AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಪುರುಲಿಯಾದಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ, 9 ಮಂದಿ ಸಾವು

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತ(Road Accident) ದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಬಲರಾಂಪುರ ಪೊಲೀಸ್ ಠಾಣೆ ಪ್ರದೇಶದ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18 ರಲ್ಲಿ ಎಲ್ಲರೂ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಮ್ಶೋಲ್‌ನಲ್ಲಿ ಬೊಲೆರೊ ವಾಹನವು ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

West Bengal: ಪುರುಲಿಯಾದಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ, 9 ಮಂದಿ ಸಾವು
ಅಪಘಾತ Image Credit source: India Today
ನಯನಾ ರಾಜೀವ್
|

Updated on: Jun 20, 2025 | 10:30 AM

Share

ಪುರುಲಿಯಾ, ಜೂನ್ 20: ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತ(Road Accident) ದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಬಲರಾಂಪುರ ಪೊಲೀಸ್ ಠಾಣೆ ಪ್ರದೇಶದ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18 ರಲ್ಲಿ ಎಲ್ಲರೂ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ನಮ್ಶೋಲ್‌ನಲ್ಲಿ ಬೊಲೆರೊ ವಾಹನವು ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮೃತರು ಪುರುಲಿಯಾದ ಬರಾಬಜಾರ್ ಪೊಲೀಸ್ ಠಾಣೆ ಪ್ರದೇಶದ ಅಡಬಾನಾ ಗ್ರಾಮದಿಂದ ಜಾರ್ಖಂಡ್‌ನ ನಿಮ್ದಿಹ್ ಪೊಲೀಸ್ ಠಾಣೆ ಪ್ರದೇಶದ ತಿಲೈತಾಂಡ್‌ಗೆ ಬೊಲೆರೊ ವಾಹನದಲ್ಲಿ ಪ್ರಯಾಣಿಸುತ್ತಿದ್ದರು.

ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದು, ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ಎಲ್ಲಾ ಪ್ರಯಾಣಿಕರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಪುಣೆಯಲ್ಲಿ ಅಪಘಾತ, 9 ಮಂದಿ ಸಾವು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಸೆಡಾನ್ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಜೆಜುರಿ-ಮೋರ್ಗಾಂವ್ ರಸ್ತೆಯಲ್ಲಿರುವ ಹೋಟೆಲ್‌ನ ಹೊರಗೆ ಸಂಜೆ 6.45 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರಲ್ಲಿ ಒಬ್ಬರು ಹೋಟೆಲ್ ಮಾಲೀಕರಾಗಿದ್ದರು. ಅವರು ಮತ್ತು ಅವರ ಸಿಬ್ಬಂದಿ ಪಿಕ್-ಅಪ್ ವಾಹನದಿಂದ ರೆಫ್ರಿಜರೇಟರ್ ಅನ್ನು ಇಳಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮತ್ತಷ್ಟು ಓದಿ: ಹಾವೇರಿಯಲ್ಲಿ ಭೀಕರ ಅಪಘಾತ: ಜವರಾಯನ ಅಟ್ಟಹಾಸಕ್ಕೆ 6 ಜನರು ಸ್ಥಳದಲ್ಲೇ ಸಾವು

ಫ್ರಿಜ್ ಅನ್ನು ಹೊರತೆಗೆಯುತ್ತಿದ್ದಾಗ, ಆರು ಜನರನ್ನು ಹೊತ್ತೊಯ್ಯುತ್ತಿದ್ದ ಕಾರು ವೇಗವಾಗಿ ಬಂದ ಕಾರು ಪಿಕ್-ಅಪ್ ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು.

ಕಾರು ಐದು ಜನರಿಗೆ ಡಿಕ್ಕಿ ಹೊಡೆದಿದ್ದು, ಹೋಟೆಲ್ ಮಾಲೀಕರು, ಪಿಕ್-ಅಪ್ ಚಾಲಕ ಮತ್ತು ಫ್ರಿಡ್ಜ್​ ಇಳಿಸಲು ಸಹಾಯ ಮಾಡುತ್ತಿದ್ದ ಮೂವರು, ಆರು ವರ್ಷದ ಬಾಲಕ ಮತ್ತು ಮಹಿಳೆ, ಕಾರಿನಲ್ಲಿದ್ದ ನಾಲ್ವರು ವ್ಯಕ್ತಿಗಳೊಂದಿಗೆ ಈ ಐವರು ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?