Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಆ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು
ಕಾರು
Follow us
ನಯನಾ ರಾಜೀವ್
|

Updated on: Nov 04, 2024 | 10:20 AM

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಸಂಚಾರ ಪೊಲೀಸ್ ಸಿಬ್ಬಂದಿ ಎಎಸ್‌ಐ ಪ್ರಮೋದ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶೈಲೇಶ್ ಚೌಹಾಣ್ ಅವರು ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೊಬೈಲ್ ಫೋನ್‌ಗಳ ಮೂಲಕ ಚಲನ್‌ಗಳನ್ನು ನೀಡುತ್ತಿದ್ದರು. ಆಗ ಕಾರೊಂದು ರೆಡ್ ಸಿಗ್ನಲ್​ ಜಂಪ್ ಮಾಡಿ ಹೋಗಿತ್ತು.

ಆಗ ಪೊಲೀಸರು ಕಾರಿನ ಚಾಲಕನಿಗೆ ನಿಲ್ಲುವಂತೆ ಸೂಚಿಸಿದರು, ಆದರೂ ನಿಲ್ಲಲಿಲ್ಲ, ಆಗ ಪೊಲೀಸರು ಕಾರು ನಿಲ್ಲಿಸಲು ಯತ್ನಿಸಿದಾಗ ಬಾನೆಟ್​ ಮೇಲೆ ಬಿದ್ದಿದ್ದಾರೆ. ಆದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ಸುಮಾರು 20 ಮೀಟರ್ ವರೆಗೆ ಪೊಲೀಸ್ ಸಿಬ್ಬಂದಿಯನ್ನು ಎಳೆದೊಯ್ದಿದ್ದಾನೆ. ಈ ಘಟನೆಯ ನಂತರ ಆರೋಪಿ ಚಾಲಕ ಕಾರನ್ನು ಅತಿವೇಗದಲ್ಲಿ ಚಲಾಯಿಸಿ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಹೊರಗಿದ್ದಾರೆ ದೆಹಲಿ ಪೊಲೀಸರ ಪ್ರಕಾರ, ಇದುವರೆಗಿನ ತನಿಖೆಯಲ್ಲಿ ಬಹಿರಂಗಗೊಂಡಿರುವ ವಾಹನವು ವಸಂತ್ ಕುಂಜ್ ಪ್ರದೇಶದಲ್ಲಿ ಜೈ ಭಗವಾನ್ ಹೆಸರಿನಲ್ಲಿ ನೋಂದಣಿಯಾಗಿದೆ. ಸಮೀಪದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೈರಲ್ ವಿಡಿಯೋಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲ ಎಂದಾದರೆ ಜನ ಸಾಮಾನ್ಯರ ಗತಿಯೇನು ಎಂದು ವೀಡಿಯೋ ನೋಡಿದ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್