ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ನಿರ್ಧಾರ: ಆಕ್ಸಿಜನ್​ ಸರಬರಾಜು, ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತ

ಕೇಂದ್ರ ಸರ್ಕಾರ ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತಕ್ಕೆ ಆದೇಶ ನೀಡಿದೆ. ಆಕ್ಸಿಜನ್​ ಸರಬರಾಜು, ವ್ಯಾಕ್ಸಿನ್​ ಆಮದಿಗೂ ಸುಂಕ ಕಡಿತಗೊಳಿಸಿದೆ. ಮನೆಗಳಲ್ಲಿನ ಚಿಕಿತ್ಸೆ ಮತ್ತು ಆಸ್ಪತ್ರೆಗಳಿಗೆ ತಕ್ಷಣಕ್ಕೆ ಆಕ್ಸಿಜನ್​ ಸರಬರಾಜು, ವ್ಯಾಕ್ಸಿನ್​ ಆಮದು ಹಾಗೂ ವೈದ್ಯಕೀಯ ಉಪಕರಣಗಳ ಅಗತ್ಯ ಬಹಳಷ್ಟಿದೆ. ಹಾಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ನಿರ್ಧಾರ: ಆಕ್ಸಿಜನ್​ ಸರಬರಾಜು, ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತ
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ: ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತ
Follow us
ಸಾಧು ಶ್ರೀನಾಥ್​
|

Updated on:Apr 24, 2021 | 3:45 PM

ನವದೆಹಲಿ: ಕೊರೊನಾ ಮಾರಿ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ. ಕೇಂದ್ರ ಸರ್ಕಾರ ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತಕ್ಕೆ ಆದೇಶ ನೀಡಿದೆ. ಆಕ್ಸಿಜನ್​ ಸರಬರಾಜು, ವ್ಯಾಕ್ಸಿನ್​ ಆಮದಿಗೂ ಸುಂಕ ಕಡಿತಗೊಳಿಸಿದೆ. ಸೀಮಾ ಸುಂಕದಿಂದ ಕೊರೊನಾ ವ್ಯಾಕ್ಸಿನ್​ಗೆ ವಿನಾಯಿತಿ ನೀಡಲಾಗಿದ್ದು, ಆಮದಿಗೆ ವಿಧಿಸಲಾಗುತ್ತಿದ್ದ ಹೆಲ್ತ್​ ಸೆಸ್​ ಕೂಡ ರದ್ದು ಮಾಡಲಾಗಿದೆ. 3 ತಿಂಗಳವರೆಗೆ ಈ ತೆರಿಗೆ ವಿನಾಯಿತಿಗಳು ಅನ್ವಯವಾಗಲಿವೆ ಎಂದು ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರವು ಆಕ್ಸಿಜನ್​ ಸರಬರಾಜು, ವ್ಯಾಕ್ಸಿನ್​ ಆಮದು ಮೇಲಿನ ಸುಂಕ ಕಡಿತಗೊಳಿಸಿರುವುದರಿಂದ ಈ ವೈದ್ಯಕೀಯ ಉಪಕರಣಗಳು ಈಗ ಅಗ್ಗವಾಗಲಿದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಸಿಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇಂತಹ ಉಪಕರಣಗಳ ಸರಬರಾಜಿಗೆ ಯಾವುದೇ ಅಡೆತಡೆ ಇಲ್ಲದೆ ಸುಲಲಿತವಾಗಿ ಸಾಗಾಟವಾಗುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಹರ್ಷ ವರ್ಧನ್, ಪ್ರಧಾನ ಮಂತ್ರಿಯ ಪ್ರಧಾನ ಕಾರ್ಯದರ್ಶಿ ಮತ್ತಿತರ ಉನ್ನತಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮನೆಗಳಲ್ಲಿನ ಚಿಕಿತ್ಸೆ ಮತ್ತು ಆಸ್ಪತ್ರೆಗಳಿಗೆ ತಕ್ಷಣಕ್ಕೆ ಆಕ್ಸಿಜನ್​ ಸರಬರಾಜು, ವ್ಯಾಕ್ಸಿನ್​ ಆಮದು ಹಾಗೂ ವೈದ್ಯಕೀಯ ಉಪಕರಣಗಳ ಅಗತ್ಯ ಬಹಳಷ್ಟಿದೆ. ಹಾಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

(Trade Facilitation Measures during outbreak of Covid-19 basic customs duty and health cess on medical equipments)

Published On - 3:28 pm, Sat, 24 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ