AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ, ಬಿಹಾರದಲ್ಲಿ ಎರಡು ಪ್ರತ್ಯೇಕ ಅಪಘಾತ, 15 ಮಂದಿ ಸಾವು

ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ಭಾನುವಾರ ಸಂಜೆ ಅಪಘಾತ ಸಂಭವಿಸಿದೆ. ಹಾಗೆಯೇ ಉತ್ತರ ಪ್ರದೇಶದಲ್ಲೂ ಬಸ್​ ಹಾಗೂ ಟ್ರ್ಯಾಕ್ಟರ್ ಹಾಗೂ ಬಸ್​ ನಡುವೆ ಡಿಕ್ಕಿ ಸಂಭವಿಸಿದೆ.

ಉತ್ತರ ಪ್ರದೇಶ, ಬಿಹಾರದಲ್ಲಿ ಎರಡು ಪ್ರತ್ಯೇಕ ಅಪಘಾತ, 15 ಮಂದಿ ಸಾವು
ಅಪಘಾತImage Credit source: Moneycontrol.com
ನಯನಾ ರಾಜೀವ್
|

Updated on: Feb 26, 2024 | 8:40 AM

Share

ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ಭಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಎನ್‌ಎಚ್ 2 ರ ಉದ್ದಕ್ಕೂ ದೇವಕಾಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಸಾರಾಮ್‌ನಿಂದ ವಾರಾಣಸಿಗೆ ತೆರಳುತ್ತಿದ್ದ ಕಾರು, ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಆಗ ಎದುರಿನ ಲೇನ್‌ಗೆ ದ್ವಿಚಕ್ರವಾಹನ ಮತ್ತು ಕಾರು ಪಲ್ಟಿಯಾಗಿ ಟ್ರಕ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ವಾಹನ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಎಂಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕಾರು ಬಕ್ಸರ್‌ನಲ್ಲಿ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ ಮತ್ತು ಮುಂಬೈ ವಿಳಾಸವನ್ನು ಹೊಂದಿರುವ ಎರಡು ಆಧಾರ್ ಕಾರ್ಡ್‌ಗಳನ್ನು ಮೃತರಿಂದ ವಶಪಡಿಸಿಕೊಳ್ಳಲಾಗಿದೆ.

ಸಂತ್ರಸ್ತರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಮೊಹಾನಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಕುಮಾರ್ ಹೇಳಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ

ಉತ್ತರ ಪ್ರದೇಶದಲ್ಲಿ ಅಪಘಾತ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ರೋಡ್‌ವೇಸ್ ಬಸ್ ಪ್ರಯಾಗ್‌ರಾಜ್‌ನಿಂದ ಜಾನ್‌ಪುರಕ್ಕೆ ತೆರಳುತ್ತಿತ್ತು. ಭಾನುವಾರ ರಾತ್ರಿ 11.15ರ ಸುಮಾರಿಗೆ ಸಮದ್‌ಗಂಜ್ ಬಳಿ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ, ಆರರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತು ಆರನೆಯವರು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ಟ್ರ್ಯಾಕ್ಟರ್ ಟ್ರಾಲಿಯಲ್ಲಿ 12 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು