AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದ ಶಿರ್ಗಾಂವ್‌​​​ ದೇವಸ್ಥಾನದಲ್ಲಿ ಕಾಲ್ತುಳಿತ: 7 ಜನ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಗೋವಾದ ಶಿರ್ಗಾಂವ್‌ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಮೃತಪಟ್ಟಿದ್ದಾರೆ ಮತ್ತು ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಗೋವಾದ ಶಿರ್ಗಾಂವ್‌​​​ ದೇವಸ್ಥಾನದಲ್ಲಿ ಕಾಲ್ತುಳಿತ: 7 ಜನ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ
ಶಿರ್ಗಾವ್​​​ ದೇವಸ್ಥಾನದಲ್ಲಿ ಕಾಲ್ತುಳಿತ
ಗಂಗಾಧರ​ ಬ. ಸಾಬೋಜಿ
|

Updated on:May 03, 2025 | 11:54 AM

Share

ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್‌ (Shirgao)​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ (death) ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದ ಶಿರ್ಗಾಂವ್‌​​ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ನೋಡಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಇದನ್ನೂ ಓದಿ
Image
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
Image
ಯುದ್ಧದ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿಯ ಜನರಿಗೆ ಪಾಕಿಸ್ತಾನ ಸೂಚನೆ
Image
ಶಾಹಿದ್ ಅಫ್ರಿದಿ ಭಾರತದ ವಿರುದ್ಧ ಕೆಂಡಕಾರಲು ಕಾರಣವೇನು ಗೊತ್ತಾ?
Image
ಪಾಕಿಸ್ತಾನದ ಈ ಪ್ರಜೆಗಳಿಗೆ ಭಾರತದ ಗಡಿಯೊಳಗೆ ಪ್ರವೇಶಿಸಲು ಮುಕ್ತ ಅವಕಾಶ

ಇದನ್ನೂ ಓದಿ: ಭಾರತದಿಂದ ದಾಳಿಯ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿ ಭಾಗದ ಜನರಿಗೆ ಪಾಕಿಸ್ತಾನ ಸೂಚನೆ

ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಪ್ರಮೋದ್ ಸಾವಂತ್​

ಇನ್ನು ಘಟನೆ ಬಗ್ಗೆ ಸಿಎಂ ಪ್ರಮೋದ್ ಸಾವಂತ್​ ಮಾಡುವ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ಶಿರ್ಗಾಂವ್‌ನ ಲೈರೈ ಜತ್ರಾದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ತೀವ್ರ ದುಃಖಿತನಾಗಿದ್ದೇನೆ.  ನಾನು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಗತ್ಯ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಿಎಂ ಪ್ರಮೋದ್ ಸಾವಂತ್​ ಟ್ವೀಟ್​

ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು,  ಈ ಸಂದರ್ಭದಲ್ಲಿ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಸಿಎಂ ಪ್ರಮೋದ್ ಸಾವಂತ್​ ಹೇಳಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಘಟನೆ ಬಗ್ಗೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ. ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 am, Sat, 3 May 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ