
ಮಿರ್ಜಾಪುರ, ನವೆಂಬರ್ 05: ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ನಾಲ್ವರು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ನಾಲ್ಕು ಜನರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಮೃತರು ಕಾರ್ತಿಕ ಪೂರ್ಣಿಮೆಯಂದು ಗಂಗಾ ಸ್ನಾನಕ್ಕೆ ಹೋಗುತ್ತಿದ್ದ ಭಕ್ತರಾಗಿದ್ದು, ಘಟನೆಯ ಸಮಯದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಬೆಳಗ್ಗೆ 9:30 ಕ್ಕೆ ನೇತಾಜಿ ಎಕ್ಸ್‌ಪ್ರೆಸ್ (12311) ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್ ಬದಿಗೆ ಬದಲಾಗಿ ರೈಲಿನ ಎದುರು ಭಾಗದಲ್ಲಿ ಇಳಿದಿದ್ದಾರೆ, ಅಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತ ಘಟನೆಯನ್ನು ಅರ್ಥಮಾಡಿಕೊಂಡ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳಿಗೆ ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಾ ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.
ರೈಲು ಅಪಘಾತ
ಬಿಲಾಸ್ಪುರದಲ್ಲಿ ಭೀಕರ ಅಪಘಾತ; 2 ರೈಲುಗಳ ನಡುವೆ ಡಿಕ್ಕಿಯಾಗಿ 6 ಜನ ಸಾವು
ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು ಸಂಜೆ ಬೃಹತ್ ರೈಲು ಅಪಘಾತ ಸಂಭವಿಸಿದೆ. ಪ್ರಯಾಣಿಕರ ರೈಲೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ (Bilaspur Train Accident) ಲಾಲ್‌ಖಾದನ್ ಬಳಿ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿವೆ. 2 ರೈಲು ನಿಲ್ದಾಣಗಳ ನಡುವಿನ ಅಪ್‌ಲೈನ್‌ನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಸುಮಾರು 6 ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡರಿಂದ ಮೂವರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ