ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ವ್ಯಕ್ತಿ ಆತ್ಮಹತ್ಯೆ
ವ್ಯಕ್ತಿಯೊಬ್ಬ ತನ್ನ ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿದ್ವಾರದಲ್ಲಿ ನಡೆದಿದೆ. ನವೀನ್ ಎಂದು ಗುರುತಿಸಲಾದ ಆ ವ್ಯಕ್ತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು, ಸ್ನೇಹಿತನ ಕೋಣೆಯಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇಷ್ಟ ಪಟ್ಟ ಹುಡುಗಿಯೊಂದಿಗೆ ಆತನ ನಿಶ್ಚಿತಾರ್ಥವಾಗಿತ್ತು, ಆದರೂ ಯಾಕೆ ದುಡುಕಿ ಈ ನಿರ್ಧಾರ ತೆಗೆದುಕೊಂಡ ಎನ್ನುವ ಕುರಿತು ಇನ್ನೂ ಮಾಹಿತಿ ಹೊರಬರಬೇಕಿದೆ.

ಹರಿದ್ವಾರ, ಸೆಪ್ಟೆಂಬರ್ 29: ವ್ಯಕ್ತಿಯೊಬ್ಬ ತನ್ನ ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿದ್ವಾರದಲ್ಲಿ ನಡೆದಿದೆ. ನವೀನ್ ಎಂದು ಗುರುತಿಸಲಾದ ಆ ವ್ಯಕ್ತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು, ಸ್ನೇಹಿತನ ಕೋಣೆಯಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತ ಇಷ್ಟ ಪಟ್ಟ ಹುಡುಗಿಯೊಂದಿಗೆ ಆತನ ನಿಶ್ಚಿತಾರ್ಥವಾಗಿತ್ತು, ಆದರೂ ಯಾಕೆ ದುಡುಕಿ ಈ ನಿರ್ಧಾರ ತೆಗೆದುಕೊಂಡ ಎನ್ನುವ ಕುರಿತು ಇನ್ನೂ ಮಾಹಿತಿ ಹೊರಬರಬೇಕಿದೆ. ಮಧ್ಯಾಹ್ನ 2.30 ರ ಸುಮಾರಿಗೆ ನವೀನ್ ತನ್ನ ನಿಶ್ಚಿತ ವಧುವಿನೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಹಗ್ಗದಿಂದ ನೇಣು ಬಿಗಿದು, ಅದನ್ನು ಸೀಲಿಂಗ್ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನವೀನ್ ಹಾಗೂ ಋಷಿ ಬಹಳ ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಭಾನುವಾರ, ಫೇಸ್‌ಬುಕ್ ವೀಡಿಯೊ ಕರೆಯಲ್ಲಿ ಅವರೊಂದಿಗೆ ಮಾತನಾಡುತ್ತಿದ್ದಾಗ, ನವೀನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಮತ್ತು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ.
ಮತ್ತಷ್ಟು ಓದಿ: ಸತ್ತ ಅಮ್ಮ ಕನಸಿನಲ್ಲಿ ಬಂದು ಕರೆದಳೆಂದು ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕ!
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕೊಂಡೊಯ್ಯಲಾಯಿತು. ಅವರ ಹೆಜ್ಜೆಯ ಹಿಂದೆ ಯಾವುದೇ ಜಗಳ ಅಥವಾ ಒತ್ತಡವಿತ್ತೇ ಎಂಬುದು ಸೇರಿದಂತೆ ಎಲ್ಲಾ ಅಂಶಗಳನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಹರಿದ್ವಾರ ನಗರ ಎಸ್‌ಪಿ ಪಂಕಜ್ ಗೈರೋಲಾ ಹೇಳಿದರು.
ಯುವತಿಯ ಕುಟುಂಬಸ್ಥರಿಂದ ಹೇಳಿಕೆಗಳನ್ನು ಪಡೆಯಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




