AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನ ಎಸಿ ಕೋಚ್​ನಲ್ಲಿ ಮಹಿಳೆಯ ಚಿನ್ನದ ಸರ, ನಗದು ಕದ್ದ ಕಳ್ಳ, ಚೈನ್ ಎಳೆದರೂ ಸಹಾಯಕ್ಕೆ ಬರದ ಸಿಬ್ಬಂದಿ ವಿರುದ್ಧ ಆಕ್ರೋಶ

ಲಕ್ನೋದಲ್ಲಿ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಆಭರಣ ಹಾಗೂ ನಗದು ಕಳುವಾಗಿದೆ. ಸುಮಾರು 2.75 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ತುರ್ತು ಚೈನ್ ಎಳೆದರೂ ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಬಂದಿಲ್ಲ. ಈ ಘಟನೆ ರೈಲು ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ರೈಲ್ವೆ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ರೈಲಿನ ಎಸಿ ಕೋಚ್​ನಲ್ಲಿ ಮಹಿಳೆಯ ಚಿನ್ನದ ಸರ, ನಗದು ಕದ್ದ ಕಳ್ಳ, ಚೈನ್ ಎಳೆದರೂ ಸಹಾಯಕ್ಕೆ ಬರದ ಸಿಬ್ಬಂದಿ ವಿರುದ್ಧ ಆಕ್ರೋಶ
ಮಹಿಳೆ
ನಯನಾ ರಾಜೀವ್
|

Updated on: Nov 04, 2026 | 3:02 PM

Share

ಲಕ್ನೋ, ನವೆಂಬರ್ 04: ರೈಲಿನಲ್ಲಿ ಎಸಿ ಟಿಕೆಟ್ ಬುಕ್ ಮಾಡಿದರೆ ಸುರಕ್ಷಿತವಾಗಿ ಪ್ರಯಾಣಿಸಬಹುದು ಎಂಬ ನಂಬಿಕೆ ಈಗ ಹುಸಿಯಾಗಿದೆ. ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಒಡವೆ ಹಾಗೂ ನಗದು ಕಳ್ಳತನವಾಗಿದೆ. ಸುಮಾರು 2.5 ಲಕ್ಷ ರೂ. ರೂ ಮೌಲ್ಯದ ಆಭರಣ ಮತ್ತು 25 ಸಾವಿರ ರೂ. ನಗದು ಕಳುವಾಗಿದ್ದು, ರೈಲಿನ ತುರ್ತು ಚೈನ್ ಎಳೆದರೂ ಯಾವ ಸಿಬ್ಬಂದಿಯೂ ನೆರವಿಗೆ ಬಂದಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ರೈಲಿನಲ್ಲಿ ಪ್ರಯಾಣಿಕರ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ. ಮಗುವಿನೊಂದಿಗೆ ಆನಂದ್ ವಿಹಾರ್ ಟರ್ಮಿನಲ್‌ನಿಂದ ನ್ಯೂ ಜಲ್ಪೈಗುರಿಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಲಕ್ನೋ ರೈಲು ನಿಲ್ದಾಣದಲ್ಲಿ ಕಳ್ಳತನಕ್ಕೆ ಒಳಗಾಗಿದ್ದಾರೆ. ಅವರ ಫಸ್ಟ್ ಎಸಿ ಕೂಪ್‌ನಲ್ಲಿದ್ದ ಸುಮಾರು 2.5 ಲಕ್ಷ ರೂ. ಮೌಲ್ಯದ ಆಭರಣಗಳು ಮತ್ತು 25 ಸಾವಿರ ರೂ. ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಮಹಿಳೆ ಕಣ್ಣೀರಿಡುತ್ತಾ ರೈಲ್ವೆ ಭದ್ರತಾ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲಾಕ್ ಆಗಿದ್ದ ಫಸ್ಟ್ ಎಸಿ ಕೋಚ್​ನಲ್ಲಿ ಕಳ್ಳತನ

ಈ ಘಟನೆ ರೈಲು ಸಂಖ್ಯೆ 15726ರ ಆನಂದ್ ವಿಹಾರ್ ಟರ್ಮಿನಲ್–ನ್ಯೂ ಜಲ್ಪೈಗುರಿ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ ಎನ್ನಲಾಗಿದೆ. ಮಹಿಳೆ ತನ್ನ ಮಗುವಿನೊಂದಿಗೆ ಫಸ್ಟ್ ಎಸಿ ಕೂಪ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಲಕ್ನೋ ನಿಲ್ದಾಣದಲ್ಲಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಲಾಕ್ ಆಗಿದ್ದ ಕೋಚ್​ಗೆ ಪ್ರವೇಶಿಸಿ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಕಳುವಾದ ವಸ್ತುಗಳಲ್ಲಿ ಸುಮಾರು 2.5 ಲಕ್ಷ ರೂ. ಮೌಲ್ಯದ ಆಭರಣಗಳು ಮತ್ತು 25 ಸಾವಿರ ರೂ. ನಗದು ಸೇರಿವೆ. ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ನಡೆದ ಈ ಘಟನೆ ಮಹಿಳೆಯನ್ನು ತೀವ್ರ ಆತಂಕಕ್ಕೆ ದೂಡಿದೆ.

ಪೋಸ್ಟ್

ನಾಲ್ಕು ಬಾರಿ ಚೈನ್ ಎಳೆದರೂ ಸಹಾಯ ಸಿಗಲಿಲ್ಲವೇ?

ಕಳ್ಳತನ ನಡೆದಿರುವುದನ್ನು ಗಮನಿಸಿದ ಮಹಿಳೆ ರೈಲಿನ ತುರ್ತು ಸರಪಳಿಯನ್ನು ನಾಲ್ಕು ಬಾರಿ ಎಳೆದು ಸಹಾಯ ಪಡೆಯಲು ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ. ಆದರೆ ರೈಲ್ವೆ ಸಿಬ್ಬಂದಿ ಅಥವಾ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ತಕ್ಷಣ ನೆರವಿಗೆ ಬರಲಿಲ್ಲ ಎಂಬುದು ಅವರ ಆರೋಪ. “ನಾನು ಸರಪಳಿ ಎಳೆದರೂ ಯಾವುದೇ ಪೊಲೀಸ್ ಅಧಿಕಾರಿ ಸಹಾಯಕ್ಕೆ ಬರಲಿಲ್ಲ. ನನ್ನ ಮನವಿಗೆ ಯಾರೂ ಸ್ಪಂದಿಸುತ್ತಿಲ್ಲ. ನಾನೀಗ ಏನು ಮಾಡಬೇಕು?” ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಗುವಿನ ಸುರಕ್ಷತೆಯೇ ದೊಡ್ಡ ಆತಂಕ

ಕಳುವಾದ ಹಣ ಮತ್ತು ಆಭರಣಗಳಿಗಿಂತಲೂ ಮಗುವಿನ ಸುರಕ್ಷತೆಯ ಬಗ್ಗೆ ಮಹಿಳೆ ಹೆಚ್ಚು ಆತಂಕ ವ್ಯಕ್ತಪಡಿಸಿದ್ದಾರೆ. “ನನ್ನ ಮಗು ಸುರಕ್ಷಿತವಾಗಿದೆ ಎಂಬುದೇ ಸಮಾಧಾನದ ಸಂಗತಿ. ಆದರೆ ಲಾಕ್ ಮಾಡಿರುವ ಫಸ್ಟ್ ಎಸಿ ಕೋಚ್ ಕೂಡ ಸುರಕ್ಷಿತವಲ್ಲ ಎಂದಾದರೆ ಪ್ರಯಾಣಿಕರು ಯಾರನ್ನು ನಂಬಬೇಕು?” ಎಂಬ ಅರ್ಥದಲ್ಲಿ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಪ್ಪು ಸಣ್ಣದಿರಲಿ, ದೊಡ್ಡದಿರಲಿ ತಪ್ಪು ತಪ್ಪೇ; ಆನೆಗಳ Ai ವೀಡಿಯೊ ಮೂಲಕ ಯುಪಿ ಪೊಲೀಸರ ಜಾಗೃತಿ

ಆರ್ಪಿಎಫ್​ ಮತ್ತು ಜಿಆರ್​ಪಿಗೆ ಉತ್ತರ ನೀಡುವಂತೆ ರೈಲ್ವೆ ಸೂಚನೆ

ವಿಡಿಯೊ ಗಮನಕ್ಕೆ ಬಂದ ಬೆನ್ನಲ್ಲೇ ಉತ್ತರ ರೈಲ್ವೆಯ ಲಕ್ನೋ ವಿಭಾಗ ಪ್ರತಿಕ್ರಿಯಿಸಿದೆ. ಈ ಸಂಬಂಧ ರೈಲ್ವೆ ರಕ್ಷಣಾ ಪಡೆ (RPF) ಮತ್ತು ಉತ್ತರ ಪ್ರದೇಶ ಸರ್ಕಾರಿ ರೈಲ್ವೆ ಪೊಲೀಸ್ (GRP) ವಿಭಾಗಗಳನ್ನು ಟ್ಯಾಗ್ ಮಾಡಿ, ಪ್ರಕರಣವನ್ನು ಪರಿಶೀಲಿಸುವಂತೆ ಸೂಚಿಸಿದೆ. ಪ್ರಯಾಣಿಕರ ದೂರಿನ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಕಳ್ಳತನದಲ್ಲಿ ಭಾಗಿಯಾಗಿರುವವರು ಯಾರು ಮತ್ತು ಲಾಕ್ ಆಗಿದ್ದ ಕೂಪ್‌ಗೆ ಪ್ರವೇಶಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ರೈಲು ಪ್ರಯಾಣಿಕರ ಸುರಕ್ಷತೆ ಬಗ್ಗೆ ಚರ್ಚೆ

ಫಸ್ಟ್ ಎಸಿ ಕೋಚ್‌ನಲ್ಲಿ ಹೆಚ್ಚಿನ ಹಣ ನೀಡಿ ಪ್ರಯಾಣಿಸುವವರು ಹೆಚ್ಚಿನ ಸುರಕ್ಷತೆಯನ್ನು ನಿರೀಕ್ಷಿಸುತ್ತಾರೆ. ಆದರೆ ಇಂತಹ ಘಟನೆಗಳು ರೈಲ್ವೆಯ ಭದ್ರತಾ ವ್ಯವಸ್ಥೆಯ ಬಗ್ಗೆ ಆತಂಕ ಮೂಡಿಸುತ್ತವೆ. ವಿಶೇಷವಾಗಿ ಒಬ್ಬರೇ ಅಥವಾ ಮಕ್ಕಳೊಂದಿಗೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್