ಮಧ್ಯಪ್ರದೇಶ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ, ಓರ್ವ ಸಾವು, 24 ಮಂದಿಗೆ ಗಾಯ

ಕಾರ್ಮಿಕರಿದ್ದ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಜಿಲ್ಲಾ ಕೇಂದ್ರದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಭಯಪುರ ಗ್ರಾಮದ ಬಳಿ ಬೆಳಗ್ಗೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಮಧ್ಯಪ್ರದೇಶ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ, ಓರ್ವ ಸಾವು, 24 ಮಂದಿಗೆ ಗಾಯ
ಅಪಘಾತ
Image Credit source: Mathrubhumi English

Updated on: Sep 21, 2025 | 2:39 PM

ಮಧ್ಯಪ್ರದೇಶ, ಸೆಪ್ಟೆಂಬರ್ 21: ಕಾರ್ಮಿಕರಿದ್ದ ಬಸ್(Bus) ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಜಿಲ್ಲಾ ಕೇಂದ್ರದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಭಯಪುರ ಗ್ರಾಮದ ಬಳಿ ಬೆಳಗ್ಗೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಬಸ್ ಗುಜರಾತ್ ನಿಂದ ಮಧ್ಯಪ್ರದೇಶಕ್ಕೆ ಬರುತ್ತಿತ್ತು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಘನಶ್ಯಾಮ್ ಮಾಲ್ವಿಯಾ ಅವರು ಬಸ್ ಗುಜರಾತ್‌ನ ಜಾಮ್‌ನಗರದಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು ಮತ್ತು ಅವರನ್ನು ಅವರ ಸ್ವಂತ ಜಿಲ್ಲೆಗಳಿಗೆ ಹಿಂದಿರುಗಿಸುತ್ತಿತ್ತು ಎಂದು ಹೇಳಿದ್ದಾರೆ. ಬಸ್‌ನಲ್ಲಿದ್ದ ಹೆಚ್ಚಿನ ಕಾರ್ಮಿಕರು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದವರಾಗಿದ್ದರು.

ಸುನೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬಸ್ ಚಲಾಯಿಸುತ್ತಿದ್ದಾಗ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಲಕ್ಷ್ಯದಿಂದಾಗಿ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದಿದೆ. ಉತ್ತರ ಪ್ರದೇಶದ ಅಕ್ಬರ್‌ಪುರದ 28 ವರ್ಷದ ಮಹಿಳೆ ಗಾಯತ್ರಿ ಬಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಪ್ಪತ್ತನಾಲ್ಕು ಕಾರ್ಮಿಕರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಸಾವಿನಲ್ಲೂ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಚಾಲಕ: ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ರಕ್ಷಣೆ!

ಮಾಹಿತಿ ಪಡೆದ ತಕ್ಷಣ ಪೊಲೀಸರು, ಸಂಚಾರ ಇಲಾಖೆ ಅಧಿಕಾರಿಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿದ್ದವು. ಎಲ್ಲಾ ಗಾಯಾಳುಗಳನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರವಾಗಿ ಗಾಯಗೊಂಡ ಕೆಲವು ಪ್ರಯಾಣಿಕರನ್ನು ಉತ್ತಮ ಚಿಕಿತ್ಸೆಗಾಗಿ ಇತರ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.
ಬಸ್ ಚಾಲಕನನ್ನು ಗುರುತಿಸಲಾಗುತ್ತಿದೆ.

ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಪಘಾತಕ್ಕೆ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಸ್ಥಳೀಯರು ಸಹ ಸ್ಥಳಕ್ಕೆ ಆಗಮಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಿದರು. ಗಾಯಾಳುಗಳ ಕುಟುಂಬಗಳಿಗೆ ತಿಳಿಸಲು ಬಸ್ ನೋಂದಣಿ ಮತ್ತು ಪ್ರಯಾಣಿಕರ ಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ