Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಕೇಸ್​: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಹೇಮಂತ್ ಸೊರೇನ್ ಅರೆಸ್ಟ್

Hemant Soren: ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಸೊರೆನ್ ಅವರನ್ನು ಬಂಧಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಕೇಸ್​: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಹೇಮಂತ್ ಸೊರೇನ್ ಅರೆಸ್ಟ್
ಹೇಮಂತ್ ಸೊರೆನ್
Follow us
ರಶ್ಮಿ ಕಲ್ಲಕಟ್ಟ
| Updated By: ರಮೇಶ್ ಬಿ. ಜವಳಗೇರಾ

Updated on:Jan 31, 2024 | 10:31 PM

ರಾಂಚಿ ಜನವರಿ 31: ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ (Jharkhand ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರನ್ನು ಇಡಿ ಬಂಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಹೇಮಂತ್ ಸೊರೇನ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹೇಮಂತ್ ಸೊರೇನ್  ಬಂಧನದ ಬಗ್ಗೆ  ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬುಧವಾರ ಬೆಳಗ್ಗೆಯಿಂದ ಜಾರ್ಖಂಡ್ (Jharkhand ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರ ರಾಂಚಿಯಲ್ಲಿರುವ ನಿವಾಸದಲ್ಲಿ ಮೊಕ್ಕಾಂ ಹೂಡಿದ್ದು, ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದರು. ಸೋರೆನ್ ಅವರ ನಿವಾಸದ ಹೊರಗೆ ಭಾರೀ ಪೊಲೀಸ್ ಬಂದೋಬಸ್ತ್ ಇದೆ.ಜಾರ್ಖಂಡ್ ಮುಕ್ತಿ ಮೋರ್ಚಾದ ನಾಯಕ ತನ್ನ ದೆಹಲಿ ನಿವಾಸದಿಂದ “ಕಾಣೆಯಾಗಿದ್ದರು.

48ರ ಹರೆಯದ ಸೊರೆನ್ ಅವರನ್ನು ಈ ಹಿಂದೆ ಜನವರಿ 20 ರಂದು ಪ್ರಶ್ನಿಸಲಾಗಿತ್ತು, ನಂತರ ಸಂಸ್ಥೆಯು ಈ ವಾರಕ್ಕೆ ಎರಡನೇ ಸಮನ್ಸ್ ನೀಡಿತು. ಏಜೆನ್ಸಿಯು ಅವರಿಗೆ ಜನವರಿ 29 ಅಥವಾ 31 ರಂದು ಎರಡು ದಿನಾಂಕಗಳನ್ನು ನೀಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ.

ಸೊರೆನ್ ಖಾಸಗಿ ವಿಮಾನದಲ್ಲಿ ಶನಿವಾರ ದೆಹಲಿಗೆ  ಹೋಗಿದ್ದು ಭಾನುವಾರ ರಾತ್ರಿಯ ಹೊತ್ತಿಗೆ ರಾಷ್ಟ್ರ ರಾಜಧಾನಿಯಲ್ಲಿರುವ ಅವರ ಮನೆಯಿಂದ ಕಣ್ಮರೆಯಾದ್ದರು. ಅವರು ಸುಮಾರು 1,300-ಕಿಮೀ ರಸ್ತೆಯಲ್ಲಿ ವಾಹನ ಚಾಲನೆ ಮಾಡಿಕೊಂಡು ವಾಪಸ್ ಮನೆಗೆ ಹಿಂದಿರುಗಿದ್ದರು.

ಏತನ್ಮಧ್ಯೆ, ಇಡಿ ಸೋಮವಾರ (ಜನವರಿ 29) ಮುಂಜಾನೆ ದೆಹಲಿ ಮನೆಗೆ ಇಡಿ ಲಗ್ಗೆ ಇಟ್ಟಿತ್ತು. ಅಲ್ಲಿ ಹುಡುಕಿದಾಗ ₹ 36 ಲಕ್ಷ ನಗದು ಪತ್ತೆಯಾಗಿದೆ, ಅವರ  ಐಷಾರಾಮಿ ಎಸ್ಯುವಿಯನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಜಾರಿ ನಿರ್ದೇಶನಾಲಯದಿಂದ ಶಿಯೋಮಿ ಇಂಡಿಯಾದ 5,551 ಕೋಟಿ ರೂಪಾಯಿ ವಶಕ್ಕೆ

ಜಾರ್ಖಂಡ್‌ನಲ್ಲಿ “ಮಾಫಿಯಾದಿಂದ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆಯ” ತನಿಖೆಯ ಭಾಗವಾಗಿ  ಸೊರೆನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ 14 ಮಂದಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Wed, 31 January 24

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ