Kaziranga Accident: ಅಸ್ಸಾಂನ ಕಾಜಿರಂಗದಲ್ಲಿ ಮಿನಿ ಬಸ್​​-ಟ್ರಕ್​​ ನಡುವೆ ಭೀಕರ ಅಪಘಾತ: 23 ಮಂದಿ ಸಾವು

ಅಸ್ಸಾಂನ ಕಾಜಿರಂಗ ಸಮೀಪದ ರೊಂಗಾಜನ್‌ನಲ್ಲಿ ಮಿನಿ ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 23 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅತಿ ವೇಗದ ಚಾಲನೆಯೇ ದುರ್ಘಟನೆಗೆ ಕಾರಣವೆಂದು ಶಂಕಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಬಂಧಗಳನ್ನು ಉಲ್ಲಂಘಿಸಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಮಿನಿ ಬಸ್​​ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿರಬಹುದೆಂದು ಅಂದಾಜಿಸಲಾಗಿದೆ.

Kaziranga Accident: ಅಸ್ಸಾಂನ ಕಾಜಿರಂಗದಲ್ಲಿ ಮಿನಿ ಬಸ್​​-ಟ್ರಕ್​​ ನಡುವೆ ಭೀಕರ ಅಪಘಾತ: 23 ಮಂದಿ ಸಾವು
ಭೀಕರ ಅಪಘಾತ

Updated on: Nov 13, 2026 | 5:19 PM

ಗುವಾಹಟಿ, ನವೆಂಬರ್​​ 13: ಅಸ್ಸಾಂನ ಕಾಜಿರಂಗದಲ್ಲಿ ಮಿನಿ ಬಸ್​​ ಮತ್ತು ಟ್ರಕ್​​ ನಡುವೆ ನಡೆದ ಭೀಕರ ಅಪಘಾತದಲ್ಲಿ 23 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಕಾಜಿರಂಗ ಸಮೀಪದ ರೊಂಗಾಜನ್‌ನಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಕಾಖಾಟ್‌ನಿಂದ ನಗಾಂವ್‌ಗೆ ತೆರಳುತ್ತಿದ್ದ  ಮಿನಿ ಬಸ್‌- ಟ್ರಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಹಲವರು ವಾಹನದ ಅವಶೇಷಗಳ ನಡುವೆ ಸಿಲುಕಿದ ಕಾರಣ ಸಾವುನೋವುಗಳ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ.

ಅತಿವೇಗದಿಂದಲೇ ನಡೆಯಿತಾ ಅಪಘಾತ?

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಬಂಧಗಳನ್ನು ಉಲ್ಲಂಘಿಸಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಮಿನಿ ಬಸ್​​ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿರಬಹುದೆಂದು ಅಂದಾಜಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Loading...

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:15 pm, Fri, 13 November 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us