AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ: ಭಕ್ತರ ಮೇಲೆ ಹರಿದ ಟ್ರಕ್; 14 ಮಂದಿ ಸಾವು

ಗ್ವಾಲಿಯರ್‌ನ ಶೀತಲಾ ಮಾತಾ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಭಕ್ತರ ಮೇಲೆ ಹರಿದ ಪರಿಣಾಮ 14 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ನವರಾತ್ರಿ ಸಂದರ್ಭವಾಗಿರುವ ಕಾರಣ ಆ ರಸ್ತೆಯಲ್ಲಿ ತಡೆಗೋಡೆ ಮತ್ತು ಪೊಲೀಸ್ ತಪಾಸಣಾ ಕೇಂದ್ರವಿತ್ತು. ಹೀಗಿದ್ದರೂ ವಾಹನ ಒಳಗೆ ಪ್ರವೇಶಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಆಂಬ್ಯುಲೆನ್ಸ್‌ಗಳು ಹಾಗೂ ಇತರ ವಾಹನಗಳನ್ನು ಪರಿಹಾರ ಕಾರ್ಯಾಚರಣೆಗಾಗಿ ಕಳುಹಿಸಲಾಗಿರುವ ಕಾರಣ ಹೆಚ್ಚಿನ ಸಾವು ನೋವು ತಪ್ಪಿದೆ.

ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ: ಭಕ್ತರ ಮೇಲೆ ಹರಿದ ಟ್ರಕ್; 14 ಮಂದಿ ಸಾವು
ಭೀಕರ ಅಪಘಾತ
ಪ್ರಸನ್ನ ಹೆಗಡೆ
|

Updated on:Oct 18, 2026 | 10:57 AM

Share

ಮುಖ್ಯಾಂಶಗಳು

  • ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ
  • ಭಕ್ತರ ಮೇಲೆ ಟ್ರಕ್​​ ಹರಿದು ಕನಿಷ್ಠ 14 ಮಂದಿ ಸಾವು
  • ಗ್ವಾಲಿಯರ್‌ನ ಶೀತಲಾ ಮಾತಾ ದೇವಸ್ಥಾನದ ಬಳಿ ದುರಂತ

ಗ್ವಾಲಿಯರ್, ಅಕ್ಟೋಬರ್ 18: ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ ಭಕ್ತರ ಮೇಲೆ ಹರಿದ ಪರಿಣಾಮ ಕನಿಷ್ಠ 14 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ಗ್ವಾಲಿಯರ್‌ನ ಶೀತಲಾ ಮಾತಾ ದೇವಸ್ಥಾನದ ಬಳಿ ನಡೆದಿದೆ. ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಟ್ರಕ್ ಮುನ್ನುಗ್ಗಿದ ಪರಿಣಾಮ ದೇವಸ್ಥಾನದ ಗೇಟ್ ಹಾಗೂ ಹೊರಗೋಡೆಗೆ ಡಿಕ್ಕಿಯಾಗಿದೆ. ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಭತ್ತ ತುಂಬಿಕೊಂಡು ಛಿನೋರ್ ಕಡೆಯಿಂದ ಬರುತ್ತಿದ್ದ ಟ್ರಕ್ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧವಿರುವ ಕಡಿದಾದ ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

5-6 ಜನರ ಸ್ಥಿತಿ ಗಂಭೀರ

ಅಪಘಾತದ ಒಟ್ಟು 39 ಮಂದಿ ಗಾಯಗೊಂಡಿದ್ದರು. ಆ ಪೈಕಿ 14 ಜನ ಮೃತಪಟ್ಟಿದ್ದರೆ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐದರಿಂದ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಮೂಳೆ ಮುರಿತವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗ್ವಾಲಿಯರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಧರ್ಮವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾದ ಕಾಲ್ತುಳಿತದಲ್ಲಿ 17 ಭಕ್ತರು ಸಾವು; ಪ್ರಧಾನಿ ಮೋದಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾಣ ಘೋಷಣೆ

ಅಪಘಾತದ ಸುದ್ದಿ ತಿಳಿದ ತಕ್ಷಣ ಆಂಬ್ಯುಲೆನ್ಸ್‌ಗಳು ಹಾಗೂ ಇತರ ವಾಹನಗಳನ್ನು ಪರಿಹಾರ ಕಾರ್ಯಾಚರಣೆಗಾಗಿ ಕಳುಹಿಸಲಾಗಿರುವ ಕಾರಣ ಹೆಚ್ಚಿನ ಸಾವು ನೋವು ತಪ್ಪಿದೆ. ನವರಾತ್ರಿ ಸಂದರ್ಭದಲ್ಲಿ ರಸ್ತೆಯಲ್ಲಿ ಬ್ಯಾರಿಕೇಡ್ ಹಾಗೂ ಪೊಲೀಸ್ ತಪಾಸಣಾ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಆದರೂ ಟ್ರಕ್ ಅಲ್ಲಿಗೆ ಹೇಗೆ ಪ್ರವೇಶಿಸಿತು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಗ್ವಾಲಿಯರ್ ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ತಿಳಿಸಿದ್ದಾರೆ.

ನವರಾತ್ರಿ ಸಂದರ್ಭವಾಗಿರುವ ಕಾರಣ ಆ ರಸ್ತೆಯಲ್ಲಿ ತಡೆಗೋಡೆ ಮತ್ತು ಪೊಲೀಸ್ ತಪಾಸಣಾ ಕೇಂದ್ರವಿತ್ತು. ಹೀಗಿದ್ದರೂ ವಾಹನ ಒಳಗೆ ಪ್ರವೇಶಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಟ್ರಕ್‌ನಲ್ಲಿ ಏನಾದರೂ ತಾಂತ್ರಿಕ ದೋಷ ಉಂಟಾಗಿತ್ತೇ ಮತ್ತು ಅದು ಎಡಕ್ಕೆ ತಿರುಗಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪ್ರಾದೇಶಿಕ ಸಾರಿಗೆ ಕಚೇರಿಯ (RTO) ತಂಡವನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಘಟನೆಯನ್ನು ಕಣ್ಣಾರೆ ಕಂಡ ಗಾಯಾಳುವೊಬ್ಬರ ಸಹೋದರನ ಪ್ರಕಾರ, ಟ್ರಕ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಭತ್ತವನ್ನು ತುಂಬಲಾಗಿತ್ತು. ಟ್ರಕ್ ಏಕಾಏಕಿ ಬಂದು ನಿಯಂತ್ರಣ ಕಳೆದುಕೊಂಡು ಜನರು ಮತ್ತು ಅಂಗಡಿಗಳ ಮೇಲೆ ಹರಿದಿದೆ ಎನ್ನಲಾಗಿದೆ.

ಸಿಎಂ ಮೋಹನ್​​ ಯಾದವ್​​ ಸಂತಾಪ

ಗ್ವಾಲಿಯರ್‌ನಲ್ಲಿ ಟ್ರಕ್ ಅಪಘಾತದಲ್ಲಿ ಭಕ್ತರು ಮೃತಪಟ್ಟಿರುವ ಸುದ್ದಿ ಅತ್ಯಂತ ಹೃದಯವಿದ್ರಾವಕವಾಗಿದೆ. ಈ ದುಃಖದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸಂತ್ರಸ್ತ ಕುಟುಂಬಗಳೊಂದಿಗೆ ನಿಂತಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮಧ್ಯಪ್ರದೇಶ ಸಿಎಂ ಡಾ. ಮೋಹನ್​​ ಯಾದವ್ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಇತರ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಆಡಳಿತದ ಪರವಾಗಿ ಸೂಚನೆ ನೀಡಲಾಗಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಒದಗಿಸಲಾಗುವುದು. ಸಂತ್ರಸ್ತ ಕುಟುಂಬಗಳು ಗ್ವಾಲಿಯರ್, ಶಿವಪುರಿ ಮತ್ತು ಶಿಯೋಪುರ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ. ಸಚಿವರಾದ ಐದಲ್ ಸಿಂಗ್ ಕಂಸಾನಾ ಮತ್ತು ರಾಕೇಶ್ ಶುಕ್ಲಾ ಅವರು ಗ್ವಾಲಿಯರ್‌ಗೆ ತೆರಳುವಂತೆಯೂ ಸೂಚನೆ ನೀಡಲಾಗಿದೆ. ದುಃಖತಪ್ತ ಕುಟುಂಬಗಳಿಗೆ ಈ ಅಪಾರ ನೋವನ್ನು ಸಹಿಸುವ ಶಕ್ತಿ ದೊರೆಯಲಿ ಹಾಗೂ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದವರು ಎಕ್ಸ್​​ ಪೋಸ್ಟ್​​ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:06 am, Sun, 18 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ