ರಾಜ್​ಕೋಟ್​ ಅಗ್ನಿ ಅವಘಡ: ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚನೆ

ಗುಜರಾತ್​ನ ರಾಜ್​ಕೋಟ್​ನ ಕಲಾವಾಡ್ ರಸ್ತೆಯಲ್ಲಿರುವ ಟಿಆರ್​ಪಿ ಗೇಮಿಂಗ್​ ಝೋನ್​ನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 27 ಮಂದಿ ಸುಟ್ಟು ಕರಕಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚಿಸಲಾಗಿದೆ.

ರಾಜ್​ಕೋಟ್​ ಅಗ್ನಿ ಅವಘಡ: ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚನೆ
ಅಗ್ನಿ ಅವಘಡ
Follow us
ನಯನಾ ರಾಜೀವ್
|

Updated on:May 26, 2024 | 9:07 AM

ಗುಜರಾತ್​ನ ರಾಜ್​ಕೋಟ್​ನಲ್ಲಿರು ಗೇಮ್ ಝೋನ್​ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ(Fire Accident)ದಲ್ಲಿ 27 ಮಂದಿ ಸಜೀವದಹನಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿಐಡಿ ಕ್ರೈಂನ ಎಡಿಜಿ ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚಿಸಲಾಗಿದೆ.

ಐದು ಸದಸ್ಯರ ತಂಡ ಪ್ರಕರಣದ ತನಿಖೆ ಮಾಡಲಿದೆ. 72 ಗಂಟೆಗಳೊಳಗೆ ಪ್ರಾಥಮಿಕ ವರದಿಯನ್ನು ನೀಡಲಿವೆ. ಅಗ್ನಿ ಅವಘಡಕ್ಕೆ ಕಾರಣವೇನು?, ಗೇಮಿಂಗ್​ ಝೋನ್​ಗೆ ಅನುಮತಿ ನೀಡುವ ಸಂದರ್ಭದಲ್ಲಿ ಈ ಕೆಲವು ವಿಷಯಗಳ ಬಗ್ಗೆ ಗಮನಹರಿಸಲಾಗಿತ್ತೆ?, ಗೇಮಿಂಗ್ ಝೋನ್​ ನಿರ್ಮಾಣಕ್ಕೆ ಅನುಮತಿ ಪಡೆದಿದ್ದರೇ? ಎಂಬೆಲ್ಲಾ ವಿಚಾರಗಳ ಕುರಿತು ತನಿಖೆ ನಡೆಸಲಿದೆ.

ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಗೇಮ್ ಝೋನ್ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಬೆಂಕಿಯನ್ನು ನಂದಿಸಲು ಸಾಕಷ್ಟು ಕಸರತ್ತು ನಡೆಸಬೇಕಾಯಿತು.

ಶನಿವಾರ ಸಂಜೆ ಟಿಆರ್ ಪಿ ಗೇಮಿಂಗ್ ವಲಯದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಪ್ರದೇಶಕ್ಕೆ ಆವರಿಸಿ ಧಗಧಗನೆ ಹೊತ್ತಿ ಉರಿಯಿತು. ಈ ಕುರಿತು ರಾಜ್ ಕೋಟ್ ನ ಪೊಲೀಸ್ ಆಯಕ್ತ ಭಾರ್ಗವ ಅಗ್ನಿ ಅವಘಡದ ಬಗ್ಗೆ ವಿವರ ನೀಡಿ, ಇದುವರೆಗೆ 35 ಮೃತದೇಹಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಪರಿಹಾರ ಕಾರ್ಯ ನಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮತ್ತಷ್ಟು ಓದಿ: ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ; 24 ಮಂದಿ ಸಾವು

ಬೆಂಕಿ ಎಷ್ಟು ತೀವ್ರತೆ ಎಷ್ಟಿತ್ತು ಎಂದರೆ ಅದರ ಹೊಗೆ 3 ಕಿಲೋಮೀಟರ್ ದೂರಕ್ಕೂ ಗೋಚರಿಸುತ್ತಿತ್ತು, ಗೇಮಿಂಗ್ ವಲಯದಲ್ಲಿ ಸಿಕ್ಕಿಹಾಕೊಂಡವರ ಚೀರಾಟ, ಆಕ್ರಂದನ ಹೇಳತೀರದಾಗಿತ್ತು. ಕೆಲವರು‌ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಮಾಲೀಕನ ಬಂಧನ ಗೇಮ್ ಝೋನ್ ಮಾಲೀಕ ಯುವರಾಜ್ ಸಿಂಗ್ ಸೋಲಂಕಿ ಅವರನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದಾರೆ. ಗೇಮ್ ಝೋನ್‌ನ ವ್ಯವಸ್ಥಾಪಕನಿಗಾಗಿ ಪೊಲೀಸರು ಶೋಧ‌ ಕಾರ್ಯಕೈಗೊಂಡಿದ್ದಾರೆ.

ಈ ಆಟದ ವಲಯದ ಒಂದು ಭಾಗದಲ್ಲಿ ನವೀಕರಣ ಕಾರ್ಯ ನಡೆಯುತ್ತಿತ್ತು . ಈ ವೇಳೆ ಎರಡು ದಿನಗಳ ಹಿಂದೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೇಮ್ ಝೋನ್ ಬಂದ್ ಮಾಡಲಾಗಿತ್ತು. ಈ ಘಟನೆ‌ ಸಂಭವಿಸಿ, ಒಂದು ದಿನದ ನಂತರ ಆಟದ ವಲಯವನ್ನು ಪುನಃ ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:09 am, Sun, 26 May 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ