AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident News: ಪಿಕ್​​ಅಪ್ ವ್ಯಾನ್ ಹಾಗೂ ಲಾರಿ ನಡುವೆ ಡಿಕ್ಕಿ 7 ಮಕ್ಕಳು ಸೇರಿ 10 ಮಂದಿ ಸಾವು

ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಧಿಕಾರಿಗಳ ಪ್ರಕಾರ, ಪಿಕಪ್ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಈ ಘಟನೆಯನ್ನು ಇನ್ನೂ ತನಿಖೆ ನಡೆಸಲಾಗುತ್ತಿದೆ.ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Accident News: ಪಿಕ್​​ಅಪ್ ವ್ಯಾನ್ ಹಾಗೂ ಲಾರಿ ನಡುವೆ ಡಿಕ್ಕಿ 7 ಮಕ್ಕಳು ಸೇರಿ 10 ಮಂದಿ ಸಾವು
ಅಪಘಾತ
ನಯನಾ ರಾಜೀವ್
|

Updated on: Aug 13, 2025 | 7:46 AM

Share

ದೌಸಾ, ಆಗಸ್ಟ್​ 13: ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಖತುಶ್ಯಾಮ್​ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಪಿಕಪ್ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಈ ಘಟನೆಯ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ.

ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೌಸಾ ಜಿಲ್ಲಾಧಿಕಾರಿ ದೇವೇಂದ್ರ ಕುಮಾರ್, ಆರಂಭಿಕ ವರದಿಗಳ ಪ್ರಕಾರ, ಬಾಪಿ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 9 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ದಿನದ ಹಿಂದಷ್ಟೇ ಪುಣೆಯಲ್ಲೂ ಇಂಥದ್ದೇ ಅಪಘಾತ ಸಂಭವಿಸಿತ್ತು. ಪುಣೆಯಿಂದ ಸುಮಾರು 65 ಕಿ.ಮೀ ದೂರದಲ್ಲಿರುವ ಖೇಡ್ ತಾಲ್ಲೂಕಿನ ಪೈಟ್ ಬಳಿಯ ಕುಂದೇಶ್ವರ ದೇವಸ್ಥಾನಕ್ಕೆ ಪಿಕ್-ಅಪ್ ಟ್ರಕ್ ಮಧ್ಯಾಹ್ನ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಹತ್ತು ಮಹಿಳಾ ಭಕ್ತರು ಸಾವನ್ನಪ್ಪಿದ್ದರು. 27 ಮಂದಿ ಗಾಯಗೊಂಡಿದ್ದರು.

ಪೈಟ್ ಬಳಿಯ ಪಾಪಲ್ವಾಡಿಯಲ್ಲಿ 35 ಕ್ಕೂ ಹೆಚ್ಚು ಭಕ್ತರು ಪಿಕ್-ಅಪ್ ಟ್ರಕ್‌ನ ಹಿಂಭಾಗದ ಕಾರ್ಗೋ ಬೆಡ್ ಅನ್ನು ಹತ್ತಿದ್ದರು. ಕಡಿದಾದ ಇಳಿಜಾರಿನಲ್ಲಿ ವಾಹನವು ಹಿಂದಕ್ಕೆ ಜಾರಿ 30 ಅಡಿ ಕಂದಕಕ್ಕೆ ಬಿದ್ದಿತ್ತು. ಮೃತರನ್ನು ಮಂದಾಬಾಯಿ ದಾರೆಕರ್ (50), ಸನಾಬಾಯಿ ದಾರೆಕರ್ (50), ಮೀರಾಬಾಯಿ ಚೋರ್ಗೆ (50), ಶೋಭಾ ಪಾಪಲ್ (33), ಸುಮನ್ ಪಾಪಲ್ (50), ಶಕುಬಾಯಿ ಚೋರ್ಗೆ (50), ಶಾರದ ಚೋರ್ಗೆ (45), ಬಯಾದಬಾಯಿ ಚೋರ್ಗೆ (45), ಪಾರ್ವತಿಬಾಯಿ ಪಾಪಲ್ (56) ಮತ್ತು ಫಾಸಪ್ಪಾಲ್ (16) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​