Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 2.55 ಕೋಟಿ ರೂ. ಸಂಗ್ರಹ

ನಿನ್ನೆ (ಆಗಸ್ಟ್, 12) 2.55 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 21446 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ.

ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 2.55 ಕೋಟಿ ರೂ. ಸಂಗ್ರಹ
ತಿರುಪತಿ ದೇವಾಲಯ
Follow us
TV9 Web
| Updated By: preethi shettigar

Updated on:Aug 13, 2021 | 10:58 AM

ತಿರುಪತಿ: ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಭಕ್ತರು ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಆಂಧ್ರಪ್ರದೇಶದಲ್ಲಿನ ತಿರುಮಲದ‌ ಬಾಲಾಜಿ ದೇವಾಲಯವೂ ಕೂಡ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಆ ಪ್ರಕಾರ ಕಳೆದ‌ 24 ಗಂಟೆಗಳಲ್ಲಿ ತಿರುಮಲದ‌ ಬಾಲಾಜಿ ದೇವಾಲಯದ ಹುಂಡಿಯಲ್ಲಿ ಅಧಿಕ ಪ್ರಮಾಣದ ಆದಾಯ‌ ಸಂಗ್ರಹವಾಗಿದೆ. ನಿನ್ನೆ (ಆಗಸ್ಟ್, 12) 2.55 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 21446 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 10348 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

ಕಳೆದ ಬಾರಿ ಅಂದರೆ ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ಗೂ ಮುನ್ನ ತಿರುಮಲದ ಬಾಲಾಜಿ ದೇವಸ್ಥಾನದಲ್ಲಿ 800 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುತ್ತಿತ್ತು. ನಂತರ ಅಂದರೆ ಮೊದಲ ಕೊರೊನಾ ಅಲೆಯ ಅನ್​ಲಾಕ್​ ಬಳಿಕ (ಜೂನ್ 2020 ರಲ್ಲಿ )ಕೊವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹಲವಾರು ನಿರ್ಬಂಧಗಳೊಂದಿಗೆ ಈ ದೇವಾಲಯವನ್ನು ತೆರೆಯಲಾಯಿತು. ಅದರಂತೆ ಟಿಕೆಟ್ ಸಂಗ್ರಹಣೆ, ಪ್ರಸಾದಗಳ ಮಾರಾಟ, ವಸತಿ ಸೌಕರ್ಯಗಳು ಮತ್ತು ಹುಂಡಿ ಸಂಗ್ರಹಗಳು ಸೇರಿದಂತೆ ಒಟ್ಟಾರೆ ಆದಾಯದ ಮೇಲೆ ಪರಿಣಾಮ ಬೀರಿತು. ಆ ಪ್ರಕಾರ 100-150 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

ಕೊವಿಡ್​ಗೂ ಮುನ್ನ60,000ದಿಂದ ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು ಮತ್ತು ಸರಾಸರಿ ಹುಂಡಿ ಸಂಗ್ರಹವು ಪ್ರತಿದಿನ ಸುಮಾರು 3.5 ರಿಂದ 5 ಕೋಟಿ ರೂಪಾಯಿವರೆಗೆ ಸಂಗ್ರಹವಾಗುತ್ತಿತ್ತು. ಮೊದಲನೇ ಅಲೆಯ ಲಾಕ್​ಡೌನ್​ ಮುಗಿದ ನಂತರ ಹಂತ ಹಂತವಾಗಿ ಹುಂಡಿ ಆದಾಯ ಹೆಚ್ಚಾಗಿದ್ದು, ಜೂನ್‌ನಲ್ಲಿ ದೇವಾಲಯಕ್ಕೆ 1.1 ಕೋಟಿ ರೂಪಾಯಿ, ಜುಲೈ 16.69 ಕೋಟಿ ರೂಪಾಯಿ, ಆಗಸ್ಟ್ 18.43 ಕೋಟಿ ರೂಪಾಯಿ, ಸೆಪ್ಟೆಂಬರ್ 32.04 ಕೋಟಿ ರೂಪಾಯಿ, ಅಕ್ಟೋಬರ್ 47.52 ಕೋಟಿ ರೂಪಾಯಿ, ನವೆಂಬರ್ 61.29 ಕೋಟಿ ರೂಪಾಯಿ, ಡಿಸೆಂಬರ್ 79.64 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಕ್ರೀಡಾಪಟು ಪಿ.ವಿ ಸಿಂಧು ತಿರುಪತಿಗೆ ಭೇಟಿ ಈ ಬಾರಿಯ ಟೊಕಿಯೋ ಒಲಂಪಿಕ್ಸ್​ನ್ಲಲಿ ಕಂಚಿನ ಪದಕ ಗೆದ್ದ ಕ್ರೀಡಾಪಟು ಪಿ.ವಿ ಸಿಂಧು,  ಆಂಧ್ರದ ತಿರುಮಲದಲ್ಲಿ‌ ಬಾಲಾಜಿಯ ದರ್ಶನ‌ ಪಡೆದಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಿ.ವಿ ಸಿಂಧುಗೆ ದೇವಾಲಯದ ಅಧಿಕಾರಿಗಳು ಸ್ವಾಗತ ಕೋರಿದ್ದಾರೆ. ಈ ವೇಳೆ ಬಾಲಾಜಿಯ ದರ್ಶನ, ತೀರ್ಥ‌ ಪ್ರಸಾದಕ್ಕೆ ದೇವಾಲಯದ ಅರ್ಚಕರು ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ತಿರುಪತಿ ಟಿಟಿಡಿ‌ ಬೋರ್ಡ್ ಅಧ್ಯಕ್ಷರಾಗಿ ಸಿಎಂ ಜಗನ್ ಸಂಬಂಧಿ​ ಸುಬ್ಬಾರೆಡ್ಡಿ ಮರು ನೇಮಕ

ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ; ಮನದಾಳದ ಮಾತು ಹಂಚಿಕೊಂಡ ಜಾನ್ವಿ ಕಪೂರ್

Published On - 10:54 am, Fri, 13 August 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ