ಭಾರತೀಯ ಸೇನಾಪಡೆಯಿಂದ ಶ್ರೀನಗರದಲ್ಲಿ ಎಲ್​ಇಟಿ ಕಮಾಂಡರ್, ಪಾಕಿಸ್ತಾನಿ ಉಗ್ರನ ಹತ್ಯೆ

ಶ್ರೀನಗರದ ಶಾಲಿಮಾರ್‌ನಲ್ಲಿ ಎಲ್‌ಇಟಿಯ ಉನ್ನತ ಕಮಾಂಡರ್ ಸಲೀಂ ಪರ್ರೆ ಮತ್ತು ಪಾಕಿಸ್ತಾನಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಎನ್‌ಕೌಂಟರ್‌ನಲ್ಲಿ ಆ ಉಗ್ರರನ್ನು ತಟಸ್ಥಗೊಳಿಸಲಾಯಿತು

ಭಾರತೀಯ ಸೇನಾಪಡೆಯಿಂದ ಶ್ರೀನಗರದಲ್ಲಿ ಎಲ್​ಇಟಿ ಕಮಾಂಡರ್, ಪಾಕಿಸ್ತಾನಿ ಉಗ್ರನ ಹತ್ಯೆ
ಸೇನಾ ಕಾರ್ಯಾಚರಣೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 03, 2022 | 9:28 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶಾಲಿಮಾರ್‌ನಲ್ಲಿ ಭದ್ರತಾ ಪಡೆಗಳು ಇಂದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಉಗ್ರರಲ್ಲಿ ಒಬ್ಬನಾದ ಸಲೀಂ ಪರ್ರೆ ಲಷ್ಕರ್ ಇ ತೈಬಾ (ಎಲ್‌ಇಟಿ) ಕಮಾಂಡರ್ ಆಗಿದ್ದ. ಇನ್ನೊಬ್ಬ ಭಯೋತ್ಪಾದಕನನ್ನು ಪಾಕಿಸ್ತಾನದ ಹಫೀಜ್ ಅಲಿಯಾಸ್ ಹಮ್ಜಾ ಎಂದು ಗುರುತಿಸಲಾಗಿದ್ದು, ಆತ ಬಂಡಿಪೋರಾದಲ್ಲಿ ಇಬ್ಬರು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ.

ಇಂದು ಮಧ್ಯಾಹ್ನ ನಮಗೆ ಶ್ರೀನಗರದ ಶಾಲಿಮಾರ್‌ನಲ್ಲಿ ಎಲ್‌ಇಟಿಯ ಉನ್ನತ ಕಮಾಂಡರ್ ಸಲೀಂ ಪರ್ರೆ ಮತ್ತು ಪಾಕಿಸ್ತಾನಿ ಭಯೋತ್ಪಾದಕರು ಇರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಎನ್‌ಕೌಂಟರ್‌ನಲ್ಲಿ ಆ ಉಗ್ರರನ್ನು ತಟಸ್ಥಗೊಳಿಸಲಾಯಿತು ಎಂದು ಕಾಶ್ಮೀರದ ಐಜಿಪಿ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಶ್ರೀನಗರ ಎನ್‌ಕೌಂಟರ್‌ನಲ್ಲಿ ತಟಸ್ಥಗೊಂಡ ಎರಡನೇ ಭಯೋತ್ಪಾದಕನನ್ನು ಪಾಕಿಸ್ತಾನದ ಹಫೀಜ್ ಅಲಿಯಾಸ್ ಹಮ್ಜಾ ಎಂದು ಗುರುತಿಸಲಾಗಿದೆ. ಬಂಡಿಪೋರಾದಲ್ಲಿ 2 ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಈತ ಭಯೋತ್ಪಾದನಾ ಘಟನೆಯ ನಂತರ ಶ್ರೀನಗರದ ಹರ್ವಾನ್ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದ.

ಕಳೆದ ವಾರ ಸೇನಾ ಪಡೆ ಸಿಬ್ಬಂದಿ ಕೇವಲ 36 ಗಂಟೆಗಳಲ್ಲಿ 9 ಭಯೋತ್ಪಾದಕರನ್ನು ಎನ್​ಕೌಂಟರ್ ಮಾಡಿದ್ದರು. ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯು ಉಗ್ರರಿರುವ ಪ್ರದೇಶವನ್ನು ಸುತ್ತುವರೆದ ನಂತರ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು.

ಗುರುವಾರ ರಾತ್ರಿ ಶ್ರೀನಗರದಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈದ ಕೇವಲ ಮೂರು ದಿನಗಳ ನಂತರ ಕಾರ್ಯಾಚರಣೆ ನಡೆದಿದೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು 36 ಗಂಟೆಗಳ ಅವಧಿಯಲ್ಲಿ 9 ಭಯೋತ್ಪಾದಕರನ್ನು ಹತ್ಯೆ ಮಾಡಿತ್ತು. ಶ್ರೀನಗರದ ಪಂಥಾ ಚೌಕ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.

ಇದನ್ನೂ ಓದಿ: 2019ರ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್​ಕೌಂಟರ್

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ