ಸಿಕಂದರಾಬಾದ್-ಅಗರ್ತಲಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಒಡಿಶಾದ ಬೆಹ್ರಾಂಪುರದಲ್ಲಿ ಘಟನೆ

|

Updated on: Jun 06, 2023 | 3:40 PM

Secunderabad-Agartala Express Train: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದೆ.

ಸಿಕಂದರಾಬಾದ್-ಅಗರ್ತಲಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಒಡಿಶಾದ ಬೆಹ್ರಾಂಪುರದಲ್ಲಿ ಘಟನೆ
ರೈಲು
Image Credit source: India Today
Follow us on

ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದೆ. ಹೊಗೆ ಪತ್ತೆಯಾದ ನಂತರ ಜನರನ್ನು ಒಡಿಶಾದ ಬೆರ್ಹಾಂಪುರ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲಾಯಿತು.
ರೈಲಿನ ಬಿ-5 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆರ್ಹಾಂಪುರ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ಎಸಿ ಕೋಚ್‌ನಿಂದ ಹೊಗೆ ಬರುತ್ತಿರುವುದನ್ನು ಪ್ರಯಾಣಿಕರು ಗಮನಿಸಿದ್ದಾರೆ.

ರೈಲ್ವೇ ಅಧಿಕಾರಿಗಳು ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ನೀಡಿದ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. 45 ನಿಮಿಷಗಳ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಬೆಂಕಿ ನಂದಿಸಿದ ನಂತರ ರೈಲು ನಿಲ್ದಾಣದಿಂದ ಹೊರಟಿತು.

ರೈಲಿನ ಎಸಿ ಕೋಚ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಹೇಳಲಾಗಿದೆ.   ಜೂನ್​ 2ರಂದು ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 278 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 3 ದಿನಗಳು ಕಳೆದಿವೆ, ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ.

ಮತ್ತಷ್ಟು ಓದಿ: Odisha Train Accident: ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ, ಶವಾಗಾರದಲ್ಲಿ ಸಂಬಂಧಿಕರ ನರಳಾಟ

ಆಸ್ಪತ್ರೆಯ ಶವಾಗಾರಗಳು ತುಂಬಿವೆ ಹೀಗಾಗಿ ಬಾಸೋರ್​ನ ಶಾಲೆಯೊಂದನ್ನು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ 275 ಮಂದಿ ಮೃತಪಟ್ಟಿದ್ದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನೂ 101 ಮೃತದೇಹಗಳನ್ನು ಗುರುತಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆಲವು ದೇಹಗಳು ನಜ್ಜುಗುಜ್ಜಾಗಿದೆ, ಇನ್ನೂ ಕೆಲವರ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. 55 ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. 1929. ಮೃತ ದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:33 pm, Tue, 6 June 23