Tirupati Temple : ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 1.80 ಕೋಟಿ ರೂ. ಸಂಗ್ರಹ

Tirupati Temple : ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 1.80 ಕೋಟಿ ರೂ. ಸಂಗ್ರಹ
ತಿರುಪತಿ ದೇವಾಲಯ

ನಿನ್ನೆ (ಆಗಸ್ಟ್, 03) 1.80 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 20,421 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 9528 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

TV9kannada Web Team

| Edited By: preethi shettigar

Aug 04, 2021 | 9:58 AM

ತಿರುಪತಿ: ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಭಕ್ತರು ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಆಂಧ್ರಪ್ರದೇಶದಲ್ಲಿನ ತಿರುಮಲದ‌ ಬಾಲಾಜಿ ದೇವಾಲಯವೂ ಕೂಡ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಆ ಪ್ರಕಾರ ಕಳೆದ‌ 24 ಗಂಟೆಗಳಲ್ಲಿ ತಿರುಮಲದ‌ ಬಾಲಾಜಿ ದೇವಾಲಯದ ಹುಂಡಿಯಲ್ಲಿ(Temple Hundi) ಅಧಿಕ ಪ್ರಮಾಣದ ಆದಾಯ‌ ಸಂಗ್ರಹವಾಗಿದೆ. ನಿನ್ನೆ (ಆಗಸ್ಟ್, 03) 1.80 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 20,421 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 9528 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

ಕಳೆದ ಬಾರಿ ಅಂದರೆ ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ಗೂ ಮುನ್ನ ತಿರುಮಲದ ಬಾಲಾಜಿ ದೇವಸ್ಥಾನದಲ್ಲಿ 800 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುತ್ತಿತ್ತು. ನಂತರ ಅಂದರೆ ಮೊದಲ ಕೊರೊನಾ ಅಲೆಯ ಅನ್​ಲಾಕ್​ ಬಳಿಕ (ಜೂನ್ 2020 ರಲ್ಲಿ )ಕೊವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹಲವಾರು ನಿರ್ಬಂಧಗಳೊಂದಿಗೆ ಈ ದೇವಾಲಯವನ್ನು ತೆರೆಯಲಾಯಿತು. ಅದರಂತೆ ಟಿಕೆಟ್ ಸಂಗ್ರಹಣೆ, ಪ್ರಸಾದಗಳ ಮಾರಾಟ, ವಸತಿ ಸೌಕರ್ಯಗಳು ಮತ್ತು ಹುಂಡಿ ಸಂಗ್ರಹಗಳು ಸೇರಿದಂತೆ ಒಟ್ಟಾರೆ ಆದಾಯದ ಮೇಲೆ ಪರಿಣಾಮ ಬೀರಿತು. ಆ ಪ್ರಕಾರ 100-150 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

ಕೊವಿಡ್​ಗೂ ಮುನ್ನ60,000ದಿಂದ ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು ಮತ್ತು ಸರಾಸರಿ ಹುಂಡಿ ಸಂಗ್ರಹವು ಪ್ರತಿದಿನ ಸುಮಾರು 3.5 ರಿಂದ 5 ಕೋಟಿ ರೂಪಾಯಿವರೆಗೆ ಸಂಗ್ರಹವಾಗುತ್ತಿತ್ತು. ಮೊದಲನೇ ಅಲೆಯ ಲಾಕ್​ಡೌನ್​ ಮುಗಿದ ನಂತರ ಹಂತ ಹಂತವಾಗಿ ಹುಂಡಿ ಆದಾಯ ಹೆಚ್ಚಾಗಿದ್ದು, ಜೂನ್‌ನಲ್ಲಿ ದೇವಾಲಯಕ್ಕೆ 1.1 ಕೋಟಿ ರೂಪಾಯಿ, ಜುಲೈ 16.69 ಕೋಟಿ ರೂಪಾಯಿ, ಆಗಸ್ಟ್ 18.43 ಕೋಟಿ ರೂಪಾಯಿ, ಸೆಪ್ಟೆಂಬರ್ 32.04 ಕೋಟಿ ರೂಪಾಯಿ, ಅಕ್ಟೋಬರ್ 47.52 ಕೋಟಿ ರೂಪಾಯಿ, ನವೆಂಬರ್ 61.29 ಕೋಟಿ ರೂಪಾಯಿ, ಡಿಸೆಂಬರ್ 79.64 ಕೋಟಿ ರೂಪಾಯಿ ಸಂಗ್ರಹವಾಗಿದೆ.

ದೇಶಾದ್ಯಂತ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ, ತಿರುಮಲದ ಬಾಲಾಜಿ ದೇವಸ್ಥಾನದ ಹುಂಡಿ ಹಣದ ಸಂಗ್ರಹವು 2021ರ ಜನವರಿಯಲ್ಲಿ 83.92 ಕೋಟಿ ರೂಪಾಯಿ ಮತ್ತು ಫೆಬ್ರವರಿಯಲ್ಲಿ 90.45 ಕೋಟಿ ರೂಪಾಯಿ, ಮಾರ್ಚ್ ಹುಂಡಿ ಸಂಗ್ರಹವು 12 ತಿಂಗಳಲ್ಲಿ ಮೊದಲ ಬಾರಿಗೆ 100 ಕೋಟಿ ಗಡಿ ದಾಟಿತು ಮತ್ತು ಆ ಮೂಲಕ 104.42 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗಿತ್ತು. ಆದರೆ ಮತ್ತೆ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದ್ದು, ಪುನಃ ಈಗ ಅನ್​ಲಾಕ್​ ಆಗಿ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

ಇದನ್ನೂ ಓದಿ:

ತಿರುಪತಿ ಲಡ್ಡುಗಳಿಗೆ ಶತಮಾನಗಳ ಇತಿಹಾಸವಿದೆ, ಪ್ರಸಾದದ ರೂಪದಲ್ಲಿ ಸಿಗುವ ಲಡ್ಡು ದೇವಸ್ಥಾನದ ಅಡುಗೆ ಕೋಣೆಯಲ್ಲಿ ತಯಾರಾಗುತ್ತದೆ

ತಿರುಪತಿ ವೆಂಕಟೇಶ್ವರ ಸ್ವಾಮಿ ದೇವರಿಗೆ 4 ಕೋಟಿ ರೂ.ಮೌಲ್ಯದ ಬಂಗಾರದ ಖಡ್ಗ ಸಮರ್ಪಣೆ; ಫೋಟೋಗಳು ಇಲ್ಲಿವೆ..

Follow us on

Related Stories

Most Read Stories

Click on your DTH Provider to Add TV9 Kannada