬ್ಬ ದೆಹಲಿ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ.

ಈ ಪ್ರದೇಶದಲ್ಲಿ ಗ್ಯಾಂಗ್​ಸ್ಟರ್​ಗಳು ಅಡಗಿರುವ ಕುರಿತು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಶಂಕಿತರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದರು.ಇದು ಭೀಕರ ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಎಡಿಜಿ ಅಮಿತಾಭ್ ಯಶ್ ಹೇಳಿದ್ದಾರೆ.

ಮತ್ತಷ್ಟು ಓದಿ: ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮುಂದಿನ ಟಾರ್ಗೆಟ್ ಯಾರು?

ಗುಂಡಿನ ದಾಳಿಯಲ್ಲಿ ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದ ಎಂದು ಯಶ್ ಹೇಳಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಕೊಲೆ, ಕೊಲೆಯತ್ನ, ಅಪಹರಣ, ದರೋಡೆ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೋಕಾ) ಅಡಿಯಲ್ಲಿ ಗಂಭೀರ ಆರೋಪಗಳು ಸೇರಿದಂತೆ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆತ ಬೇಕಾಗಿದ್ದ.

ದೆಹಲಿಯಲ್ಲಿ ನಡೆದ ಎರಡು ಕೊಲೆ ಪ್ರಕರಣಗಳಲ್ಲಿ ನವೀನ್ ದೋಷಿ ಎಂದು ಎಸ್‌ಟಿಎಫ್ ಹೆಚ್ಚುವರಿ ಎಸ್‌ಪಿ ಆರ್‌ಕೆ ಮಿಶ್ರಾ ತಿಳಿಸಿದ್ದಾರೆ. ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ ಅವರು ತಲೆಮರೆಸಿಕೊಂಡಿದ್ದ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಮತ್ತೊಬ್ಬ ಉನ್ನತ ಲೆಫ್ಟಿನೆಂಟ್ ಹಾಶಿಮ್ ಬಾಬಾನ ಅತ್ಯಂತ ವಿಶ್ವಾಸಾರ್ಹ ಸಹಾಯಕರಲ್ಲಿ ನವೀನ್ ಒಬ್ಬನೆಂದು ಪರಿಗಣಿಸಲ್ಪಟ್ಟಿದ್ದ. ಉತ್ತರ ಪ್ರದೇಶ ಪೊಲೀಸರು ರಾಜ್ಯಾದ್ಯಂತ ಅಪರಾಧಿಗಳ ವಿರುದ್ಧ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಲಕ್ನೋ, ಗಾಜಿಯಾಬಾದ್, ಆಗ್ರಾ, ಬಾಗ್‌ಪತ್, ಫಿರೋಜಾಬಾದ್, ಜಲೌನ್, ಬಲ್ಲಿಯಾ, ಹಾಪುರ್ ಮತ್ತು ಉನ್ನಾವೊದಲ್ಲಿ ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ ಹಲವಾರು ವಾಂಟೆಡ್ ಕ್ರಿಮಿನಲ್‌ಗಳನ್ನು ಬಂಧಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ 11 ಎನ್‌ಕೌಂಟರ್‌ಗಳಲ್ಲಿ ಕನಿಷ್ಠ 14 ಅಪರಾಧಿಗಳನ್ನು ಬಂಧಿಸಲಾಗಿದೆ. ಪೊಲೀಸರು ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಕದ್ದ ಮಾಲುಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಒಂದು ಎನ್‌ಕೌಂಟರ್‌ನಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಕಮಲ್ ಕಿಶೋರ್ ಅಲಿಯಾಸ್ ಭದ್ದರ್, ಪೊಲೀಸರೊಂದಿಗಿನ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ