Sign In

By signing in or creating an account, you agree with Associated Broadcasting Company's Terms & Conditions and Privacy Policy.

Toy Train Derails: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಟಾಯ್ ಟ್ರೈನ್, ಎಲ್ಲಾ ಪ್ರಯಾಣಿಕರು ಸುರಕ್ಷಿತ

ಮಹಾರಾಷ್ಟ್ರದ ಜನಪ್ರಿಯ ಮಾಥೆರಾನ್ ಗಿರಿಧಾಮದಿಂದ ನೆರಲ್‌ಗೆ ತೆರಳುತ್ತಿದ್ದ ಆಟಿಕೆ ರೈಲು ಹಳಿತಪ್ಪಿದೆ, ಆದರೆ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

Toy Train Derails: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಟಾಯ್ ಟ್ರೈನ್, ಎಲ್ಲಾ ಪ್ರಯಾಣಿಕರು ಸುರಕ್ಷಿತ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2023 | 1:35 PM

ಮುಂಬೈ: ಮಹಾರಾಷ್ಟ್ರದ ಜನಪ್ರಿಯ ಮಾಥೆರಾನ್ ಗಿರಿಧಾಮದಿಂದ ನೆರಲ್‌ಗೆ ತೆರಳುತ್ತಿದ್ದ ಆಟಿಕೆ ರೈಲು ಹಳಿತಪ್ಪಿದೆ, (Toy Train Derails) ಆದರೆ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 95 ಕಿಮೀ ದೂರದಲ್ಲಿರುವ ಜುಮ್ಮಾ ಪಟ್ಟಿ ನಿಲ್ದಾಣದ ಬಳಿ ರೈಲಿನ ಇಂಜಿನ್‌ನ ಒಂದು ಚಕ್ರ ಹಳಿತಪ್ಪಿದೆ, ಶನಿವಾರ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಒಡಿಶಾದಲ್ಲಿ ನಡೆದ ಭೀಕರ ಟ್ರಿಪಲ್ ರೈಲು ಅಪಘಾತದಲ್ಲಿ 278 ಜನರು ಸಾವನ್ನಪ್ಪಿದರು ಮತ್ತು 1,100 ಜನರು ಗಾಯಗೊಂಡ ನಂತರ ಈ ಘಟನೆ ನಡೆದಿದೆ. ಶನಿವಾರ ಸಂಜೆ 4 ಗಂಟೆಗೆ ಮಾಥೆರಾನ್‌ನಿಂದ ಹೊರಟ ಟಾಯ್ ಟ್ರೈನ್​​ನಲ್ಲಿ 90 ರಿಂದ 95 ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ಪ್ರಯಾಣಿಕರು ತಕ್ಷಣವೇ ರೈಲಿನಿಂದ ಇಳಿದು ಕ್ಯಾಬ್‌ಗಳ ಮೂಲಕ ತಮ್ಮ ಗಮ್ಯಸ್ಥಾನಕ್ಕೆ ತೆರಳಿದರು ಎಂದು ಅವರು ಹೇಳಿದರು. ರೈಲನ್ನು ರಾತ್ರಿ 9 ಗಂಟೆ ಸುಮಾರಿಗೆ ಮರುಜೋಡನೆ ಮಾಡಲಾಗಿದೆ, ರೈಲ್ವೇ ಸಿಬ್ಬಂದಿಯ ಪ್ರಕಾರ ರಾತ್ರಿ 10.30 ರ ಹೊತ್ತಿಗೆ ಮಾಥೆರಾನ್ ಬೆಟ್ಟಗಳ ತಪ್ಪಲಿನಲ್ಲಿರುವ ನೇರಲ್ ನಿಲ್ದಾಣಕ್ಕೆ ತರಲಾಯಿತು.

ಘಟನೆಯು ನೇರಲ್‌ನಿಂದ ಮಾಥೆರಾನ್‌ಗೆ ಕೊನೆಯ ರೈಲನ್ನು ರದ್ದುಗೊಳಿಸಿತು. ಈ ಕಾರಣದಿಂದ ಎರಡೂ ರೈಲುಗಳ ಪ್ರಯಾಣಿಕರ ಪ್ರಯಾಣ ದರವನ್ನು ಮರುಪಾವತಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:Toy Train: ಮತ್ತೆ ಸಂಚಾರ ಆರಂಭಿಸಿದೆ ಟಾಯ್ ಟ್ರೈನ್; ಡಾರ್ಜಿಲಿಂಗ್​ಗೆ ಹೋಗಿ ಈ ರೈಲಿನಲ್ಲಿ ಪ್ರಯಾಣಿಸದಿದ್ದರೆ ಹೇಗೆ?

ಮಳೆಗಾಲದಲ್ಲಿ ನೆರಲ್ ಮತ್ತು ಮಾಥೆರಾನ್ ನಡುವೆ ಆಟಿಕೆ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೇರಲ್-ಮಾಥೆರಾನ್ ಆಟಿಕೆ ರೈಲು 100 ವರ್ಷಗಳಿಗಿಂತಲೂ ಹಳೆಯದು. ಇದು ಭಾರತದ ಕೆಲವು ಪರ್ವತ ರೈಲುಮಾರ್ಗಗಳಲ್ಲಿ (ವಿಭಾಗ) ಒಂದಾಗಿದೆ.

21 ಕಿಮೀ ಉದ್ದದ ನೇರಲ್-ಮಾಥೆರಾನ್ ನ್ಯಾರೋ ಗೇಜ್ ಟ್ರ್ಯಾಕ್ ಗಿರಿಧಾಮದ ಸುಂದರವಾದ ಘಾಟ್ ಮೂಲಕ ಹಾದುಹೋಗುತ್ತದೆ. ಸುರಕ್ಷತಾ ಕಾರಣಗಳಿಗಾಗಿ ಸಾಮಾನ್ಯವಾಗಿ ಜೂನ್​​​ನಿಂದ ಅಕ್ಟೋಬರ್ ವರೆಗೆ ಮಳೆಗಾಲದಲ್ಲಿ ನೆರಲ್ ಮತ್ತು ಮಾಥೆರಾನ್ ನಡುವೆ ಆಟಿಕೆ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ