ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ
ಕಾರು

Updated on: Dec 26, 2023 | 11:02 AM

ಹಿಮಾಚಲ ಪ್ರದೇಶದಲ್ಲಾದ ಟ್ರಾಫಿಕ್​ ಜಾಮ್ ನೋಡಿ ತಲೆ ಕೆಡಿಸಿಕೊಂಡು ಮಹಿಂದ್ರಾ ಥಾರ್​ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ದಂಡ ವಿಧಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಟ್ರಾಫಿಕ್ ಜಾಮ್ ತಪ್ಪಿಸಲು, ವ್ಯಕ್ತಿಯೊಬ್ಬರು ತಮ್ಮ ಮಹೀಂದ್ರಾ ಥಾರ್ ಎಸ್‌ಯುವಿಯನ್ನು ನದಿಗೆ ಇಳಿಸಿದರು. ಇದು ಚಲನಚಿತ್ರದ ದೃಶ್ಯದಂತೆ ಕಂಡರೂ ಸಹ, ವಾಸ್ತವದಲ್ಲಿ ಬೇರೇನೋ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಚಾಲಕನಿಗೆ ದಂಡ ವಿಧಿಸಲಾಗಿದೆ.
ಭವಿಷ್ಯದಲ್ಲಿ ಯಾವುದೇ ಪ್ರವಾಸಿಗರು ಇಂತಹ ಕೆಲಸವನ್ನು ಮಾಡದಂತೆ ನೋಡಿಕೊಳ್ಳಲು ಪೊಲೀಸ್ ಪಡೆಯನ್ನು ಸಹ ಅಲ್ಲಿ ನಿಯೋಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಈ ವಿಡಿಯೋದಲ್ಲಿ ಆನಂದ್ ಮಹೀಂದ್ರಾ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ. ಟ್ರಾಫಿಕ್ ಜಾಮ್ ತಪ್ಪಿಸಲು ವಾಹನವನ್ನು ನದಿಗೆ ಕೊಂಡೊಯ್ಯುವುದು ಅಪಾಯಕಾರಿ ಮಾತ್ರವಲ್ಲದೆ ನದಿ ಹಾಗೂ ಜಲಚರಗಳಿಗೆ ಹಾನಿಯನ್ನುಂಟುಮಾಡುತ್ತದೆ.

ಪೊಲೀಸರು ಕ್ರಮ ಕೈಗೊಂಡು ಚಾಲಕನಿಗೆ ದಂಡ ವಿಧಿಸಲಾಗಿದೆ. ಇತ್ತೀಚೆಗೆ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಥಾರ್ ಚಂದ್ರ ನದಿಯನ್ನು ದಾಟುತ್ತಿರುವ ವೀಡಿಯೊ ವೈರಲ್ ಆಗಿದೆ ಎಂದು ಹೇಳಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us